Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024 Points Table: ಮುಂಬೈ ವಿರುದ್ಧ ಗೆದ್ದು ಅಗ್ರಸ್ಥಾನಕ್ಕೇರಿದ ರಾಜಸ್ಥಾನ್; ಕೊಹ್ಲಿ ಕೈತಪ್ಪಿದ ಆರೆಂಜ್ ಕ್ಯಾಪ್!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಸತತ ಮೂರನೇ ಪಂದ್ಯ ಸೋಲಿನೊಂದಿಗೆ ಅತ್ಯಂತ ಕೆಟ್ಟ ಪರಿಸ್ಥಿತಿ ಎದುರಿಸುತ್ತಿದೆ. ಮತ್ತೊಂದೆಡೆ ನೂತನ ನಾಯಕ ಹಾರ್ದಿಕ್ ಪಾಂಡ್ಯ ತಮ್ಮ ಅಭಿಮಾನಿಗಳ ಕೋಪಕ್ಕೆ ಗುರಿಯಾಗುತ್ತಲೇ ಇದ್ದಾರೆ.

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ತವರಿನಲ್ಲಿ ಸೋಮವಾರ, ಏಪ್ರಿಲ್ 1ರಂದು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿದ ಕಾರಣ, ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಅತ್ಯಂತ ಕೆಟ್ಟ ನೆಟ್ ರನ್ ರೇಟ್‌ನೊಂದಿಗೆ ಹತ್ತನೇ ಸ್ಥಾನದಲ್ಲಿದೆ.

IPL 2024 Points Table Rajasthan Royals Topped by Winning Against Mumbai Indians


ಇದು ಮುಂಬೈ ಇಂಡಿಯನ್ಸ್ ತಂಡಕ್ಕೆ ಭಯಾನಕ ಆರಂಭವಾಗಿದೆ ಮತ್ತು ಈ ಸೋಲು ಖಂಡಿತವಾಗಿಯೂ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡದ ಮೇಲೆ ಒತ್ತಡವನ್ನು ಹೆಚ್ಚಿಸಿದೆ. ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ತಂಡ ಸಮಗ್ರ ಗೆಲುವಿನೊಂದಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

ಐಪಿಎಲ್ 2024ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರು ವಿಕೆಟ್‌ಗಳ ಗೆಲುವಿನೊಂದಿಗೆ ಸಂಜು ಸ್ಯಾಮ್ಸನ್ ನಾಯಕತ್ವದ ಬಲಿಷ್ಠ ರಾಜಸ್ಥಾನ್ ರಾಯಲ್ಸ್ ಸತತ ಮೂರನೇ ಗೆಲುವು ದಾಖಲಿಸಿತು.

ಐಪಿಎಲ್ 2024ರ ಅಂಕಪಟ್ಟಿ (ಸೋಮವಾರದ ಅಂತ್ಯಕ್ಕೆ)
ರಾಜಸ್ಥಾನ್ ರಾಯಲ್ಸ್ ತಂಡ 3 ಪಂದ್ಯಗಳನ್ನು ಆಡಿ 3 ಗೆಲುವು ಸಾಧಿಸಿದ್ದು, ಒಟ್ಟು 6 ಅಂಕಗಳು ಮತ್ತು +1.249 ನೆಟ್ ರನ್‌ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದೆ.

IPL 2024 Points Table Rajasthan Royals Topped by Winning Against Mumbai Indians


ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆಡಿದ 2 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ ಒಟ್ಟು 4 ಅಂಕಗಳು ಮತ್ತು +1.0476 ನೆಟ್ ರನ್‌ರೇಟ್‌ನೊಂದಿಗೆ 2ನೇ ಸ್ಥಾನದಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡವು 3 ಪಂದ್ಯಗಳನ್ನು ಆಡಿದ್ದು, 2 ಗೆಲುವು ಮತ್ತು 1 ಸೋಲಿನೊಂದಿಗೆ ಒಟ್ಟು 4 ಅಂಕಗಳನ್ನು ಪಡೆದಿದ್ದು, +0.976 ನೆಟ್ ರನ್‌ರೇಟ್‌ನೊಂದಿಗೆ 3ನೇ ಸ್ಥಾನ ಪಡೆದಿದೆ.

