2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿಯಲ್ಲಿ ಪ್ಲೇಆಫ್‌ಗೆ ಅರ್ಹತೆ ಪಡೆಯಲು ಹೆಣಗಾಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿ, ಇತ್ತೀಚಿಗೆ ಪೋಸ್ಟ್ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ತಂಡದ ನೆಟ್ ಬೌಲರ್ ಮಹೇಶ್ ಕುಮಾರ್ ಗಮನ ಸೆಳೆದಿದ್ದಾರೆ.
ಸಾಮಾಜಿಕ ಮಾಧ್ಯಮದ ವೈರಲ್ ವಿಡಿಯೋದಲ್ಲಿ, ಆರ್‌ಸಿಬಿ ನೆಟ್ ಬೌಲರ್ ಮಹೇಶ್ ಕುಮಾರ್ ಅವರು ಮುಂಬೈ ಇಂಡಿಯನ್ಸ್ ಹಾಗೂ ಭಾರತ ತಂಡದ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಅವರ ಬೌಲಿಂಗ್ ಶೈಲಿ ಹೋಲಿಕೆಯಿಂದಾಗಿ ಕಣ್ಣು ಕಣ್ಣು ಬಿಟ್ಟು ನೋಡುವಂತೆ ಮಾಡಿದ್ದಾರೆ.

ಮಹೇಶ್ ಕುಮಾರ್ ಅವರ ಬೌಲಿಂಗ್ ಸಾಮರ್ಥ್ಯಕ್ಕಾಗಿ ಅನೇಕ ಕ್ರಿಕೆಟ್ ಅಭಿಮಾನಿಗಳು ಉತ್ಸಾಹ ತೋರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅನೇಕರು ಡೂಪ್ಲಿಕೇಟ್ ಬುಮ್ರಾ ಮಹೇಶ್ ಕುಮಾರ್ ಅವರು ಐಪಿಎಲ್ 2024ರಲ್ಲಿ ಆರ್‌ಸಿಬಿ ತಂಡಕ್ಕಾಗಿ ಆಡುವುದನ್ನು ನೋಡಲು ಬಯಸುತ್ತಿದ್ದಾರೆ.
ಪ್ರಸಕ್ತ ಐಪಿಎಲ್ ಋತುವಿನಲ್ಲಿ ಆರ್‌ಸಿಬಿ ತಂಡ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡುತ್ತಿದೆ. ಪ್ರತಿ ಪಂದ್ಯದಲ್ಲೂ 200ಕ್ಕೂ ಅಧಿಕ ರನ್‌ಗಳನ್ನು ಸೋರಿಕೆ ಮಾಡುತ್ತಿದ್ದಾರೆ ಮತ್ತು ವಿಕೆಟ್ ಪಡೆಯುವಲ್ಲಿಯೂ ಹಿಂದೆ ಬಿದ್ದಿದ್ದಾರೆ. ಇದು ಆರ್‌ಸಿಬಿ ತಂಡದ ಕೋಟ್ಯಂತರ ನಿಷ್ಠಾವಂತ ಅಭಿಮಾನಿಗಳನ್ನು ಘಾಸಿಗೊಳಿಸಿದೆ.
ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ವೇಗಿ ಜಸ್ಪ್ರೀತ್ ಬುಮ್ರಾ ಈ ಋತುವಿನಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಇದುವರೆಗೆ ಆಡಿದ 9 ಪಂದ್ಯಗಳಲ್ಲಿ 14 ವಿಕೆಟ್‌ಗಳೊಂದಿಗೆ ಪರ್ಪಲ್ ಕ್ಯಾಪ್ ಹೋಲ್ಡರ್ ಆಗಿದ್ದಾರೆ.
ಆರ್‌ಸಿಬಿ ಫ್ರಾಂಚೈಸಿಯ ವೇಗದ ನೆಟ್ ಬೌಲರ್‌ನ ಶೈಲಿಯು ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಜಸ್ಪ್ರೀತ್ ಬುಮ್ರಾ ಅವರ ಕ್ರಿಯೆಗೆ ಗಮನಾರ್ಹ ಹೋಲಿಕೆ ಕಂಡುಬರುತ್ತಿದೆ ಮತ್ತು ಇಬ್ಬರು ಬೌಲರ್‌ಗಳ ನಡುವಿನ ಒಂದೇ ಹೋಲಿಕೆಯಿಂದ ಅಭಿಮಾನಿಗಳು ದಿಗ್ಭ್ರಮೆಗೊಂಡಿದ್ದಾರೆ.
2022ರಲ್ಲಿ ಗುಜರಾತ್ ಟೈಟನ್ಸ್ ಫ್ರಾಂಚೈಸಿ ಭಾಗವಾಗಿದ್ದ ಮಹೇಶ್ ಕುಮಾರ್ ನೆಟ್ಸ್‌ನಲ್ಲಿ ಬೌಲಿಂಗ್ ಮಾಡುವುದನ್ನು ನೋಡಿದರು ಮತ್ತು ಜಸ್ಪ್ರೀತ್ ಬುಮ್ರಾ ಅವರ ಶೈಲಿಯನ್ನು ಸಂಪೂರ್ಣವಾಗಿ ಪುನರಾವರ್ತಿಸಲು ಸಾಧ್ಯವಾಯಿತು. ಬೌಲರ್‌ನ ಆಕ್ಷನ್‌ನಿಂದ ಅಭಿಮಾನಿಗಳು ಉತ್ಸುಕರಾಗಿದದಾರೆ ಮತ್ತು ಮಹೇಶ್ ಕುಮಾರ್‌ಗೆ ಕ್ರಿಕೆಟ್‌ನಲ್ಲಿ ಉಜ್ವಲ ಭವಿಷ್ಯ ಆಶಿಸಿದರು.
ಆರ್‌ಸಿಬಿ ತಂಡ ಐಪಿಎಲ್ 2024ರಲ್ಲಿ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಲು ಹೆಣಗಾಡಿದೆ. ಆದರೆ ಅವರ ಕೊನೆಯ ಎರಡು ಪಂದ್ಯಗಳಲ್ಲಿ ಗೆಲುವುಗಳೊಂದಿಗೆ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡವು ಪ್ಲೇಆಫ್ ಕನಸುಗಳನ್ನು ಜೀವಂತವಾಗಿರಿಸಿಕೊಂಡಿದೆ.
ವಿರಾಟ್ ಕೊಹ್ಲಿ ಬ್ಯಾಟಿಂಗ್‌ನಲ್ಲಿ ಆರ್‌ಸಿಬಿ ತಂಡದ ಅತ್ಯುತ್ತಮ ಪ್ರದರ್ಶನಕಾರರಾಗಿದ್ದಾರೆ ಮತ್ತು ಭಾನುವಾರ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕದೊಂದಿಗೆ ಮಿಂಚಿದ ವಿಲ್ ಜಾಕ್ಸ್‌ಗೆ ಸಂಪೂರ್ಣ ಸಾಥ್ ನೀಡಿದರು.
ಸದ್ಯ ಐಪಿಎಲ್ 2024ರಲ್ಲಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದರೂ ಸಹ, ತನ್ನ ನಿಧಾನಗತಿ ಸ್ಟ್ರೈಕ್ ರೇಟ್‌ನಿಂದ ಅಸಂತೋಷವಾಗಿರುವ ವಿಮರ್ಶಕರಿಗೆ ವಿರಾಟ್ ಕೊಹ್ಲಿ ತಿರುಗೇಟು ನೀಡಿದರು.
ಐಪಿಎಲ್ 2024ರಲ್ಲಿ ತಮ್ಮ ಕಳಪೆ ಆರಂಭದ ನಂತರ ಆರ್‌ಸಿಬಿ ಫ್ರಾಂಚೈಸಿ ಸ್ವತಃ ನಿಷ್ಠಾವಂತ ಅಭಿಮಾನಿಗಳಿಂದ ಭಾರೀ ಟೀಕೆಗೆ ಗುರಿಯಾಗಿತ್ತು. ಪ್ರಸಕ್ತ ಆವೃತ್ತಿಯಲ್ಲಿ ಆಡಿದ ಮೊದಲ 8 ಪಂದ್ಯಗಳಲ್ಲಿ 1ರಲ್ಲಿ ಮಾತ್ರ ಗೆಲುವು ಸಾಧಿಸಿತ್ತು.
ಆದರೆ, ಆರ್‌ಸಿಬಿ ತಮ್ಮ ಕೊನೆಯ ಎರಡು ಪಂದ್ಯಗಳಲ್ಲಿ ಗೆಲುವಿನ ಫಾರ್ಮ್ ಅನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದೆ. ಬಲಿಷ್ಠ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಅದ್ಭುತ ಗೆಲುವು ದಾಖಲಿಸಿದ ನಂತರ, ಏಪ್ರಿಲ್ 28ರಂದು ಗುಜರಾತ್ ಟೈಟನ್ಸ್ ವಿರುದ್ಧ ಸುಲಭ ಜಯ ದಾಖಲಿಸಿದೆ.
ಆರ್‌ಸಿಬಿ ತನ್ನ ಬೌಲಿಂಗ್‌ನದ್ದೇ ದೊಡ್ಡ ಸಮಸ್ಯೆಯಾಗಿದ್ದು, ಅದ್ಭುತ ಬ್ಯಾಟಿಂಗ್ ವಿಭಾಗ ಆರ್‌ಸಿಬಿಗೆ ಸಂರಕ್ಷಕವಾಗಿದೆ ಮತ್ತು ಮೇ 4ರಂದು ಬೆಂಗಳೂರಿನಲ್ಲಿ ಅದೇ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸುವಾಗ ಗೆಲುವಿನ ಹಾದಿಯಲ್ಲಿ ಮುಂದುವರಿಯಲು ಎದುರು ನೋಡುತ್ತಿದೆ.