IPL 2024: ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ವಿರಾಟ್ ಕೊಹ್ಲಿ
ಭಾನುವಾರ, ಮೇ 26ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೂರನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿಯಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ 18.3 ಓವರ್‌ಗಳಲ್ಲಿ ಕೇವಲ 113 ರನ್‌ಗಳ ಐತಿಹಾಸಿಕ ಕಡಿಮೆ ಮೊತ್ತಕ್ಕೆ ಆಲೌಟ್ ಆಯಿತು.

114 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕೇವಲ 10.3 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ಗಡಿ ತಲುಪಿತು ಮತ್ತು 2024ರ ಐಪಿಎಲ್ ಅವೃತ್ತಿಯ ಚಾಂಪಿಯನ್ ಪಟ್ಟ ಅಲಂಕರಿಸಿತು.
ಇನ್ನು ಎಲಿಮಿನೇಟರ್‌ನಲ್ಲಿ ಸೋತು ಹೊರಬಿದ್ದ ಆರ್‌ಸಿಬಿ ತಂಡದ ಐಪಿಎಲ್ ಪ್ರಶಸ್ತಿಯ ಬರ ವಿಸ್ತರಿಸಿರಬಹುದು. ಆದರೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ಐಪಿಎಲ್ ದಾಖಲೆಯನ್ನು ಬರೆದಿದ್ದಾರೆ.
ಆರ್‌ಸಿಬಿ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಐಪಿಎಲ್ ಪಂದ್ಯಾವಳಿಯ ಇತಿಹಾಸದಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದ ಮೊದಲ ಭಾರತೀಯ ಎನಿಸಿಕೊಂಡರು.
ಐಪಿಎಲ್ 2024ರಲ್ಲಿ ಆಡಿದ 15 ಪಂದ್ಯಗಳಲ್ಲಿ 741 ರನ್‌ಗಳೊಂದಿಗೆ ಆವೃತ್ತಿಯನ್ನು ಪೂರ್ಣಗೊಳಿಸಿದ ವಿರಾಟ್ ಕೊಹ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಆರೆಂಜ್ ಕ್ಯಾಪ್ ಬಹುಮಾನ ಪಡೆದರು.
ಈ ಮೊದಲು ಡೇವಿಡ್ ವಾರ್ನರ್ (3) ಮತ್ತು ಕ್ರಿಸ್ ಗೇಲ್ (2) ನಂತರ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಆರೆಂಜ್ ಕ್ಯಾಪ್ ಗೆದ್ದ ಮೂರನೇ ಆಟಗಾರನಾದರು. ಈ ಋತುವಿನಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳನ್ನು ಬಾರಿಸಿದ ವಿರಾಟ್ ಕೊಹ್ಲಿ ಬ್ಯಾಟ್‌ನೊಂದಿಗೆ ಅದ್ಭುತ ಫಾರ್ಮ್‌ನಲ್ಲಿದ್ದರು.
ಐದು ಬಾರಿಯ ಚಾಂಪಿಯನ್ ಸಿಎಸ್‌ಕೆ ತಂಡವನ್ನು ನಿರ್ಣಾಯಕ ಪಂದ್ಯದಲ್ಲಿ ಸೋಲಿಸಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಪ್ಲೇಆಫ್ ತಲುಪಿತ್ತು. ಆದರೆ, ಬುಧವಾರದಂದು ನಡೆದ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತಿತು.

ವಿರಾಟ್ ಕೊಹ್ಲಿ 2016ರ ಆವೃತ್ತಿಯಲ್ಲಿ ಮೊದಲ ಬಾರಿಗೆ 973 ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಇದು ಇನ್ನೂ ಐಪಿಎಲ್‌ನ ಸಾರ್ವಕಾಲಿಕ ದಾಖಲೆಯಾಗಿ ಉಳಿದಿದೆ.
ಸಿಎಸ್‌ಕೆ ತಂಡದ ರುತುರಾಜ್ ಗಾಯಕ್ವಾಡ್ 14 ಪಂದ್ಯಗಳಲ್ಲಿ 583 ರನ್‌ಗಳೊಂದಿಗೆ ಎರಡನೇ ಸ್ಥಾನ ಪಡೆದರೆ, ರಾಜಸ್ಥಾನ್ ರಾಯಲ್ಸ್ ತಂಡದ ಯುವ ಬ್ಯಾಟರ್ ರಿಯಾನ್ ಪರಾಗ್ 16 ಪಂದ್ಯಗಳಲ್ಲಿ 573 ರನ್ ಗಳಿಸಿ ಅಗ್ರ 5ರಲ್ಲಿ ಸ್ಥಾನ ಪಡೆದ ಏಕೈಕ ಅನ್‌ಕ್ಯಾಪ್ಡ್ ಆಟಗಾರ ಎನಿಸಿಕೊಂಡರು.
ಐಪಿಎಲ್ 2024 - ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳು
- ವಿರಾಟ್ ಕೊಹ್ಲಿ - 15 ಪಂದ್ಯಗಳಲ್ಲಿ 741 ರನ್
- ರುತುರಾಜ್ ಗಾಯಕ್ವಾಡ್ - 14 ಪಂದ್ಯಗಳಲ್ಲಿ 583 ರನ್
- ರಿಯಾನ್ ಪರಾಗ್ - 16 ಪಂದ್ಯಗಳಲ್ಲಿ 573 ರನ್
- ಟ್ರಾವಿಸ್ ಹೆಡ್ - 15 ಪಂದ್ಯಗಳಲ್ಲಿ 567 ರನ್
- ಸಂಜು ಸ್ಯಾಮ್ಸನ್ - 16 ಪಂದ್ಯಗಳಲ್ಲಿ 531 ರನ್
ಐಪಿಎಲ್ 2024ರಲ್ಲಿ ವಿರಾಟ್ ಕೊಹ್ಲಿ ತಮ್ಮ ಸ್ಟ್ರೈಕ್-ರೇಟ್ ಟೀಕಾಕಾರರ ಬಾಯಿ ಮುಚ್ಚಿಸಿದರು. ಮುಂಬರುವ ಟಿ20 ವಿಶ್ವಕಪ್‌ಗೆ ಮುಂಚಿತವಾಗಿ ಎದುರಾಳಿ ತಂಡಗಳಿಗೆ ದೊಡ್ಡ ಸಂದೇಶ ನೀಡಿದರು. ಪವರ್‌ಪ್ಲೇನಲ್ಲಿ ಎದುರಾಳಿ ಬೌಲರ್‌ಗಳನ್ನು ಬೆವರಳಿಸುವ ಮೂಲಕ 154.69ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದರು.
ಜೂನ್ 1ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಪ್ರಾರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ಬ್ಯಾಟಿಂಗ್ ಫಾರ್ಮ್ ಅನ್ನು ಮುಂದುವರಿಸಬೇಕೆಂದು ಭಾರತ ಬಯಸುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications