RCB Unbox Event 2024: ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ನ ಸಮಯ, ಲೈವ್ ಸ್ಟ್ರೀಮಿಂಗ್, ಸೆಲೆಬ್ರಿಟಿ ಪಟ್ಟಿ
ಭಾನುವಾರ, ಮಾರ್ಚ್ 17ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಹಿಳಾ ತಂಡವು 2024ರ ಮಹಿಳಾ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು.
ಇದೀಗ ಮುಂಬರುವ 2024ರ ಐಪಿಎಲ್‌ನ 17ನೇ ಋತುವಿನಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ಪುರುಷರ ತಂಡವು ತಮ್ಮ ಟ್ರೋಫಿ ಬರವನ್ನು ಕೊನೆಗೊಳಿಸಲು ಎದುರು ನೋಡುತ್ತಿದ್ದಾರೆ.

ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್‌ಗಳ ಗೆಲುವಿನೊಂದಿಗೆ ತಮ್ಮ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಾಗ ಇದು ನೆನಪಿಡುವ ಐತಿಹಾಸಿಕ ದಿನವಾಗಿದೆ.
ಗೆಲುವಿನ ನಂತರ, ಮಾರ್ಚ್ 19ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಹುನಿರೀಕ್ಷಿತ ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ಹಾಜರಾಗುವುದಾಗಿ ಎಂದು ಸ್ಮೃತಿ ಮಂಧಾನ ದೃಢಪಡಿಸಿದರು.
ಪ್ರತಿ ವರ್ಷದಂತೆ, 2024ರ ಐಪಿಎಲ್ ಪಂದ್ಯಾವಳಿಯ ಆರಂಭಕ್ಕೂ ಮೊದಲು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್‌ಬಾಕ್ಸಿಂಗ್ ಸಮಾರಂಭವನ್ನು ಆಯೋಜಿಸುತ್ತಿದೆ. ಸೋಮವಾರ ಬೆಳ್ಳಂಬೆಳಗ್ಗೆ ಬೆಂಗಳೂರು ತಲುಪಿರುವ ಭಾರತ ಮತ್ತು ಆರ್‌ಸಿಬಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಭಾಗವಹಿಸಲಿದ್ದಾರೆ.

ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್ ಕುರಿತ ಮಾಹಿತಿ
ದಿನಾಂಕ ಮತ್ತು ಸಮಯ: ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್ ಮಂಗಳವಾರ, ಮಾರ್ಚ್ 19ರಂದು ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಪ್ರಾರಂಭವಾಗುತ್ತದೆ.
ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್ ಎಲ್ಲಿ ವೀಕ್ಷಿಸಬಹುದು?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಆಯೋಜಿಸಿರುವ ಅನ್‌ಬಾಕ್ಸ್ ಈವೆಂಟ್ ಅನ್ನು ಆರ್‌ಸಿಬಿ YouTube ಚಾನಲ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಿದೆ. ಅಲ್ಲದೆ, ತಂಡದ ಇತರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಅಭಿಮಾನಿಗಳಿಗಾಗಿ ಈವೆಂಟ್ ಅನ್ನು ಲೈವ್ ಸ್ಟ್ರೀಮ್ ಮಾಡಲಾಗುತ್ತದೆ.
ಇನ್ನು 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗೆ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರನ್ನು ಬದಲಾಯಿಸಲಿದೆ. Royal Challengers Bangalore ಬದಲಿಗೆ Royal Challengers Bengaluru ಹೆಸರಿನಲ್ಲಿ ಬದಲಾಯಿಸಬಹುದು. ಫ್ರಾಂಚೈಸಿ ಅದನ್ನು ಅನ್‌ಬಾಕ್ಸ್ ಈವೆಂಟ್‌ನಲ್ಲಿ ಘೋಷಿಸಬಹುದು.
ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ನಲ್ಲಿ ಮನರಂಜನಾ ಪ್ರದರ್ಶನ ನೀಡುವವರು ಯಾರು?
ಅಲನ್ ವಾಕರ್, ರಘು ದೀಕ್ಷಿತ್, ನೀತಿ ಮೋಹನ್ ಬ್ರೋಧಾ, ವಿ ಜೋರ್ಡಿಂಡಿಯನ್, ಬರ್ಫಿ ಕಚ್ಚೇರಿ
ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ಯಾವ ಸೆಲೆಬ್ರಿಟಿಗಳು ಹಾಜರಾಗಲಿದ್ದಾರೆ?
ರಿಷಬ್ ಶೆಟ್ಟಿ, ಅಶ್ವಿನಿ ಪುನೀತ್, ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ರಶ್ಮಿಕಾ ಮಂದಣ್ಣ, ಸ್ಮೃತಿ ಮಂಧಾನ ಮತ್ತು ಮಹಿಳಾ ತಂಡ, ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ ಮತ್ತು ಆರ್‌ಸಿಬಿ ಪುರುಷರ ತಂಡ.
2024ರ ಐಪಿಎಲ್‌ಗೆ ಆರ್‌ಸಿಬಿ ಪೂರ್ಣ ತಂಡ:
ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೊರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ಡಾಗರ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications