For Quick Alerts
ALLOW NOTIFICATIONS  
For Daily Alerts
 

IPL 2024: ತವರಿಗೆ ತೆರಳಿದ ದಕ್ಷಿಣ ಆಫ್ರಿಕಾ ವೇಗಿ; ಪಂಜಾಬ್‌ ಕಿಂಗ್ಸ್‌ಗೆ ಹಿನ್ನಡೆ

ಮೇ 15 ಬುಧವಾರ; 2024ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ಹಿನ್ನೆಲ್ಲೇ ಪ್ರಸ್ತುತ ನಡೆಯುತ್ತಿರುವ ಇಂಡಿಯನ್‌ ಪ್ರೀಮಿಯರ್ ಲೀಗ್‌ (ಐಪಿಎಲ್‌)ನಿಂದ ಸಾಗರೋತ್ತರದ ಆಟಗಾರರು ತಮ್ಮ ತಮ್ಮ ದೇಶಗಳಿಗೆ ಮರಳುವ ಅಭಿಯಾನ ಶುರು ಮಾಡಿದ್ದಾರೆ.

ಈಗಾಗಲೇ ಇಂಗ್ಲೆಂಡ್‌ ಆಟಗಾರರು ಐಪಿಎಲ್‌ನಿಂದ ದೂರ ಸರಿದಿದ್ದಾರೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಸ್ಪೋಟಕ ಬ್ಯಾಟರ್‌ ವಿಲ್‌ ಜ್ಯಾಕ್ಸ್ ಮತ್ತು ರೀಸ್ ಟೋಪ್ಲಿ, ರಾಜಸ್ಥಾನ ರಾಯಲ್ಸ್‌ನ ಜೋಸ್‌ ಬಟ್ಲರ್‌ ಹಾಗು ಪಂಜಾಬ್ ಕಿಂಗ್ಸ್‌‌ ತಂಡದ ಲಿಯಾಮ್ ಲಿವಿಂಗ್‌ಸ್ಟೋನ್ ಚುಟುಕು ಕ್ರಿಕೆಟ್‌ ಸಮರಕ್ಕೆ ಸಿದ್ಧತೆ ನಡೆಸಲು ತವರಿಗೆ ವಾಪಸ್‌ ಆಗಿದ್ದಾರೆ.

IPL 2024 Kagiso Rabada has left for South Africa

ಇದೀಗಾ ಪಂಜಾಬ್‌ ಕಿಂಗ್ಸ್‌ ತಂಡದ ಮತ್ತೊಬ್ಬ ವೇಗದ ಬೌಲರ್‌ ಕಗಿಸೋ ರಬಾಡ ಅವರು ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದಾರೆ. ಹೀಗಾಗಿ ಪಂಜಾಬ್‌ ತಂಡದ ಉಳಿದ ಎರಡು ಪಂದ್ಯಗಳಿಂದ ಸಂಪೂರ್ಣವಾಗಿ ಕಗಿಸೋ ರಬಾಡ ಹೊರಗುಳಿದಿದ್ದಾರೆ.

ಪಂಜಾಬ್ ಮೇ 15 ರಂದು ಗುವಾಹಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹಾಗು ಮೇ 19 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎರಡನೇ ಪಂದ್ಯವನ್ನು ಆಡಲಿದೆ. ಈ ಎರಡೂ ಪಂದ್ಯಗಳಲ್ಲಿ ರಬಾಡ ಆಡುತ್ತಿಲ್ಲ.

ರಬಾಡಾ ತಂಡದಿಂದ ಹೊರಗುಳಿಯಲು ಸೋಂಕು ಕಾರಣ ಎಂದು ಹೇಳಲಾಗುತ್ತಿದ್ದು, ಚಿಕಿತ್ಸೆಗಾಗಿ ಅವರು ತಮ್ಮ ದೇಶಕ್ಕೆ ತೆರಳಿದ್ದಾರೆ. ಈ ಬಗ್ಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಮಾಹಿತಿ ನೀಡಿದೆ.

ಪಂಜಾಬ್ ಕಿಂಗ್ಸ್ ಈಗಾಗಲೇ ಐಪಿಎಲ್ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿದೆ. ಈ ಋತುವಿನಲ್ಲಿ ಪಂಜಾಬ್‌ ಪರ ರಬಾಡ ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಒಟ್ಟು 11 ಪಂದ್ಯಗಳಿಂದ 11 ವಿಕೆಟ್‌ಗಳನ್ನು ಪಡೆದಿದ್ದಾರೆ.

ಚೋಕರ್ಸ್‌ ಹಣೆಪಟ್ಟಿ ಕಳಚುವುದೇ ಸೌತ್‌ ಆಫ್ರಿಕಾ

ಈ ಬಾರಿ ಟಿ20 ವಿಶ್ವಕಪ್‌ನಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಐಡಿನ್‌ ಮಾರ್ಕ್ರಾಮ್‌ ಮುನ್ನೆಡೆಸಲಿದ್ದಾರೆ. ಜೂನ್ 3 ರಂದು ನ್ಯೂಯಾರ್ಕ್‌ನಲ್ಲಿ ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.

ಒಂದು ಬಾರಿಯೂ ಯಾವುದೇ ಐಸಿಸಿ ಪ್ರಶಸ್ತಿ ಗೆಲ್ಲದ ದಕ್ಷಿಣ ಆಫ್ರಿಕಾ ತಂಡಕ್ಕೆ ಚೋಕರ್ಸ್‌ ಎಂಬ ಹಣೆ ಪಟ್ಟಿ ಇದೆ. ಹೀಗಾಗಿ 2024ರ ಟಿ20 ವಿಶ್ವಕಪ್‌ನಲ್ಲಿ ಹೊಸ ದಕ್ಷಿಣ ಆಫ್ರಿಕಾ ತಂಡ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ.

ದಕ್ಷಿಣ ಆಫ್ರಿಕಾ ತಂಡ : ಐಡಿನ್‌ ಮಾರ್ಕ್ರಾಮ್‌ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫೋರ್ಚುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್ (ವಿ.ಕೀ), ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಅನ್ರಿಚ್ ನಾರ್ಟ್ಜೆ, ಕಗಿಸೊ ರಬಾಡ, ರಿಯಾನ್ ರಿಜೆಲ್‌ಟನ್, ಟ್ಯಾಬ್ರಾಡ್ ಟ್ರಿಸ್ಟಾನ್ ಸ್ಟಬ್ಸ್.

Story first published: Wednesday, May 15, 2024, 19:35 [IST]
Other articles published on May 15, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+