ಗುರುವಾರ, ಮೇ 9ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 58ನೇ ಪಂದ್ಯದಲ್ಲಿ ಕೆಳ-ಮಧ್ಯಮ ತಂಡಗಳಾದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) 2 ನಿರ್ಣಾಯಕ ಅಂಕಗಳಿಗಾಗಿ ಹಣಾಹಣಿ ನಡೆಸಲಿವೆ.
ಶಿಖರ್ ಧವನ್ ಅನುಪಸ್ಥಿತಿಯಲ್ಲಿ ಪಂಜಾಬ್ ಕಿಂಗ್ಸ್ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 28 ರನ್‌ಗಳ ಹೀನಾಯ ಸೋಲಿನ ನಂತರ, 2024ರ ಅವೃತ್ತಿಯಲ್ಲಿ ತಮ್ಮ ಏಳನೇ ಸೋಲನ್ನು ಅನುಭವಿಸಿತು.

ಪಂಜಾಬ್ ಕಿಂಗ್ಸ್ ಪ್ರಸ್ತುತ ಆಡಿದ 11 ಪಂದ್ಯಗಳಲ್ಲಿ ಕೇವಲ ನಾಲ್ಕು ಗೆಲುವುಗಳೊಂದಿಗೆ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಪ್ಲೇಆಫ್ ಅರ್ಹತೆಗಾಗಿ ರೇಸ್‌ನಲ್ಲಿ ಉಳಿಯಲು ಆರ್‌ಸಿಬಿ ವಿರುದ್ಧ ಗೆಲುವು ಸಾಧಿಸಬೇಕಾದ ಅನಿವಾರ್ಯತೆಯಲ್ಲಿದೆ.
ಮತ್ತೊಂದೆಡೆ, ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿದ ನಂತರ, ಸತತ ಮೂರನೇ ಗೆಲುವಿನೊಂದಿಗೆ ಐಪಿಎಲ್ 2024ರಲ್ಲಿ ಅದ್ಭುತ ಪುನರಾಗಮನ ಮುಂದುವರೆಸಿದೆ.
ಪಂಜಾಬ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ತವರಿನ ಅಂಗಳದಲ್ಲಿ ಈ ಋತುವಿನ ಮೊದಲ ಗೆಲುವು ಸಾಧಿಸಿತ್ತು ಮತ್ತು ಎರಡನೇ ಪಂದ್ಯದಲ್ಲೂ ಗೆಲ್ಲುವ ನೆಚ್ಚಿನ ತಂಡವಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2024ರಲ್ಲಿ ಆಡಿದ 11 ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಏಳು ಸೋಲುಗಳೊಂದಿಗೆ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಪ್ಲೇಆಫ್ ಅರ್ಹತೆ ಪಡೆಯಲು ತನ್ನ ಮುಂದಿನ ಎಲ್ಲಾ ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಿದೆ.
ಸ್ಥಳ ಮತ್ತು ದಿನಾಂಕ: ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಐಪಿಎಲ್ 2024ರ ಪಂದ್ಯವು ಧರ್ಮಶಾಲಾದ ಹೆಚ್‌ಪಿಸಿಎ ಸ್ಟೇಡಿಯಂನಲ್ಲಿ ಗುರುವಾರ, ಮೇ 9ರಂದು ನಡೆಯಲಿದೆ.
ಪಂದ್ಯದ ಸಮಯ: ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.

ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಜಾನಿ ಬೈರ್‌ಸ್ಟೋವ್, ರಿಲೀ ರೊಸ್ಸೌ, ಶಶಾಂಕ್ ಸಿಂಗ್, ಸ್ಯಾಮ್ ಕರ್ರಾನ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್.
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ವಿಜಯ್ ಕುಮಾರ್ ವೈಶಾಕ್.