LSG vs KKR IPL 2024: ಮತ್ತೆ ಅಬ್ಬರಿಸಿದ ಫಿಲ್ ಸಾಲ್ಟ್, ಸುನಿಲ್ ನರೈನ್; ಲಕ್ನೋಗೆ ಬೃಹತ್ ಗುರಿ ನೀಡಿದ ಕೆಕೆಆರ್
ಭಾನುವಾರ, ಮೇ 5ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 54ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ ಪ್ರವಾಸಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡ ಬೃಹತ್ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸುನಿಲ್ ನರೈನ್ ಅವರ ಸ್ಫೋಟಕ ಅರ್ಧಶತಕ ಮತ್ತು ಫಿಲಿಪ್ ಸಾಲ್ಟ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿದ್ದು, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 236 ರನ್‌ಗಳ ಗುರಿ ನೀಡಿದೆ.

ಕೆಕೆಆರ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಫಿಲಿಪ್ ಸಾಲ್ಟ್ ಮತ್ತು ಸುನಿಲ್ ನರೈನ್ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 4.2 ಓವರ್‌ಗಳಲ್ಲಿ 61 ರನ್‌ಗಳ ಜೊತೆಯಾಟ ನಿರ್ಮಿಸಿತು. ಈ ವೇಳೆ 14 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 32 ರನ್ ಗಳಿಸಿ ಔಟಾದರು.
ನಂತರ ಬಂದ ಆಂಗ್‌ಕ್ರಿಶ್ ರಘುವಂಶಿ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 32 ರನ್ ಗಳಿಸಿದರು ಮತ್ತು ಸುನಿಲ್ ನರೈನ್ ಜೊತೆಗೂಡಿ ಎರಡನೇ ವಿಕೆಟ್‌ಗೆ 106 ರನ್‌ಗಳ ಜೊತೆಯಾಟ ಸೇರಿಸಿದರು. ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದು ಕ್ರೀಸ್‌ಗೆ ಬಂದ ಆಂಡ್ರೆ ರಸೆಲ್ 8 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಆರಂಭಿಕ ಬ್ಯಾಟರ್ ಸುನಿಲ್ ನರೈನ್ 39 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 7 ಸಿಕ್ಸರ್‌ಗಳ ನೆರವಿನಿಂದ 81 ರನ್‌ಗಳ ಅರ್ಧಶತಕ ಬಾರಿಸಿ ಔಟಾದರು.
ನಂತರ ಬಂದ ರಿಂಕು ಸಿಂಗ್ 11 ಎಸೆತಗಳಲ್ಲಿ 2 ಬೌಂಡರಿ ಸಹಾಯದಿಂದ 16 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 15 ಎಸೆತಗಳಲ್ಲಿ 3 ರನ್ ನೀಡಿ 23 ರನ್ ಗಳಿಸಿದರೆ, ರಮಣ್‌ದೀಪ್ ಸಿಂಗ್ ಕೇವಲ 6 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ ಅಜೇಯ 25 ರನ್ ಬಾರಿಸಿದರೆ, ವೆಂಕಟೇಶ್ ಅಯ್ಯರ್ 1 ರನ್ ಗಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ನವೀನ್-ಉಲ್-ಹಕ್ 4 ಓವರ್‌ಗಳಲ್ಲಿ 49 ರನ್ ನೀಡಿ 3 ವಿಕೆಟ್ ಪಡೆದರೆ, ರವಿ ಬಿಷ್ಣೋಯಿ, ಯಶ್ ಠಾಕೂರ್ ಮತ್ತು ಯುಧ್‌ವೀರ್ ಸಿಂಗ್ ಚಾರಕ್ ತಲಾ ಒಂದೊಂದು ವಿಕೆಟ್ ಕಿತ್ತರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications