For Quick Alerts
ALLOW NOTIFICATIONS  
For Daily Alerts
 

RCB vs LSG: ಕರ್ನಾಟಕ ಟೀಂ vs ಕರ್ನಾಟಕ ಬಾಯ್ಸ್ ನಡುವಿನ ಹಣಾಹಣಿ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ

ಸದ್ಯ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಕ್ರಿಕೆಟ್ ಪ್ರೇಮಿಗಳ ಗಮನವು ಮತ್ತೊಮ್ಮೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಹೊರಳುತ್ತದೆ.

ಮಂಗಳವಾರ, ಏಪ್ರಿಲ್ 2ರಂದು ನಡೆಯಲಿರುವ ಐಪಿಎಲ್ 2024ರ ಪಂದ್ಯಾವಳಿಯ 15ನೇ ಪಂದ್ಯದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡದ ವಿರುದ್ಧ ಸೆಣಸಾಡಲಿದೆ.

ipl-2024-rcb-vs-lsg-match-report

ಈ ಪಂದ್ಯ ಒಂದು ರೀತಿ ಕರ್ನಾಟಕ ತಂಡ vs ಕರ್ನಾಟಕ ಹುಡುಗರು ಆದಂತಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಕರ್ನಾಟಕದ ತಂಡವಾಗಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್ ಮತ್ತು ಕೃಷ್ಣಪ್ಪ ಗೌತಮ್ ಆಡುತ್ತಿದ್ದಾರೆ.

ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ತನ್ನ ಕೊನೆಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ತವರಿನಲ್ಲಿ ಸೋತ ಕಾರಣ, ಇಂದಿನ ಪಂದ್ಯದಲ್ಲಿ ಪುಟಿದೇಳಲು ಎದುರು ನೋಡುತ್ತಿದೆ.

ಮತ್ತೊಂದೆಡೆ, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ತಮ್ಮ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿದ್ದು, ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಹೆಚ್ಚಿನ ಆತ್ಮವಿಶ್ವಾಸದೊಂದಿಗೆ ಮೈದಾನಕ್ಕಿಳಿಯಲಿದ್ದಾರೆ.

ಆರ್‌ಸಿಬಿ ತಂಡ ಈ ಅವೃತ್ತಿಯಲ್ಲಿ ಇದುವರೆಗೆ ಮೂರು ಪಂದ್ಯಗಳನ್ನು ಆಡಿದ್ದು, ಒಂದು ಗೆಲುವು ಮತ್ತು ಎರಡು ಸೋಲಿನೊಂದಿಗೆ ಎರಡು ಅಂಕಗಳನ್ನು ಗಳಿಸಿ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ipl-2024-rcb-vs-lsg-match-report

ಮತ್ತೊಂದೆಡೆ, ಲಕ್ನೋ ಸೂಪರ್ ಜೈಂಟ್ಸ್ ಇದುವರೆಗೆ ಆಡಿದ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಒಂದು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಂಬರುವ ಪಂದ್ಯದಲ್ಲಿ ಈ ಋತುವಿನ ತಮ್ಮ ಎರಡನೇ ಪಂದ್ಯವನ್ನು ಗೆಲ್ಲುವ ಭರವಸೆ ಹೊಂದಿದೆ.

ಆರ್‌ಸಿಬಿ vs ಎಲ್‌ಎಸ್‌ಜಿ ಪಂದ್ಯದ ವಿವರ

ಸ್ಥಳ ಮತ್ತು ದಿನಾಂಕ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಂಗಳವಾರ, ಏಪ್ರಿಲ್ 2ರಂದು ಮುಖಾಮುಖಿಯಾಗಲಿವೆ.

ಪಂದ್ಯದ ಸಮಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ನಡೆಯಲಿದೆ.

ipl-2024-rcb-vs-lsg-match-report

ಆರ್‌ಸಿಬಿ vs ಎಲ್‌ಎಸ್‌ಜಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಮೊಬೈಲ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಬಯಸುವ ವೀಕ್ಷಕರು JioCinema ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ನೋಡಬಹುದು.

ಆರ್‌ಸಿಬಿ vs ಎಲ್‌ಎಸ್‌ಜಿ ಸಂಭಾವ್ಯ ಆಡುವ 11ರ ಬಳಗ

ಆರ್‌ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಮಯಾಂಕ್ ಡಾಗರ್, ವಿಜಯ್‌ಕುಮಾರ್ ವೈಶಾಕ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್.

ಎಲ್‌ಎಸ್‌ಜಿ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ನಿಕೋಲಸ್ ಪೂರನ್ (ನಾಯಕ), ಮಾರ್ಕ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ಆಯುಷ್ ಬದೋನಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಮಣಿಮಾರನ್ ಸಿದ್ಧಾರ್ಥ್.

Story first published: Tuesday, April 2, 2024, 8:00 [IST]
Other articles published on Apr 2, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+