IPL 2024: ಪ್ಲೇಆಫ್ ನಿರ್ಧಾರಕ ಪಂದ್ಯದಲ್ಲಿ RCB vs CSK ಕದನ; ಟಾಸ್ ವರದಿ, ಆಡುವ 11ರ ಬಳಗ
ಶನಿವಾರ, ಮೇ 18ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 68ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳು ಸೆಣಸಾಡಲಿವೆ.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಮಾಡುವ ಆಯ್ಕೆ ಮಾಡಿಕೊಂಡರು. ಹೀಗಾಗಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬೌಲಿಂಗ್ ಮಾಡಲಿದೆ.

ಉಭಯ ತಂಡಗಳು ಐಪಿಎಲ್ 2024ರ ಅಂತಿಮ ಪ್ಲೇಆಫ್ ಸ್ಥಾನಕ್ಕಾಗಿ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿವೆ. ಈಗಾಗಲೇ, ಕೆಕೆಆರ್, ರಾಜಸ್ಥಾನ್ ರಾಯಲ್ಸ್ ಮತ್ತಿ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಪ್ಲೇಆಫ್‌ನ ಮೂರು ಸ್ಥಾನಗಳನ್ನು ಖಚಿತಪಡಿಸಿಕೊಂಡಿವೆ.
ಆರ್‌ಸಿಬಿ ಮತ್ತು ಸಿಎಸ್‌ಕೆ ಪಂದ್ಯಕ್ಕೆ ನಿರೀಕ್ಷಿತವಾಗಿ ಮಳೆಯ ಭೀತಿ ಇದ್ದರೂ, ಈವರೆಗೆ ಮಳೆ ಸುರಿಯದಿರುವುದು ಪೂರ್ಣ ಪಂದ್ಯ ನಡೆಯುವ ಮುನ್ಸೂಚನೆ ದೊರೆತಿದೆ.
ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದುವರೆಗೆ ಆಡಿದ 13 ಪಂದ್ಯಗಳಲ್ಲಿ 14 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ ಮತ್ತು ಪ್ರಸ್ತುತ ನೆಟ್ ರನ್ ರೇಟ್ +0.528 ಆಗಿದೆ.
ಮತ್ತೊಂದೆಡೆ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಈವರೆಗೆ ಆಡಿದ 13 ಪಂದ್ಯಗಳಿಂದ 12 ಅಂಕಗಳನ್ನು ಮತ್ತು +0.387ರ ನೆಟ್ ರನ್ ರೇಟ್‌ನೊಂದಿಗೆ 6ನೇ ಸ್ಥಾನದಲ್ಲಿದೆ. ಹೀಗಾಗಿ, ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಗೆಲ್ಲುವುದು ಮಾತ್ರವಲ್ಲದೆ, ನೆಟ್ ರನ್ ರೇಟ್ ಅನ್ನು ಉತ್ತಮಗೊಳಿಸಬೇಕಾಗುತ್ತದೆ.

ಪ್ಲೇಆಫ್‌ನ ಅಂತಿಮ 4ನೇ ಸ್ಥಾನ ಪಡೆಯಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಿಎಸ್‌ಕೆ ತಂಡವನ್ನು ಕನಿಷ್ಠ 11 ಎಸೆತಗಳು ಅಥವಾ 18 ರನ್‌ಗಳ ಅಂತರದಿಂದ ಸೋಲಿಸಬೇಕಾಗಿದೆ. ಇಲ್ಲದಿದ್ದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ನೆಟ್ ರನ್ ರೇಟ್‌ನಿಂದ ಪ್ಲೇಆಫ್‌ಗೆ ಪ್ರವೇಶಿಸುತ್ತದೆ.
ಇದೇ ವೇಳೆ, ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಐಪಿಎಲ್ ಇತಿಹಾಸದಲ್ಲಿ 8000 ರನ್ ಗಡಿ ದಾಟಿದ ಮೊದಲ ಬ್ಯಾಟರ್ ಆಗಲು 76 ರನ್ ಅಂತರದಲ್ಲಿದ್ದಾರೆ.
ಟಾಸ್ ವೇಳೆ ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಅವರು ವಿಲ್ ಜ್ಯಾಕ್ಸ್ ಇಂಗ್ಲೆಂಡ್‌ಗೆ ಮರಳಿದ್ದಾರೆ ಮತ್ತು ಅವರ ಬದಲಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಆಡಲಿದ್ದಾರೆ ಎಂದು ಹೇಳಿದರು.
ಆರ್‌ಸಿಬಿ vs ಸಿಎಸ್‌ಕೆ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಆರ್‌ಸಿಬಿ vs ಸಿಎಸ್‌ಕೆ ತಂಡಗಳ ಆಡುವ 11ರ ಬಳಗ
ಚೆನ್ನೈ ಸೂಪರ್ ಕಿಂಗ್ಸ್: ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ಡ್ಯಾರಿಲ್ ಮಿಚೆಲ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್, ಮಹೀಶ್ ತೀಕ್ಷಣ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಯಶ್ ದಯಾಳ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications