For Quick Alerts
ALLOW NOTIFICATIONS  
For Daily Alerts
 

DC vs KKR: ಡೆಲ್ಲಿ ಬೌಲರ್‌ಗಳ ಚಳಿ ಬಿಡಿಸಿದ ಕೋಲ್ಕತ್ತಾ ಬ್ಯಾಟರ್ಸ್; ಐಪಿಎಲ್‌ನ 2ನೇ ಅತ್ಯಧಿಕ ಮೊತ್ತ ದಾಖಲು

ಬುಧವಾರ, ಏಪ್ರಿಲ್ 3ರಂದು ವಿಶಾಖಪಟ್ಟಣದ ಡಾ. ವೈ.ಎಸ್. ರಾಜಶೇಖರ್‌ರೆಡ್ಡಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 16ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 272 ರನ್‌ಗಳ ಬೃಹತ್ ಮೊತ್ತ ದಾಖಲಿಸಿದೆ.

ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್‌ ಇತಿಹಾಸದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 2ನೇ ಅತ್ಯಧಿಕ ಮೊತ್ತವನ್ನು ಕಲೆಹಾಕಿತು. ಇದಕ್ಕೂ ಮುನ್ನ ಇದೇ ಐಪಿಎಲ್ 2024ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಮುಂಬೈ ಇಂಡಿಯನ್ಸ್ 277 ರನ್ ಗಳಿಸಿದ್ದು, ಐಪಿಎಲ್‌ನ ಅತ್ಯಧಿಕ ಮೊತ್ತವಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸುನಿಲ್ ನರೈನ್, ಅಂಗ್‌ಕ್ರಿಶ್ ರಘುವಂಶಿ ಮತ್ತು ಆಂಡ್ರೆ ರಸೆಲ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 272 ರನ್‌ಗನ್ನು ಗಳಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 273 ರನ್‌ಗಳ ಬೃಹತ್ ಗುರಿ ನೀಡಿದೆ.

IPL 2024 Kolkata Knight Riders Scored 2nd highest Runs In IPL Delhi Capitals Need 273 Runs To Win

ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಸುನಿಲ್ ನರೈನ್ ಮತ್ತು ಫಿಲಿಪ್ ಸಾಲ್ಟ್ ಭರ್ಜರಿ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 4.3 ಓವರ್‌ಗಳಲ್ಲಿ 60 ರನ್‌ಗಳ ಜೊತೆಯಾಟ ನೀಡಿದರು. ಫಿಲಿಪ್ ಸಾಲ್ಟ್ 12 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನಿಂದ 18 ರನ್ ಗಳಿಸಿ ಔಟಾದರು.

IPL 2024 Kolkata Knight Riders Scored 2nd highest Runs In IPL Delhi Capitals Need 273 Runs To Win

ನಂತರ ಕ್ರೀಸ್‌ಗೆ ಬಂದ ಅಂಗ್‌ಕ್ರಿಶ್ ರಘುವಂಶಿ ಕೂಡ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರು ಮತ್ತು ಕೇವಲ 27 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಮೇತ 54 ರನ್ ಬಾರಿಸಿದರು. ಇನ್ನು ಆರಂಭಿಕ ಸುನಿಲ್ ನರೈನ್ ಮತ್ತೊಮ್ಮೆ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ, 39 ಎಸೆತಗಳಲ್ಲಿ 7 ಬೌಂಡರಿ ಹಾಗೂ 7 ಸಿಕ್ಸರ್‌ಗಳ ಮೂಲಕ 85 ರನ್ ಸಿಡಿಸಿದರು.

ಬಳಿಕ ಬಂದ ಆಂಡ್ರೆ ರಸೆಲ್ ಎಂದಿನಂತೆ ತಮ್ಮ ಅಬ್ಬರದ ಬ್ಯಾಟಿಂಗ್ ಮುಂದುವರೆಸಿದರು ಮತ್ತು 19 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 41 ರನ್ ಗಳಿಸಿ ಕೊನೆಯ ಓವರ್‌ನಲ್ಲಿ ಔಟಾದರು. ನಾಯಕ ಶ್ರೇಯಸ್ ಅಯ್ಯರ್ 11 ಎಸೆತಗಳಲ್ಲಿ 2 ಸಿಕ್ಸರ್‌ಗಳ ಮೂಲಕ 18 ರನ್ ಗಳಿಸಿದರು.

ಇನ್ನು ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ 8 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 26 ರನ್ ಗಳಿಸಿದರು. ಉಳಿದಂತೆ ವೆಂಕಟೇಶ್ ಅಯ್ಯರ್ 5 ರನ್ ಮತ್ತು ರಮಣದೀಪ್ ಸಿಂಗ್ 2 ರನ್ ಗಳಿಸಿದರು.

IPL 2024 Kolkata Knight Riders Scored 2nd highest Runs In IPL Delhi Capitals Need 273 Runs To Win

ಇನ್ನು ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಎಲ್ಲ ಬೌಲರ್‌ಗಳು ದುಬಾರಿಯಾದರು. ಅನ್ರಿಚ್ ನಾರ್ಟ್ಜೆ 4 ಓವರ್‌ಗಳಲ್ಲಿ 59 ರನ್ ನೀಡಿ 3 ವಿಕೆಟ್ ಪಡೆದರೆ, ಇಶಾಂತ್ ಶರ್ಮಾ 3 ಓವರ್‌ಗಳಲ್ಲಿ 43 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಖಲೀಲ್ ಅಹ್ಮದ್ ಮತ್ತು ಮಿಚೆಲ್ ಮಾರ್ಷ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Wednesday, April 3, 2024, 21:36 [IST]
Other articles published on Apr 3, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+