For Quick Alerts
ALLOW NOTIFICATIONS  
For Daily Alerts
 

DC vs LSG: ಪೂರನ್, ಅರ್ಷದ್ ಹೋರಾಟ ವ್ಯರ್ಥ; ಲಕ್ನೋ ವಿರುದ್ಧ ಡೆಲ್ಲಿಗೆ ಜಯ; ನಿಟ್ಟುಸಿರು ಬಿಟ್ಟ ಆರ್‌ಸಿಬಿ

ಮಂಗಳವಾರ, ಮೇ 14ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 64ನೇ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ರವಾಸಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 19 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಈ ಮೂಲಕ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆದ್ದು, ಪ್ಲೇಆಫ್ ಅರ್ಹತೆಯ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಆಡಿದ 14 ಪಂದ್ಯಗಳಲ್ಲಿ 7 ಗೆಲುವು ಮತ್ತು 7 ಸೋಲುಗಳೊಂದಿಗೆ 14 ಅಂಕಗಳನ್ನು ಕಲೆಹಾಕಿ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಏರಿದೆ.

DC vs LSG IPL 2024 Delhi Capitals Defeat Lucknow Super Giants By 19 Runs In 64th Match

ಮತ್ತೊಂದೆಡೆ, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತನ್ನ 13ನೇ ಪಂದ್ಯದಲ್ಲಿ ಸೋತು ಪ್ಲೇಆಫ್ ತಲುಪುವ ಭರವಸೆಯನ್ನು ಬಹುತೇಕ ಕೈಬಿಟ್ಟಂತಾಗಿದೆ. ಇದೇ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇಆಫ್ ತಲುಪಿದ ಎರಡನೇ ತಂಡವೆನಿಸಿತು.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಭರವಸೆಯನ್ನು ಇನ್ನಷ್ಟು ಜೀವಂತವಾಗಿರಿಸಿದೆ. ಆದರೆ, ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇಬೇಕಿದೆ.

DC vs LSG IPL 2024 Delhi Capitals Defeat Lucknow Super Giants By 19 Runs In 64th Match

ಇತ್ತ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಭಿಷೇಕ್ ಪೊರೆಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತ್ತು.

209 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಅರ್ಷದ್ ಖಾನ್ ಅವರ ಅರ್ಧಶತಕದ ಹೋರಾಟದ ಹೊರತಾಗಿಯೂ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 189 ರನ್‌ ಗಳಿಸಲಷ್ಟೇ ಶಕ್ತವಾಯಿತು ಮತ್ತು 19 ರನ್‌ಗಳಿಂದ ಸೋಲನುಭವಿಸಿತು.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಇನ್ನಿಂಗ್ಸ್ ಆರಂಭಿಸಿದ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಮತ್ತೊಮ್ಮೆ ಉತ್ತಮ ಅರಂಭ ನೀಡಲು ವಿಫಲರಾದರು. ತಂಡದ ಮೊತ್ತ 5 ರನ್‌ಗಳಾಗಿದ್ದಾಗ 5 ರನ್‌ ಗಳಿಸಿದ್ದ ನಾಯಕ ಕೆಎಲ್ ರಾಹುಲ್ ಔಟಾಗಿ ನಿರಾಸೆ ಮೂಡಿಸಿದರು.

IPL 2024 RCB Playoffs Qualification Hopes Alive After DC Defeat LSG By 19 Runs

ನಂತರ ಬಂದ ಮಾರ್ಕಸ್ ಸ್ಟೋಯಿನಿಸ್ ಕೂಡ 5 ರನ್‌ ಗಳಿಸಿ ಔಟಾದರೆ, ದೀಪಕ್ ಹೂಡ ಸೊನ್ನೆ ಸುತ್ತಿದರು. ಇನ್ನು ಆಯುಷ್ ಬಡೋನಿ 6 ರನ್‌ಗಳಿಗೆ ತಮ್ಮ ಆಟ ಮುಗಿಸಿದರು.

ಈ ವೇಳೆ ನಿಕೋಲಸ್ ಪೂರನ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು ಮತ್ತು 27 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್‌ಗಳೊಂದಿಗೆ 61 ರನ್ ಬಾರಿಸಿದರು. ಕೃನಾಲ್ ಪಾಂಡ್ಯ 18 ಎಸೆತಗಳಲ್ಲಿ 2 ಬೌಂಡರಿ ಮೂಲಕ 18 ರನ್ ಗಳಿಸಿದರು.

ಕೊನೆಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಗೆಲುವಿಗೆ ಅರ್ಷದ್ ಖಾನ್ ಇನ್ನಿಲ್ಲದ ಹೋರಾಟ ನಡೆಸಿದರು. ಉಳಿದ ಬ್ಯಾಟರ್‌ಗಳಿಂದ ಉತ್ತಮ ಸಾಥ್ ಸಿಗಲಿಲ್ಲ. 33 ಎಸೆತಗಳಲ್ಲಿ 3 ಬೌಂಡರಿ ಹಾಗೂ 5 ಸಿಕ್ಸರ್ ಸಮೇತ 58 ರನ್ ಗಳಿಸಿ ಅಜೇಯರಾಗುಳಿದರು. ಯುಧ್‌ವೀರ್ ಸಿಂಗ್ 7 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 14 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಇಶಾಂತ್ ಶರ್ಮಾ 4 ಓವರ್‌ಗಳಲ್ಲಿ 34 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಖಲೀಲ್ ಅಹ್ಮದ್, ಅಕ್ಷರ್ ಪಟೇಲ್, ಮುಕೇಶ್ ಕುಮಾರ್, ಕುಲದೀಪ್ ಯಾದವ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ತಲಾ ಒಂದೊಂದು ವಿಕೆಟ್ ಪಡೆದರು.

ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಪೊರೆಲ್ ಮತ್ತು ಜೇಕ್ ಫ್ರೆಸರ್-ಮೆಕ್‌ಗುರ್ಕ್ ಉತ್ತಮ ಆರಂಭ ನೀಡಲಿಲ್ಲ. ಏಕೆಂದರೆ ತಂಡದ ಮೊತ್ತ 2 ರನ್‌ಗಳಾಗಿದ್ದಾಗ ಫ್ರೆಸರ್-ಮೆಕ್‌ಗುರ್ಕ್ ಡಕ್‌ಗೆ ಔಟಾದರು.

ನಂತರ ಬಂದ ಶಾಯ್ ಹೋಪ್ ಆಕ್ರಮಣಕಾರಿ ಆಟಕ್ಕೆ ಮುಂದಾದರು ಮತ್ತು 27 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 38 ರನ್ ಗಳಿಸಿದರು. ಅಲ್ಲದೆ, ಅಭಿಷೇಕ್ ಪೊರೆಲ್ ಜೊತೆಗೂಡಿ 92 ರನ್‌ಗಳ ಜೊತೆಯಾಟ ನಿರ್ಮಿಸಿದರು.

ಇನ್ನು ಆರಂಭಿಕ ಬ್ಯಾಟರ್ ಅಭಿಷೇಕ್ ಪೊರೆಲ್ ಸ್ಫೋಟಕ ಬ್ಯಾಟಿಂಗ್ ಮಾಡಿದರು ಮತ್ತು ಕೇವಲ 33 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಮೇತ 58 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ನಾಯಕ ರಿಷಭ್ ಪಂತ್ 23 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ 33 ರನ್ ಗಳಿಸಿ ಔಟಾದರು.

ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 25 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಮೂಲಕ ಅಜೇಯ 57 ರನ್ ಗಳಿಸಿದರೆ, ಅಕ್ಷರ್ ಪಟೇಲ್ 10 ಎಸೆತಗಳಲ್ಲಿ 2 ಬೌಂಡರಿ ಸಮೇತ ಅಜೇಯ 14 ರನ್ ಗಳಿಸಿದರು.

ಇನ್ನು ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ನವೀನ್-ಉಲ್-ಹಕ್ 4 ಓವರ್‌ಗಳಲ್ಲಿ 51 ರನ್ ನೀಡಿ 2 ವಿಕೆಟ್ ಪಡೆದರೆ, ಅರ್ಷದ್ ಖಾನ್ 3 ಓವರ್‌ಗಳಲ್ಲಿ 45 ರನ್ ನೀಡಿ 1 ವಿಕೆಟ್ ಮತ್ತು ರವಿ ಬಿಷ್ಣೋಯಿ 4 ಓವರ್‌ಗಳಲ್ಲಿ 26 ರನ್ ನೀಡಿ 1 ವಿಕೆಟ್ ಪಡೆದರು.

Story first published: Tuesday, May 14, 2024, 23:40 [IST]
Other articles published on May 14, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+