ಭಾನುವಾರ, ಏಪ್ರಿಲ್ 21ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 36ನೇ ರೋಚಕ ಪಂದ್ಯದಲ್ಲಿ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ರವಾಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
ಇದೇ ಐಪಿಎಲ್ 2024ರಲ್ಲಿ ಉಭಯ ತಂಡಗಳು ಮುಖಾಮುಖಿಯಾದಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 7 ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು. ಇದೀಗ ಹಿಂದಿನ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಆರ್‌ಸಿಬಿ ಎದುರು ನೋಡುತ್ತಿದೆ.

ಕೆಕೆಆರ್ ತಂಡ ಐಪಿಎಲ್ 2024ರಲ್ಲಿ ಆಡಿದ 6 ಪಂದ್ಯಗಳಲ್ಲಿ 4 ಗೆಲುವು ಮತ್ತು 2 ಸೋಲು ಕಂಡಿದ್ದು, 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಇನ್ನು ಆರ್‌ಸಿಬಿ ತಂಡ ಆಡಿದ 7 ಪಂದ್ಯಗಳಲ್ಲಿ 6 ಸೋಲು ಮತ್ತು 1 ಗೆಲುವು ಸಾಧಿಸಿದ್ದು, ಕೇವಲ 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಐಪಿಎಲ್ ಇತಿಹಾಸದಲ್ಲಿ ಈವರೆಗೆ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪರಸ್ಪರ 34 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಕೆಕೆಆರ್ 20 ಗೆಲುವುಗಳೊಂದಿಗೆ ಮುನ್ನಡೆ ಸಾಧಿಸಿದ್ದರೆ, ಆರ್‌ಸಿಬಿ 14 ಗೆಲುವುಗಳೊಂದಿಗೆ ಹಿನ್ನಡೆ ಅನುಭವಿಸಿದೆ.

ಮತ್ತೊಂದೆಡೆ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳಲು ಮತ್ತು ಪಂದ್ಯಾವಳಿಯಲ್ಲಿ ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿಕೊಳ್ಳಲು ಉತ್ಸುಕವಾಗಿದೆ.

ಸ್ಥಳ ಮತ್ತು ದಿನಾಂಕ: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಭಾನುವಾರ, ಏಪ್ರಿಲ್ 21ರಂದು ನಡೆಯಲಿದೆ.
ಪಂದ್ಯದ ಸಮಯ: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.
ಐಪಿಎಲ್ 2024ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತದೆ.

ಕೋಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಆಂಗ್‌ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಿಂಕು ಸಿಂಗ್, ಆಂಡ್ರೆ ರಸೆಲ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ಸುಯಶ್ ಶರ್ಮಾ, ವೈಭವ್ ಅರೋರಾ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜ್ಯಾಕ್ಸ್, ರಜತ್ ಪಾಟಿದಾರ್, ಮಹಿಪಾಲ್ ಲೊಮ್ರೋರ್, ಸೌರವ್ ಚೌಹಾಣ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವಿಜಯ್‌ಕುಮಾರ್ ವೈಶಾಕ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್.