ಗುಜರಾತ್ ಟೈಟನ್ಸ್ ತಂಡ ಈವರೆಗೆ 3 ಪಂದ್ಯಗಳನ್ನು ಆಡಿದ್ದು, 2 ಗೆಲುವು ಮತ್ತು 1 ಸೋಲಿನೊಂದಿಗೆ ಒಟ್ಟು 4 ಅಂಕಗಳನ್ನು ಪಡೆದಿದ್ದು, -0.738 ನೆಟ್ ರನ್‌ರೇಟ್‌ನೊಂದಿಗೆ 4ನೇ ಸ್ಥಾನ ಹೊಂದಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡ ಆಡಿದ 3 ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಎರಡು ಸೋಲಿನೊಂದಿಗೆ 2 ಅಂಕಗಳನ್ನು ಗಳಿಸಿದ್ದು, +0.204 ನೆಟ್ ರನ್‌ರೇಟ್‌ನೊಂದಿಗೆ 5ನೇ ಸ್ಥಾನ ಪಡೆದಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ 2 ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಒಂದು ಸೋಲು ಕಂಡಿದ್ದು, 2 ಅಂಕಗಳು ಹಾಗೂ +0.025 ನೆಟ್ ರನ್‌ರೇಟ್‌ನೊಂದಿಗೆ 6ನೇ ಸ್ಥಾನದಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ 3 ಪಂದ್ಯಗಳನ್ನು ಆಡಿದ್ದು, ಒಂದು ಗೆಲುವು ಮತ್ತು ಎರಡು ಸೋಲು ಕಂಡಿದೆ. 2 ಅಂಕಗಳು ಹಾಗೂ -0.016 ನೆಟ್ ರನ್‌ರೇಟ್‌ನೊಂದಿಗೆ 7ನೇ ಸ್ಥಾನದಲ್ಲಿದೆ.

ಪಂಜಾಬ್ ಕಿಂಗ್ಸ್ ತಂಡ ಆಡಿದ ಮೂರು ಪಂದ್ಯಗಳಲ್ಲಿ ಎರಡು ಸೋಲು ಮತ್ತು ಒಂದು ಗೆಲುವು ಪಡೆದು 2 ಅಂಕಗಳು ಹಾಗೂ -0.337 ನೆಟ್ ರನ್‌ರೇಟ್‌ನೊಂದಿಗೆ 8ನೇ ಸ್ಥಾನದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ ಮೂರು ಪಂದ್ಯಗಳಲ್ಲಿ ಎರಡು ಸೋಲು ಮತ್ತು ಒಂದು ಗೆಲುವು ಕಂಡಿದೆ. 2 ಅಂಕಗಳು ಮತ್ತು -0.711 ನೆಟ್ ರನ್‌ರೇಟ್‌ನೊಂದಿಗೆ 9ನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್ ತಂಡ ಆಡಿದ ಮೂರು ಪಂದ್ಯಗಳನ್ನು ಸೋತಿರುವ ಕಾರಣ, ಅಂಕಟಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ರಿಯಾನ್ ಪರಾಗ್ ಪಾಲಾದ ಆರೆಂಜ್ ಕ್ಯಾಪ್

ರಾಜಸ್ಥಾನ್ ರಾಯಲ್ಸ್ ತಂಡದ ರಿಯಾನ್ ಪರಾಗ್ ಮತ್ತು ಆರ್‌ಸಿಬಿ ತಂಡದ ವಿರಾಟ್ ಕೊಹ್ಲಿ ಆಡಿದ 3 ಪಂದ್ಯಗಳಲ್ಲಿ ತಲಾ 181 ರನ್ ಗಳಿಸಿರುವ ಕಾರಣ ಆರೆಂಜ್ ಕ್ಯಾಪ್ ಸ್ಪರ್ಧೆಯಲ್ಲಿ ಜಂಟಿ ಅಗ್ರಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್ ಹೊಂದಿರುವ ಮುಸ್ತಾಫಿಜುರ್ ರಹಮಾನ್

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎಡಗೈ ವೇಗಿ ಮುಸ್ತಾಫಿಜುರ್ ರಹಮಾನ್ ಆಡಿದ ಮೂರು ಪಂದ್ಯಗಳಲ್ಲಿ 7 ವಿಕೆಟ್‌ಗಳನ್ನು ಪಡೆದು ಪರ್ಪಲ್ ಕ್ಯಾಪ್ ಹೊಂದಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಯುಜ್ವೇಂದ್ರ ಚಹಾಲ್ 6 ವಿಕೆಟ್ ಪಡೆದಿದ್ದಾರೆ.

Story first published: Tuesday, April 2, 2024, 10:21 [IST]
Other articles published on Apr 2, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+