RCB vs CSK IPL 2024: ಸಿಎಸ್‌ಕೆ ಮಣಿಸಿ ಪ್ಲೇಆಫ್ ಪ್ರವೇಶಿಸಿದ ಆರ್‌ಸಿಬಿ; ಈ ಸಲ ಕಪ್ ನಮ್ದೇನಾ?
ಶನಿವಾರ, ಮೇ 18ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಪ್ಲೇಆಫ್ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ರೋಚಕ ಗೆಲುವು ಸಾಧಿಸಿತು.
ಈ ಮೂಲಕ ಗೆಲ್ಲಲೇಬೇಕಿದ್ದ ಹೈ-ವೋಲ್ಟೇಜ್ ಪಂದ್ಯದಲ್ಲಿ ಸಿಎಸ್‌ಕೆ ತಂಡವನ್ನು ಮಣಿಸಿದ ಆರ್‌ಸಿಬಿ ತಂಡ ಐಪಿಎಲ್ 2024ರಲ್ಲಿ ನಾಲ್ಕನೇ ಸ್ಥಾನಿಯಾಗಿ ಪ್ಲೇಆಫ್ ಪ್ರವೇಶಿಸಿದೆ. ಇದೇ ವೇಳೆ ಹೋರಾಡಿ ಸೋತ ಸಿಎಸ್‌ಕೆ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫಾಫ್ ಡು ಪ್ಲೆಸಿಸ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತ್ತು.
ಗಮನಾರ್ಹವಾಗಿ, ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವು ಅಥವಾ 219 ರನ್‌ಗಳ ಗುರಿಯಲ್ಲಿ 202 ರನ್ ಗಳಿಸಿದ್ದರೂ, ಪ್ಲೇಆಫ್‌ಗೆ ಪ್ರವೇಶಿಸಬಹುದಿತ್ತು. ಆದರೆ, ಆರ್‌ಸಿಬಿ ಬೌಲರ್‌ಗಳ ಅದ್ಭುತ ಪ್ರದರ್ಶನದ ಎದುರು ಮಂಡಿಯೂರಿತು.
ಇನ್ನು ಆರ್‌ಸಿಬಿ ತಂಡಕ್ಕೆ ಗೆಲುವಿನ ಜೊತೆಗೆ ಕನಿಷ್ಠ 18 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳ ಗೆಲುವು ಅನಿವಾರ್ಯವಾಗಿತ್ತು. ಇದೀಗ 27 ರನ್‌ಗಳಿಂದ ಗೆಲುವು ಸಾಧಿಸುವ ಮೂಲಕ ಪ್ಲೇಆಫ್‌ಗೆ ರೋಚಕವಾಗಿ ಎಂಟ್ರಿ ಕೊಟ್ಟಿತು.

ಸಿಎಸ್‌ಕೆ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ರಚಿನ್ ರವೀಂದ್ರ ಮತ್ತು ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ನೀಡಲಿಲ್ಲ. ಏಕೆಂದರೆ ಮೊದಲ ಓವರ್‌ನ ಮೊದಲ ಎಸೆತದಲ್ಲಿಯೇ ನಾಯಕ ರುತುರಾಜ್ ಗಾಯಕ್ವಾಡ್ ಸೊನ್ನೆಗೆ ಔಟಾದರು.
ನಂತರ ಬಂದ ಡ್ಯಾರಿಲ್ ಮಿಚೆಲ್ ಅಬ್ಬರಿಸುವ ಮುನ್ಸೂಚನೆ ನೀಡಿದರೂ, ಕೇವಲ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಅಜಿಂಕ್ಯ ರಹಾನೆ ಮತ್ತು ರಚಿನ್ ರವೀಂದ್ರ ಮೂರನೇ ವಿಕೆಟ್‌ಗೆ 66 ರನ್‌ಗಳ ಜೊತೆಯಾಟ ನಿರ್ಮಿಸಿ ಉತ್ತಮವಾಗಿ ಆಡುತ್ತಿದ್ದರು.
ಈ ವೇಳೆ ಅಜಿಂಕ್ಯ ರಹಾನೆ 22 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 33 ರನ್ ಗಳಿಸಿ ಔಟಾದರೆ, ರಚಿನ್ ರವೀಂದ್ರ 37 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ಮೂಲಕ 61 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದಾಗ ಅನವಶ್ಯಕ ರನೌಟ್ ಆದರು.

ಬಳಿಕ ಕ್ರೀಸ್‌ಗೆ ಬಂದ ಸ್ಫೋಟಕ ಬ್ಯಾಟರ್ ಶಿವಂ ದುಬೆ 15 ಎಸೆತಗಳಲ್ಲಿ 7 ರನ್ ಮಾತ್ರ ಗಳಿಸಿ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ಕೊನೆಯಲ್ಲಿ ರವೀಂದ್ರ ಜಡೇಜಾ 22 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್‌ಗಳೊಂದಿಗೆ ಅಜೇಯ 42 ರನ್ ಗಳಿಸಿದರೆ, ಮಾಜಿ ನಾಯಕ ಎಂಎಸ್ ಧೋನಿ 13 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್‌ನೊಂದಿಗೆ 25 ರನ್ ಗಳಿಸಿ ಔಟಾದರು.
ಕೊನೆಯ ಓವರ್‌ನಲ್ಲಿ ಸಿಎಸ್‌ಕೆ ಗೆಲುವಿಗೆ 17 ರನ್‌ಗಳ ಅವಶ್ಯಕತೆ ಇದ್ದಾಗ, ಯಶ್ ದಯಾಳ್ ಬೌಲಿಂಗ್‌ನ ಮೊದಲ ಎಸೆತವನ್ನು ಸ್ಟೇಡಿಯಂ ಆಚೆ ಬಾರಿಸಿದ ಎಂಎಸ್ ಧೋನಿ ನಂತರದ ಎಸೆತದಲ್ಲಿ ದೊಡ್ಡ ಶಾಟ್‌ಗೆ ಪ್ರಯತ್ನಿಸಿ ಕ್ಯಾಚ್ ನೀಡಿದರು. ನಂತರದ ನಾಲ್ಕು ಎಸೆತಗಳಲ್ಲಿ ಕೇವಲ 1 ರನ್ ಬಿಟ್ಟುಕೊಟ್ಟರು.
ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ಯಶ್ ದಯಾಳ್ 4 ಓವರ್‌ಗಳಲ್ಲಿ 42 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್ ಲಾಕಿ ಫರ್ಗ್ಯುಸನ್ ಮತ್ತು ಕ್ಯಾಮೆರಾನ್ ಗ್ರೀನ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications