IPL 2024: ಧರ್ಮಶಾಲಾದಲ್ಲಿ ಆರ್‌ಸಿಬಿ ಪ್ಲೇಆಫ್ ಭವಿಷ್ಯ ನಿರ್ಧಾರ; ಪಂಜಾಬ್ ಕಿಂಗ್ಸ್ ವಿರುದ್ಧ ಹೆಡ್-ಟು-ಹೆಡ್ ದಾಖಲೆ
2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಆವೃತ್ತಿಯು ರೋಚಕ ಅಂತ್ಯದತ್ತ ಸಾಗುತ್ತಿದ್ದು, ಕೇವಲ 13 ಲೀಗ್ ಪಂದ್ಯಗಳು ಬಾಕಿ ಉಳಿದಿವೆ.
ಈವರೆಗೆ ಕೇವಲ ಒಂದು ತಂಡವು ಪ್ಲೇಆಫ್ ರೇಸ್‌ನಿಂದ ಹೊರಗುಳಿದಿರುವುದರಿಂದ, ಉಳಿದ ಒಂಬತ್ತು ತಂಡಗಳು ಅಗ್ರ ನಾಲ್ಕು ಸ್ಥಾನಗಳಿಗಾಗಿ ಪೈಪೋಟಿ ನಡೆಸುತ್ತಿವೆ. ಕ್ರಿಕೆಟ್ ಅಭಿಮಾನಿಗಳು ತಮ್ಮ ಉಳಿದ ಪಂದ್ಯಗಳಲ್ಲಿ ರೋಚಕ ಹಣಾಹಣಿಯನ್ನು ನಿರೀಕ್ಷಿಸಬಹುದು.

ಎರಡು ತಂಡಗಳ ಪ್ಲೇಆಫ್ ಅವಕಾಶಗಳು ತಂತಿ ಮೇಲೆ ತೂಗಾಡುತ್ತಿವೆ, ಅವುಗಳೆಂದರೆ ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್. ಇದೀಗ ಗುರುವಾರ, ಮೇ 9ರಂದು ಧರ್ಮಶಾಲಾದ ಹೆಚ್‌ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ 2024ರ 58ನೇ ಪಂದ್ಯದಲ್ಲಿ ಪರಸ್ಪರ ಸೆಣಸಾಡಲಿವೆ.
ತಮ್ಮ ಮೊದಲ ಎಂಟು ಪಂದ್ಯಗಳಲ್ಲಿ ಕೇವಲ ಎರಡು ಪಂದ್ಯಗಳನ್ನು ಗೆದ್ದ ನಂತರ, ಪಂಜಾಬ್ ಕಿಂಗ್ಸ್ ತಮ್ಮ 9 ಮತ್ತು 10ನೇ ಪಂದ್ಯಗಳಲ್ಲಿ ಕೆಕೆಆರ್ ಮತ್ತು ಸಿಎಸ್‌ಕೆ ವಿರುದ್ಧ ಸತತ ಎರಡು ಗೆಲುವುಗಳೊಂದಿಗೆ ತಮ್ಮ ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಆದಾಗ್ಯೂ, ಚೆಪಾಕ್‌ನಲ್ಲಿ ಪಂಜಾಬ್ ಕಿಂಗ್ಸ್ ತಮ್ಮ ಎರಡನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಸಿಎಸ್‌ಕೆ ತಂಡವನ್ನು ಸೋಲಿಸಲು ವಿಫಲವಾಯಿತು. ಇದು ತಂಡವನ್ನು ಅನಿಶ್ಚಿತ ಪರಿಸ್ಥಿತಿಗೆ ತಂದಿತು. ಸ್ಯಾಮ್ ಕರ್ರಾನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಆಡಿದ 11 ಪಂದ್ಯಗಳಿಂದ ನಾಲ್ಕು ಗೆಲುವುಗಳನ್ನು ಪಡೆದು 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಮತ್ತೊಂದೆಡೆ, ಸತತ ಆರು ಪಂದ್ಯಗಳ ಸೋಲಿನ ನಂತರ, ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟನ್ಸ್ ವಿರುದ್ಧ ಹ್ಯಾಟ್ರಿಕ್ ಗೆಲುವಿನೊಂದಿಗೆ, ಆರ್‌ಸಿಬಿ ತಂಡವು ಐಪಿಎಲ್ 2024ರಲ್ಲಿ ಅದ್ಭುತವಾಗಿ ಪುನರಾಗಮನ ಮಾಡಿದೆ.
ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡವು ಸಾಂಪ್ರದಾಯಿಕ ಎದುರಾಳಿ ಸಿಎಸ್‌ಕೆ ವಿರುದ್ಧ ಆರು ವಿಕೆಟ್‌ಗಳ ಸೋಲಿನೊಂದಿಗೆ ತಮ್ಮ ಅಭಿಯಾನವನ್ನು ಪ್ರಾರಂಭಿಸಿತು. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧ ತಮ್ಮ ಎರಡನೇ ಹಣಾಹಣಿಯಲ್ಲಿ ಗೆಲುವು ಸಾಧಿಸಿತು.
ಅಲ್ಲಿಂದ ಸತತ ಆರು ಪಂದ್ಯಗಳಲ್ಲಿ ಕೇವಲ ಸೋಲಿನ ಫಲಿತಾಂಶವನ್ನೇ ಕಂಡಿದ್ದ ಆರ್‌ಸಿಬಿಗೆ ಪ್ರಸಕ್ತ ಋತುವಿನಲ್ಲಿ ಎರಡನೇ ಗೆಲುವು ಕಂಡಿದ್ದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ. ನಂತರ ಗುಜರಾತ್ ಟೈಟನ್ಸ್ ವಿರುದ್ಧದ ಸತತ ಎರಡು ಗೆಲುವು ಸಾಧಿಸಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿತು.
ಐಪಿಎಲ್ 2024ರಲ್ಲಿ ಆರ್‌ಸಿಬಿ ಆಡಿದ 11 ಪಂದ್ಯಗಳಲ್ಲಿ 4 ಗೆಲುವು ಮತ್ತು 7 ಸೋಲು ಕಂಡಿದ್ದು, 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಉಳಿದ ಎಲ್ಲಾ ಪಂದ್ಯಗಳನ್ನು ಗೆದ್ದು ಬೇರೆ ತಂಡಗಳ ಫಲಿತಾಂಶದತ್ತ ಕಣ್ಣಿಡಬೇಕಿದೆ.
ಪಂಜಾಬ್ ವಿರುದ್ಧ ಗೆದ್ದು ತಮ್ಮ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಳ್ಳಲು ಆರ್‌ಸಿಬಿ ತಂಡ ಧರ್ಮಶಾಲಾದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ತಂಡದ ಪ್ರತಿಯೊಬ್ಬ ಆಟಗಾರರು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಬೇಕಿದೆ.
ಪಿಬಿಕೆಎಸ್ vs ಆರ್‌ಸಿಬಿ; ಹೆಡ್-ಟು-ಹೆಡ್ ದಾಖಲೆ
ಇಂಡಿಯನ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಈವರೆಗೆ 32 ಬಾರಿ ಮುಖಾಮುಖಿಯಾಗಿವೆ. ಪಂಜಾಬ್ ಕಿಂಗ್ಸ್ 17 ಬಾರಿ ಗೆಲುವು ಸಾಧಿಸಿದ್ದರೆ, ಆರ್‌ಸಿಬಿ 15 ಬಾರಿ ಗೆಲುವು ಸಾಧಿಸಿದೆ.
ಐಪಿಎಲ್ 2024ರಲ್ಲಿ ಉಭಯ ತಂಡಗಳ ನಡುವಿನ ಮೊದಲ ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ತಂಡ ಭರ್ಜರಿ ಗೆಲುವು ಸಾಧಿಸಿತ್ತು.
ಪಂಜಾಬ್ ಕಿಂಗ್ಸ್ ಸಂಭಾವ್ಯ ಆಡುವ 11ರ ಬಳಗ
ಜಾನಿ ಬೈರ್‌ಸ್ಟೋವ್, ರಿಲೀ ರೊಸ್ಸೌವ್, ಶಶಾಂಕ್ ಸಿಂಗ್, ಸ್ಯಾಮ್ ಕರ್ರಾನ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್.
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿಲ್ ಜಾಕ್ಸ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ಯಶ್ ದಯಾಳ್, ವಿಜಯ್‌ಕುಮಾರ್ ವೈಶಾಖ್, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications