IPL 2024 Qualifier 1: ಕೆಕೆಆರ್ vs ಎಸ್‌ಆರ್‌ಹೆಚ್ ನಡುವೆ ಫೈನಲ್‌ಗಾಗಿ ಕಾದಾಟ; ಸಂಭಾವ್ಯ ಆಡುವ 11ರ ಬಳಗ
ಮಂಗಳವಾರ, ಮೇ 21ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ರೋಚಕ ಕ್ವಾಲಿಫೈಯರ್ 1ರ ಪಂದ್ಯದಲ್ಲಿ ಅಂಕಪಟ್ಟಿಯ ಅಗ್ರ 2 ತಂಡಗಳಾದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ಮುಖಾಮುಖಿಯಾಗುತ್ತಿವೆ.
ಇಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದ್ದರೆ, ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗಲಿದೆ. ಆಗ ಆರ್‌ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡದೊಂದಿಗೆ ಸೆಣಸಾಡಲಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಪ್ರಸಕ್ತ ಐಪಿಎಲ್ 2024ರ ಆವೃತ್ತಿಯಲ್ಲಿ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿವೆ. ಹೀಗಾಗಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಉಭಯ ತಂಡಗಳು ಇದೀಗ ಫೈನಲ್‌ನಲ್ಲಿ ಸ್ಥಾನಕ್ಕಾಗಿ ಸೆಣಸಲಿದ್ದಾರೆ.
ಕೆಕೆಆರ್ ಪರ ಸುನಿಲ್ ನರೈನ್ ಈ ವರ್ಷ ಅದ್ಭುತವಾಗಿ ಬ್ಯಾಟ್ ಬೀಸಿದ್ದಾರೆ. ಅತ್ತ ಎಸ್‌ಆರ್‌ಹೆಚ್ ಪರ ಅಭಿಷೇಕ್ ಶರ್ಮಾ ಅವರೊಂದಿಗೆ ಟ್ರಾವಿಸ್ ಹೆಡ್ ಜೋಡಿ ಕೂಡ ಆಕ್ರಮಣಕಾರಿ ಬ್ಯಾಟಿಂಗ್ ವಿಧಾನದಿಂದ ತಮ್ಮ ತಂಡಕ್ಕೆ ನೆರವಾಗಿದ್ದಾರೆ. ಆದರೆ, ಟ್ರಾವಿಸ್ ಹೆಡ್ ಈ ಪಂದ್ಯದಲ್ಲಿ ಆಡುವ ಸಾಧ್ಯತೆ ಇಲ್ಲ.
ಎರಡೂ ತಂಡಗಳು ತಮ್ಮ ತಂಡದಲ್ಲಿ ಸಾಕಷ್ಟು ಸ್ಫೋಟಕ ಬ್ಯಾಟಿಂಗ್ ಶಕ್ತಿಯನ್ನು ಹೊಂದಿವೆ. ಆದರೆ, ಕೆಕೆಆರ್‌ನಲ್ಲಿ ಈ ವರ್ಷ ಸುನಿಲ್ ನರೈನ್ ಅವರ ಆರಂಭಿಕ ಜೊತೆಗಾರ ಫಿಲಿಪ್ ಸಾಲ್ಟ್ ಅವರನ್ನು ಕಳೆದುಕೊಳ್ಳುತ್ತದೆ. ಏಕೆಂದರೆ ಅವರು ಅಂತಾರಾಷ್ಟ್ರೀಯ ಕರ್ತವ್ಯಕ್ಕಾಗಿ ತಮ್ಮ ತವರು ಇಂಗ್ಲೆಂಡ್‌ಗೆ ಮರಳಿದ್ದಾರೆ.
ಇದೇ ವೇಳೆ 17ನೇ ಆವೃತ್ತಿಯ ಪಂದ್ಯಾವಳಿಯಲ್ಲಿ ಕೆಕೆಆರ್ ತಂಡವು ಎಸ್‌ಆರ್‌ಹೆಚ್ ವಿರುದ್ಧ ಎರಡನೇ ಬಾರಿಗೆ ಸೆಣಸಾಡಲಿದೆ. ಉಭಯ ತಂಡಗಳು ಋತುವಿನ ಆರಂಭದಲ್ಲಿ ಈಡನ್ ಗಾರ್ಡನ್ಸ್‌ನಲ್ಲಿ ಮುಖಾಮುಖಿಯಾದವು. ಅಲ್ಲಿ ಕೆಕೆಆರ್ 4 ರನ್‌ಗಳ ರೋಚಕ ಗೆಲುವು ಪಡೆದಿತ್ತು.

ಆದಾಗ್ಯೂ, ಮಳೆಯಿಂದಾಗಿ ಪಂದ್ಯ ರದ್ದಾದರೆ, ಲೀಗ್‌ನಲ್ಲಿ ಉತ್ತಮ ರನ್ ರೇಟ್ ಹೊಂದಿದ ತಂಡವು ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡ ಕ್ವಾಲಿಫೈಯರ್ 2 ಪಂದ್ಯವನ್ನು ಆಡುತ್ತದೆ.
ಆ ಸಂದರ್ಭದಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಫೈನಲ್‌ಗೆ ಅರ್ಹತೆ ಪಡೆಯುತ್ತದೆ ಮತ್ತು ಸನ್ ರೈಸರ್ಸ್ ಹೈದರಾಬಾದ್ ಕ್ವಾಲಿಫೈಯರ್ 2 ಪಂದ್ಯಕ್ಕಾಗಿ ಚೆನ್ನೈಗೆ ಪ್ರಯಾಣಿಸಲಿದೆ.
ಕೆಕೆಆರ್ vs ಎಸ್‌ಆರ್‌ಹೆಚ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಐಪಿಎಲ್ 2024ರ ಕ್ವಾಲಿಫೈಯರ್ 1 ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಕೆಕೆಆರ್ vs ಎಸ್‌ಆರ್‌ಹೆಚ್ ತಂಡಗಳ ಸಂಭಾವ್ಯ ಆಡುವ 11ರ ಬಳಗ
ಕೋಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಅನುಕುಲ್ ರಾಯ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
ಸನ್ ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ರಾಹುಲ್ ತ್ರಿಪಾಠಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮಯಾಂಕ್ ಮಾರ್ಕಂಡೆ, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಟಿ ನಟರಾಜನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications