For Quick Alerts
ALLOW NOTIFICATIONS  
For Daily Alerts
 

IPL 2024: ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಫೈಟ್; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ

ಸೋಮವಾರ, ಏಪ್ರಿಲ್ 1ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 14ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಐಪಿಎಲ್ 2024ರಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ತವರಿನಲ್ಲಿ ತಮ್ಮ ಮೊದಲ ಪಂದ್ಯವನ್ನು ಆಡುತ್ತಿದ್ದು, ಋತುವಿನ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಇನ್ನು ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವಿನ ಓಟದಲ್ಲಿದ್ದು, ಅದೇ ಲಯವನ್ನು ಉಳಿಸಿಕೊಳ್ಳಲು ಎದುರು ನೋಡುತ್ತಿದೆ.

IPL 2024 Mumbai Indians vs Rajasthan Royals Match Report Probable Playing 11

ಮುಂಬೈ ಇಂಡಿಯನ್ಸ್ ಆಡಿರುವ ಎರಡೂ ಪಂದ್ಯಗಳನ್ನು ಸೋತಿದ್ದು, ಇದು ಐತಿಹಾಸಿಕವಾಗಿ ಆಶ್ಚರ್ಯವೇನಲ್ಲ. ಮುಂಬೈ ಯಾವಾಗಲೂ ನಿಧಾನಗತಿಯ ಆರಂಭಿಕರಾಗಿದ್ದಾರೆ. ಆದಾಗ್ಯೂ, ಹೊಸ ನಾಯಕನ ಅಡಿಯಲ್ಲಿ ಈ ವರ್ಷ ತಂಡ ವಿಭಿನ್ನವಾಗಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಈ ಆವೃತ್ತಿಯಲ್ಲಿ ನೆಲೆ ಸ್ಥಾಪಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು.

ಹಾರ್ದಿಕ್ ಪಾಂಡ್ಯ ಅವರು ಫ್ರಾಂಚೈಸಿಗೆ ಮರಳಿದ ನಂತರ ಮತ್ತು ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಬದಲಾಯಿಸಿದಾಗಿನಿಂದ ಭಾರಿ ಒತ್ತಡದಲ್ಲಿದ್ದಾರೆ. ಒಂದು ಕಡೆ ಅವಳಿ ಸೋಲಿನಿಂದ ಪಂದ್ಯಾವಳಿ ಅರಂಭಿಸಿದ್ದರೆ, ಮತ್ತೊಂದೆಡೆ ಅಭಿಮಾನಿಗಳಿಂದ ಟೀಕೆ ಎದುರಿಸಬೇಕಿದೆ.

IPL 2024 Mumbai Indians vs Rajasthan Royals Match Report Probable Playing 11

ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ 2024ರ ಐಪಿಎಲ್ ಅವೃತ್ತಿಯ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಪ್ಲೇ ಆಫ್ ಭವಿಷ್ಯಕ್ಕಾಗಿ ಗೆಲ್ಲಲೇಬೇಕಿದೆ.

ಮತ್ತೊಂದೆಡೆ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಇಲ್ಲಿಯವರೆಗೆ ಬಹುತೇಕ ಎಲ್ಲಾ ಬಾಕ್ಸ್‌ಗಳನ್ನು ಟಿಕ್ ಮಾಡಿದೆ. ಈ ಎರಡು ತಂಡಗಳು ಇಂದಿನ ಪಂದ್ಯದಲ್ಲಿ ಹೇಗೆ ಪ್ರದರ್ಶನ ನೀಡಲಿವೆ ಎಂಬುದು ಕುತೂಹಲಕಾರಿಯಾಗಿದೆ.

IPL 2024 Mumbai Indians vs Rajasthan Royals Match Report Probable Playing 11

ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯದ ವಿವರ

ಸ್ಥಳ ಮತ್ತು ದಿನಾಂಕ: ಐಪಿಎಲ್ 2024ರ ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯವು ಸೋಮವಾರ, ಏಪ್ರಿಲ್ 1ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಪಂದ್ಯದ ಸಮಯ: ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ಮಾಹಿತಿ

ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ನಡುವಿನ ಹೈ-ವೋಲ್ಟೇಜ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.

ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಸಂಭಾವ್ಯ ಆಡುವ 11ರ ಬಳಗ

ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಜೆರಾಲ್ಡ್ ಕೊಯೆಟ್ಜಿ, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ಕ್ವೆನಾ ಮಫಕಾ.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಸಂದೀಪ್ ಶರ್ಮಾ, ಅವೇಶ್ ಖಾನ್.

Story first published: Monday, April 1, 2024, 10:02 [IST]
Other articles published on Apr 1, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+