IPL 2024: ಪಂಜಾಬ್ ಎದುರು ಡುಬ್ಕಿ ಹೊಡೆದ ಡೆಲ್ಲಿ ಕ್ಯಾಪಿಟಲ್ಸ್
17ನೇ ಆವೃತ್ತಿಯ ಐಪಿಎಲ್‌ನ ಎರಡನೇ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ಗೆಲುವಿನ ಆರಂಭವನ್ನು ಮಾಡಿದೆ. ಪಂಜಾಬ್ ಪರ ಆಲ್‌ರೌಂಡರ್ ಸ್ಯಾಮ್ ಕರನ್ ಸೊಗಸಾದ ಪ್ರದರ್ಶನ ನೀಡಿದ ಬಲದಿಂದ ಕಿಂಗ್ಸ್ 4 ವಿಕೆಟ್ ಜಯ ಸಾಧಿಸಿದೆ.
ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 174 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 19.2 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಸೇರಿಸಿ ಜಯ ಸಾಧಿಸಿತು.

ಡೆಲ್ಲಿ ಉತ್ತಮ ಆರಂಭ
ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡದ ಆರಂಭ ಉತ್ತಮವಾಗಿತ್ತು. ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಜೋಡಿ 20 ಎಸೆತಗಳಲ್ಲಿ 39 ರನ್ ಕಾಣಿಕೆ ನೀಡಿ ತಂಡಕ್ಕೆ ನೆರವಾಯಿತು. ಈ ಜೋಡಿಯನ್ನು ಕಟ್ಟಿ ಹಾಕಲು ಪಂಜಾಬ್ ಅರ್ಷದೀಪ್ ಸಿಂಗ್ ಅವರನ್ನು ಕಣಕ್ಕೆ ಇಳಿಸಿತು. ಇವರು ಸೊಗಸಾದ ದಾಳಿಯನ್ನು ನಿರ್ವಹಿಸಿ ಮಿಚೆಲ್ ಮಾರ್ಷ್‌ಗೆ ಖೆಡ್ಡಾ ತೋಡಿದರು. ಡೇವಿಡ್ ವಾರ್ನರ್ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 29 ರನ್ ಪೇರಿಸಿ ತಂಡಕ್ಕೆ ಆಧಾರವಾದರು.
ಮಧ್ಯಮ ಕ್ರಮಾಂಕದಲ್ಲಿ ಶಾಯ್ ಹೋಪ್ ಬಿರುಸಿನ್ ಬ್ಯಾಟಿಂಗ್ ನಡೆಸಿದರು. ಇವರು 25 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 33 ರನ್ ಸಿಡಿಸಿದರು. 454 ದಿನಗಳ ಬಳಿಕ ಮೈದಾನಕ್ಕೆ ಎಂಟ್ರಿ ಹೊಡೆದ ರಿಷಭ್ ಪಂತ್ ನೈಜ ಬ್ಯಾಟಿಂಗ್ ಮಾಡುವಲ್ಲಿ ಕೊಂಚ ವಿಫಲರಾದರು. ಇವರು 2 ಬೌಂಡರಿ ಸಹಾಯದಿಂದ 18 ರನ್ ಬಾರಿಸಿ ಔಟ್ ಆದರು.
ಕೆಳ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಅವರು ಕೇವಲ 13 ಎಸೆತಗಳಲ್ಲಿ 21 ರನ್ ಸಿಡಿಸಿದರು. ಅಭಿಷೇಕ್ ಪೋರೆಲ್ ಕೇವಲ 10 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 32 ರನ್ ಸಿಡಿಸಿದರು. ಇವರ ಬಿರುಸಿನ ಬ್ಯಾಟಿಂಗ್ ಸಹಾಯದಿಂದ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಮೊತ್ತ ಕಲೆ ಹಾಕಿತು.

ಜವಾಬ್ದಾರಿ ಮರೆತ ಜಾನಿ ಬೇರ್‌ಸ್ಟೋ
ಪಂಜಾಬ್ ಪರ ಆರಂಭಿಕರಾದ ಶಿಖರ್ ಧವನ್ ಹಾಗೂ ಜಾನಿ ಬೇರ್‌ಸ್ಟೋ ಪವರ್ ಪ್ಲೇನಲ್ಲಿ ಪವರ್ ಫುಲ್ ಆಟವನ್ನು ಆಡುವ ಇರಾದೆಯನ್ನು ಹೊಂದಿದ್ದರು. ಆದರೆ ಶಿಖರ್ ಧವನ್ 22 ರನ್ ಬಾರಿಸಿ ಮುನ್ನಗುತ್ತಿದ್ದಾಗ ಇಶಾಂತ್ ಶರ್ಮಾ ತೋಡಿದ ಖೆಡ್ಡಾಗೆ ಬಲಿಯಾದರು. ಜಾನಿ ಬೇರ್‌ಸ್ಟೋ 9 ರನ್‌ಗಳಿಗೆ ಆಟ ಮುಗಿಸಿದರು.
ಪ್ರಭಾಸಿಮ್ರಾನ್ ಸಿಂಗ್ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಧಾರವಾದರು. ಇವರು 17 ಎಸೆತಗಳಲ್ಲಿ 5 ಬೌಂಡರಿ ಸಹಾಯದಿಂದ 26 ರನ್ ಸಿಡಿಸಿದರು.
ಗೆಲುವಿನ ಜೊತೆಯಾಟ
ಮಿಡ್ಲ್ ಆರ್ಡರ್‌ನಲ್ಲಿ ಲಿಯಾಮ್ ಲಿವಿಂಗ್ ಸ್ಟೋನ್ ಹಾಗೂ ಸ್ಯಾಮ್ ಕರನ್ ಸೊಗಸಾದ ಜೊತೆಯಾಟವನ್ನು ನೀಡಿದರು. ಈ ಜೋಡಿ 42 ಎಸೆತಗಳಲ್ಲಿ 67 ರನ್ ಸಿಡಿಸಿದರು. ಸ್ಯಾಮ್ ಕರನ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದರು. ಇವರ ಮನಮೋಹಕ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ, 1 ಸಿಕ್ಸರ್ ಸೇರಿವೆ. ಸ್ಯಾಮ್ 47 ಎಸೆತಗಳಲ್ಲಿ 63 ರನ್ ಸಿಡಿಸಿದರು. ಲಿಯಾಮ್ ಲಿವಿಂಗ್‌ಸ್ಟೋನ್ 21 ಎಸೆತಗಳಲ್ಲಿ 38 ರನ್ ಬಾರಿಸಿ ಗೆಲುವಿನಲ್ಲಿ ಮಿಂಚಿದರು.
ವೇಗದ ಬೌಲರ್ ಖಲೀಲ್ ಅಹ್ಮದ್ 43 ರನ್ ನೀಡಿ 2 ವಿಕೆಟ್ ಕಬಳಿಸಿದರು. ಸ್ಪಿನ್ ಬೌಲರ್ ಕುಲ್ದೀಪ್ ಯಾದವ್ 2 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications