Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024 Points Table: ಪಂಜಾಬ್ ವಿರುದ್ಧ ಗೆದ್ದು 5ನೇ ಸ್ಥಾನಕ್ಕೇರಿದ ಲಕ್ನೋ; ಅಂಕಪಟ್ಟಿಯಲ್ಲಿ ಆರ್‌ಸಿಬಿ ಸ್ಥಾನವೇನು?

ಶನಿವಾರ, ಮಾರ್ಚ್ 30ರಂದು ಲಕ್ನೋದಲ್ಲಿ ನಡೆದ ಐಪಿಎಲ್ 2024ರ 11ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 21 ರನ್‌ಗಳ ಭರ್ಜರಿ ಗೆಲುವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಮೊದಲ 2 ಅಂಕಗಳನ್ನು ಕಲೆಹಾಕಿದ್ದು, 5ನೇ ಸ್ಥಾನಕ್ಕೇರಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧ ಈ ಋತುವಿನ ತಮ್ಮ ಆರಂಭಿಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಅನುಭವಿಸಿದ ಸೋಲಿನ ನಂತರ ಗೆಲುವಿನ ಹಳಿಗೆ ಮರಳಿದೆ. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 200 ರನ್‌ಗಳ ಗುರಿ ನೀಡಿತ್ತು. ಆದರೆ ಪಂಜಾಬ್ ಕಿಂಗ್ಸ್ ತಂಡ 178 ರನ್‌ಗಳನ್ನು ಮಾತ್ರ ಗಳಿಸಿತು.

IPL 2024 Points Table LSG Climbed 5th Place after Winning Against PBKS RCB In the 7th Spot

ಇನ್ನು ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅಗ್ರಸ್ಥಾನ ಕಾಯ್ದುಕೊಂಡಿದೆ. ಆಡಿದ 2 ಪಂದ್ಯಗಳಲ್ಲಿ ಎರಡನ್ನೂ ಗೆದ್ದು 4 ಅಂಕಗಳು ಮತ್ತು 1.979 ನೆಟ್ ರನ್‌ರೇಟ್‌ನೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರೆದಿದೆ.

ಎರಡನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಇದ್ದು, ಆಡಿದ 2 ಪಂದ್ಯಗಳಲ್ಲಿ ಎರಡನ್ನೂ ಗೆದ್ದು 4 ಅಂಕಗಳು ಮತ್ತು 1.047 ನೆಟ್ ರನ್‌ರೇಟ್‌ ಹೊಂದಿದೆ. ರಾಜಸ್ಥಾನ್ ರಾಯಲ್ಸ್ ತಂಡ ಮೂರನೇ ಸ್ಥಾನದಲ್ಲಿ ಮುಂದುವರೆದಿದ್ದು, 2 ಪಂದ್ಯಗಳಲ್ಲಿ ಎರಡನ್ನೂ ಗೆದ್ದು 4 ಅಂಕಗಳು ಮತ್ತು 0.800 ನೆಟ್ ರನ್‌ರೇಟ್‌ ಪಡೆದುಕೊಂಡಿದೆ.

ಇದೇ ವೇಳೆ ಸನ್ ರೈಸರ್ಸ್ ಹೈದರಾಬಾದ್ ತಂಡ ಆಡಿದ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಒಂದು ಸೋಲಿನೊಂದಿಗೆ 2 ಅಂಕಗಳು ಮತ್ತು 0.675 ನೆಟ್ ರನ್‌ರೇಟ್‌ನೊಂದಿಗೆ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಐದನೇ ಸ್ಥಾನದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 2 ಅಂಕಗಳು ಮತ್ತು 0.025 ನೆಟ್ ರನ್ ರೇಟ್‌ ಹೊಂದಿದೆ.

IPL 2024 Points Table LSG Climbed 5th Place after Winning Against PBKS RCB In the 7th Spot

ಇನ್ನು ಶನಿವಾರದಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತ ಪಂಜಾಬ್ ಕಿಂಗ್ಸ್ ತಂಡವು ಆಡಿದ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಎರಡು ಸೋಲು ಕಂಡಿದೆ. ಈ ಮೂಲಕ 2 ಅಂಕಗಳು ಮತ್ತು -0.337 ನೆಟ್ ರನ್ ರೇಟ್‌ನೊಂದಿಗೆ ಆರನೇ ಸ್ಥಾನ ಪಡೆದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿದ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಎರಡು ಸೋಲು ಕಂಡಿದ್ದು, 2 ಅಂಕಗಳು ಮತ್ತು -0.711 ನೆಟ್ ರನ್‌ರೇಟ್‌ನೊಂದಿಗೆ ಏಳನೇ ಸ್ಥಾನದಲ್ಲಿದೆ. ಅದೇ ರೀತಿ ಗುಜರಾತ್ ಟೈಟನ್ಸ್ ತಂಡ ಆಡಿದ 2 ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಒಂದು ಸೋಲಿನೊಂದಿಗೆ 8ನೇ ಸ್ಥಾನ ಹೊಂದಿದೆ.

ಉಳಿದಂತೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಆಡಿದ ತಲಾ ಎರಡು ಪಂದ್ಯಗಳಲ್ಲಿ ಎರಡನೂ ಸೋತ ಕಾರಣ, ಅಂಕಪಟ್ಟಿಯಲ್ಲಿ ಕ್ರಮವಾಗಿ 9 ಮತ್ತು 10ನೇ ಸ್ಥಾನ ಪಡೆದುಕೊಂಡಿವೆ.

Story first published: Sunday, March 31, 2024, 13:20 [IST]
Other articles published on Mar 31, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+