LSG vs MI: ಸೋಲಿನ ಗಾಯದ ಮೇಲೆ ಇಡೀ ಮುಂಬೈ ಇಂಡಿಯನ್ಸ್ ತಂಡಕ್ಕೆ ದಂಡದ ಬರೆ!
ಮಂಗಳವಾರ, ಏಪ್ರಿಲ್ 30ರಂದು ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 48ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ವೇಳೆ ನಿಧಾನಗತಿ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ಬರೋಬ್ಬರಿ 24 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಅಲ್ಲದೆ, ಮುಂಬೈ ಇಂಡಿಯನ್ಸ್ ತಂಡದ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಆಡುವ 11ರ ಇತರ ಆಟಗಾರರಿಗೆ ತಲಾ 6 ಲಕ್ಷ ರೂಪಾಯಿ ಅಥವಾ ಅವರ ಪಂದ್ಯ ಶುಲ್ಕದ ಶೇ.25ರಷ್ಟು ದಂಡ ವಿಧಿಸಲಾಯಿತು.
ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಐಪಿಎಲ್ 2024ರಲ್ಲಿ ಆಡಿದ 10 ಪಂದ್ಯಗಳಲ್ಲಿ 6 ಗೆಲುವು ಮತ್ತು 4 ಸೋಲುಗಳ ಮೂಲಕ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.
ಇನ್ನು ಮುಂಬೈ ಇಂಡಿಯನ್ಸ್ ತಂಡ ತನ್ನ ಕಳಪೆ ಪ್ರದರ್ಶನ ಮುಂದುವರೆಸಿದ್ದು, ಸತತ 3ನೇ ಸೋಲಿನ ಬಳಿಕ ಈವರೆಗೆ ಆಡಿದ 10 ಪಂದ್ಯಗಳಲ್ಲಿ 3 ಗೆಲುವು ಮತ್ತು 7 ಸೋಲುಗಳ ಮೂಲಕ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 10ನೇ ಸ್ಥಾನಕ್ಕೆ ಕುಸಿದಿದೆ.

ಈ ಐಪಿಎಲ್ ಆವೃತ್ತಿಯಲ್ಲಿ 2ನೇ ಬಾರಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಮುಂಬೈ ಫ್ರಾಂಚೈಸಿಗೆ ಈ ಬಾರಿ ದೊಡ್ಡ ಶಿಕ್ಷೆ ವಿಧಿಸಲಾಯಿತು. ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ 2ನೇ ಬಾರಿ ದಂಡ ವಿಧಿಸಲಾಗಿದ್ದು, ಈ ಬಾರಿ ಎರಡು ಪಟ್ಟು ಹೆಚ್ಚಾಗಿದೆ. ಈ ಹಿಂದೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ, ನಿಧಾನಗತಿಯ ಓವರ್ ರೇಟ್‌ಗಾಗಿ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು.
ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದ ನಂತರ, ಹಾರ್ದಿಕ್ ಪಾಂಡ್ಯ ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡ ವಿಧಿಸಿದೆ.
"ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 48ನೇ ಪಂದ್ಯದ ವೇಳೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ತಂಡದ ಆಟಗಾರರಿಗೆ ನಿಧಾನಗತಿಯ ಓವರ್-ರೇಟ್ ಕಾಯ್ದುಕೊಂಡಿದ್ದಕ್ಕಾಗಿ ದಂಡ ವಿಧಿಸಲಾಗಿದೆ," ಎಂದು ಬಿಸಿಸಿಐ ತಿಳಿಸಿದೆ.
ನಿಗದಿತ ಸಮಯದೊಳಗೆ ಓವರ್‌ಗಳನ್ನು ಮುಗಿಸಲು ಸಾಧ್ಯವಾಗದ ಕಾರಣ, ನಾಯಕನಷ್ಟೇ ಅಲ್ಲ ಇಡೀ ಮುಂಬೈ ಇಂಡಿಯನ್ಸ್ ತಂಡಕ್ಕೆ ಶಿಕ್ಷೆಯಾಗಿದೆ. ಪಂದ್ಯದಲ್ಲಿ ಭಾಗವಹಿಸಿದ ಮುಂಬೈ ಇಂಡಿಯನ್ಸ್ ಆಟಗಾರರ ಮೇಲಿನ ದಂಡವನ್ನು ಬಿಸಿಸಿಐ ಉಲ್ಲೇಖಿಸಿದೆ.
"ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಮುಂಬೈ ಇಂಡಿಯನ್ಸ್ ತಂಡದ ಎರಡನೇ ಅಪರಾಧವಾಗಿರುವುದರಿಂದ, ನಾಯಕ ಹಾರ್ದಿಕ್ ಪಾಂಡ್ಯಗೆ 24 ಲಕ್ಷ ರೂಪಾಯಿ ದಂಡ ವಿಧಿಸಲಾಯಿತು. ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಆಡುವ 11ರ ಬಳಗದ ಉಳಿದ ಸದಸ್ಯರಿಗೆ ವೈಯಕ್ತಿಕವಾಗಿ 6 ಲಕ್ಷ ರೂಪಾಯಿ ಅಥವಾ ಅವರ ಪಂದ್ಯ ಶುಲ್ಕದ ಶೇ.25ರಷ್ಟು ದಂಡವನ್ನು ವಿಧಿಸಲಾಗಿದೆ," ಎಂದು ಬಿಸಿಸಿಐ ತಿಳಿಸಿದೆ.
ಮುಂಬೈ ಇಂಡಿಯನ್ಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮೇ 3ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಎದುರಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications