For Quick Alerts
ALLOW NOTIFICATIONS  
For Daily Alerts
 

MSK Prasad: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಸೇರಿದ ಬಿಸಿಸಿಐ ಆಯ್ಕೆ ಸಮಿತಿ ಮಾಜಿ ಅಧ್ಯಕ್ಷ; ಯಾವ ಹುದ್ದೆ?

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಗುರುವಾರ, ಆಗಸ್ಟ್ 17ರಂದು ಭಾರತದ ಮಾಜಿ ವಿಕೆಟ್ ಕೀಪರ್ ಎಂಎಸ್‌ಕೆ ಪ್ರಸಾದ್ ಅವರನ್ನು ತಮ್ಮ ಕಾರ್ಯತಂತ್ರದ ಸಲಹೆಗಾರರಾಗಿ ನೇಮಕ ಮಾಡಿದೆ.

ಬಿಸಿಸಿಐ ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷರಾಗಿರುವ ಎಂಎಸ್‌ಕೆ ಪ್ರಸಾದ್ ಅವರು ಎಲ್‌ಎಸ್‌ಜಿ ತಂಡಕ್ಕೆ ಅಗತ್ಯ ಮಾರ್ಗದರ್ಶನ ಒದಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದು ಫ್ರಾಂಚೈಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

IPL 2024: MSK Prasad Appointed As Strategic Advisor For Lucknow Supergiants Franchise

ಮಾಜಿ ಕ್ರಿಕೆಟಿಗ ಎಂಎಸ್‌ಕೆ ಪ್ರಸಾದ್ ಅವರು ಟ್ಯಾಲೆಂಟ್ ಸರ್ಚ್ ಮತ್ತು ಟ್ಯಾಲೆಂಟ್ ಡೆವಲಪ್‌ಮೆಂಟ್ ಮುಖ್ಯಸ್ಥರಾಗಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಗೆ ಸಹಾಯ ಮಾಡಲಿದ್ದಾರೆ ಎಂದು ಹೇಳಿದೆ.

ಈ ಮೊದಲು ಎಲ್‌ಎಸ್‌ಜಿ ತಂಡದ ಮುಖ್ಯ ಆಗಿದ್ದ ಆಂಡಿ ಫ್ಲವರ್ ಅವರು 2024ರ ಐಪಿಎಲ್ ಪಂದ್ಯಾವಳಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕೋಚ್ ಆಗಿ ನೇಮಕವಾದರು.

ಬಳಿಕ ಜಸ್ಟಿನ್ ಲ್ಯಾಂಗರ್ ಅವರನ್ನು ಮುಖ್ಯ ಕೋಚ್ ಆಗಿ ಫ್ರಾಂಚೈಸಿ ನೇಮಕ ಮಾಡಿದ ನಂತರ, ಇದೀಗ ಲಕ್ನೋ ಸೂಪರ್ ಜೈಂಟ್ಸ್‌ನ ಮತ್ತೊಂದು ಹೊಸ ನೇಮಕಾತಿಯಾಗಿದೆ.

IPL 2024: MSK Prasad Appointed As Strategic Advisor For Lucknow Supergiants Franchise

ಎಂಎಸ್‌ಕೆ ಪ್ರಸಾದ್ ಅವರು ಭಾರತ ಪುರುಷರ ಕ್ರಿಕೆಟ್ ತಂಡದ ಮುಖ್ಯ ಆಯ್ಕೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಭಾರತ ತಂಡ 2018-19 ಮತ್ತು 2020-21ರಲ್ಲಿ ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆಲುವು ಸಾಧಿಸಿದಾಗ ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದರು. ಈ ವೇಳೆ ಜಸ್ಟಿನ್ ಲ್ಯಾಂಗರ್ ಅವರು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿದ್ದರು ಎಂಬುದು ಗಮನಾರ್ಹ.

"ಎಂಎಸ್‌ಕೆ ಪ್ರಸಾದ್ ಅವರು ತಮ್ಮೊಂದಿಗೆ ಅಗಾಧ ಅನುಭವದ ಸಂಪತ್ತು ಮತ್ತು ಕ್ರಿಕೆಟ್ ಕಾರ್ಯಾಚರಣೆಗಳಲ್ಲಿ ಅದ್ಭುತ ದಾಖಲೆಯನ್ನು ತರಲಿದ್ದಾರೆ. ತಮ್ಮ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ರಂಗಗಳಲ್ಲಿ ಗಮನಾರ್ಹ ಸಾಧನೆಗಳಿಂದ ಪ್ರೇರೇಪಿಸಿದ್ದಾರೆ".

"ಪ್ರಸಾದ್ ಅವರ ಪ್ರಯಾಣವು ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುವುದರಿಂದ ಹಿಡಿದು, ಪ್ರಮುಖ ಕ್ರಿಕೆಟ್ ಅಸೋಸಿಯೇಷನ್‌ಗಳ ಕಾರ್ಯನಿರ್ವಹಣೆಯವರೆಗೂ ವ್ಯಾಪಿಸಿರುವ ಹಲವು ಸಾಧನೆಗಳಿಂದ ಗುರುತಿಸಲ್ಪಟ್ಟಿದೆ. ಇವೆಲ್ಲವೂ ನಮ್ಮ ಫ್ರಾಂಚೈಸಿಗೆ ಮೌಲ್ಯಯುತವಾದ ಒಳನೋಟ ಮತ್ತು ಅನುಭವವನ್ನು ತರುತ್ತವೆ," ಎಂದು ಲಕ್ನೋ ಸೂಪರ್ ಜೈಂಟ್ಸ್ ಹೇಳಿದೆ.

ಎಂಎಸ್‌ಕೆ ಪ್ರಸಾದ್ ಅವರು ಆಂಧ್ರಪ್ರದೇಶ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಆ ಸಂದರ್ಭದಲ್ಲಿ ಅವರು ಆಂಧ್ರಪ್ರದೇಶದ 13 ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೋಚಿಂಗ್ ಸೌಲಭ್ಯಗಳನ್ನು ಸ್ಥಾಪಿಸಲು ಶ್ರಮಿಸಿದರು.

ಆಯ್ಕೆ ಸಮಿತಿ ಮಾಜಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ಅವರು 1999 ಮತ್ತು 2001ರ ನಡುವೆ ಭಾರತ ತಂಡಕ್ಕಾಗಿ 6 ​​ಟೆಸ್ಟ್ ಮತ್ತು 17 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅಲ್ಲದೆ, ಪ್ರಸಾದ್ ಅವರು ಒಟ್ಟು 96 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 4000ಕ್ಕೂ ಅಧಿಕ ರನ್ ಬಾರಿಸಿದ್ದಾರೆ.

Story first published: Thursday, August 17, 2023, 21:09 [IST]
Other articles published on Aug 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+