RCB vs RR IPL 2024: ಪಿಂಕ್ ಸಿಟಿ ಜೈಪುರಕ್ಕೆ 'ರಾಯಲ್' ಎಂಟ್ರಿ ಕೊಟ್ಟ ಆರ್‌ಸಿಬಿ; ಪಂದ್ಯ ಯಾವಾಗ?
2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 17ನೇ ಅವೃತ್ತಿಯ ತಮ್ಮ ಮುಂದಿನ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಪಿಂಕ್ ಸಿಟಿ ಜೈಪುರಕ್ಕೆ ಬಂದಿಳಿದಿದೆ.
ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡವು ಶನಿವಾರ, ಏಪ್ರಿಲ್ 6ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ಆತಿಥೇಯ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಗುರುವಾರ, ಮಾರ್ಚ್ 4ರಂದು ಬೆಂಗಳೂರಿನಿಂದ ಜೈಪುರಕ್ಕೆ ವಿಮಾನದಲ್ಲಿ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ನೇತೃತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸ್ ತಮ್ಮ ಪ್ರಯಾಣದ ದಿನವನ್ನು ಹೊಂದಿತ್ತು.
ಐಪಿಎಲ್ 2024ರ ಪಂದ್ಯಾವಳಿಯಲ್ಲಿ ಆರ್‌ಸಿಬಿ ತಂಡವು ಇದುವರೆಗೆ 4 ಪಂದ್ಯಗಳನ್ನು ಆಡಿದ್ದು, ಮೂರು ಪಂದ್ಯಗಳಲ್ಲಿ ಸೋತು, ಕೇವಲ 1 ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 4 ಪಂದ್ಯಗಳಲ್ಲಿ 203 ರನ್ ಗಳಿಸಿ ತಂಡದ ಪರ ಅಗ್ರ ಸ್ಕೋರರ್ ಆಗಿದ್ದಾರೆ.

ಮತ್ತೊಂದೆಡೆ, ಜೈಪುರದ ಅವರ ತವರು ಮೈದಾನದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸುತ್ತಿರುವ ಕಾರಣ, ಆರ್‌ಸಿಬಿ ತಮ್ಮ ಅದೃಷ್ಟದಲ್ಲಿ ಬದಲಾವಣೆ ಹೊಂದಲು ಎದುರು ನೋಡುತ್ತಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಸೇರಿದಂತೆ ಆರ್‌ಸಿಬಿ ಆಟಗಾರರು ಜೈಪುರ ವಿಮಾನ ನಿಲ್ದಾಣದ ಕಂಡುಬಂದರು. ಇದನ್ನು ಆರ್‌ಸಿಬಿ ತಮ್ಮ ಪ್ರಯಾಣದ ದಿನದ ತುಣುಕುಗಳನ್ನು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತಮ್ಮ ಪ್ರಯಾಣದ ಕಿಟ್‌ಗೆ ಬ್ಯಾಗ್ ಪ್ಯಾಕ್‌ಗಳನ್ನು ಧರಿಸಿ ಜೈಪುರದಲ್ಲಿ ಅದ್ದೂರಿ ಸ್ವಾಗತವನ್ನು ಪಡೆದರು.
ರಾಜಸ್ಥಾನ್ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು: ಹೈ-ವೋಲ್ಟೇಜ್ ಕದನ
ತಮ್ಮ ತವರು ಮೈದಾನದಲ್ಲಿ ಬಲಿಷ್ಠವಾಗಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸುತ್ತಿರುವ ಆರ್‌ಸಿಬಿ ಮತ್ತೊಂದು ಕಠಿಣ ಎದುರಾಳಿಯನ್ನು ಎದುರಿಸುತ್ತಿದೆ. ವ್ಯತಿರಿಕ್ತ ಫಲಿತಾಂಶಗಳ ಹಿನ್ನೆಲೆಯಲ್ಲಿ ಉಭಯ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.

ರಾಜಸ್ಥಾನ್ ರಾಯಲ್ಸ್ ಆಡಿದ 3 ಪಂದ್ಯಗಳಲ್ಲಿ ಸತತ 3 ಗೆಲುವಿನೊಂದಿಗೆ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಲಕ್ನೋ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತವರಿನಲ್ಲಿ ತಮ್ಮ ಮೊದಲ 2 ಪಂದ್ಯಗಳನ್ನು ಗೆದ್ದ ನಂತರ, ಮುಂಬೈ ಇಂಡಿಯನ್ಸ್ ತಂಡಕ್ಕೆ ಅವೃತ್ತಿಯ 3ನೇ ಸೋಲನ್ನು ನೀಡಲು ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈಗೆ ಪ್ರಯಾಣಿಸಿತು.
ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲು ತಮ್ಮ ತವರು ನೆಲಕ್ಕೆ ಹಿಂದಿರುಗುತ್ತಿದ್ದಂತೆ, ರಾಜಸ್ಥಾನ್ ರಾಯಲ್ಸ್ ತಮ್ಮ ಗೆಲುವಿನ ನಾಗಾಲೋಟವನ್ನು ಮುಂದುವರೆಸಲು ಎದುರು ನೋಡುತ್ತಿದೆ.
ಇದೇ ವೇಳೆ ಆರ್‌ಸಿಬಿ ತಂಡವು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಸೋತಿತು ಮತ್ತು ತವರಿನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದ ಬಳಿಕ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ ಸತತ ಎರಡು ಪಂದ್ಯಗಳನ್ನು ಕಳೆದುಕೊಂಡಿತು.
ಆರ್‌ಸಿಬಿ ತಂಡವು ಜೈಪುರದಲ್ಲಿ ನೆಟ್ಸ್‌ನಲ್ಲಿ ಅಭ್ಯಾಸ ಪ್ರಾರಂಬಿಸುವ ಮೊದಲು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ಮಣಿಸಿ ಗೆಲುವಿನ ಹಳಿಗೆ ಮರಳಲು ಹವಣಿಸುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications