IPL 2024 RCB vs PBKS: ಆರ್‌ಸಿಬಿಗೆ ಸ್ಪರ್ಧಾತ್ಮಕ ಮೊತ್ತದ ಗುರಿ ನೀಡಿದ ಪಂಜಾಬ್ ಕಿಂಗ್ಸ್
ತವರಿನ ಅಂಗಳದಲ್ಲಿ ಸೊಗಸಾದ ಆಟದ ಪ್ರದರ್ಶನ ನೀಡಿದ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಫಲವಾಗಿದೆ. ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 176 ರನ್ ಸೇರಿಸಿತು.
ಟಾಸ್ ಸೋತು ಬ್ಯಾಟ್ ಮಾಡಿದ ಪಂಜಾಬ್ ತಂಡದ ಆರಂಭ ಕಳಪೆಯಾಗಿತ್ತು. ಜಾನಿ ಬೇರ್‌ಸ್ಟೋ 8 ರನ್ ಗಳಿಸಿ ಮುನ್ನುಗುತ್ತಿದ್ದಾಗ ಇಲ್ಲದ ಹೊಡೆತಕ್ಕೆ ಮುಂದಾಗಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ವಿರಾಟ್ ಕೊಹ್ಲಿ ಅವರಿಗೆ ಕ್ಯಾಚ್ ನೀಡಿದರು.

ಎರಡನೇ ವಿಕೆಟ್‌ಗೆ ಅರ್ಧಶತಕದ ಜೊತೆಯಾಟ
ಎರಡನೇ ವಿಕೆಟ್‌ಗೆ ನಾಯಕ ಶಿಖರ್ ಧವನ್ ಅವರನ್ನು ಸೇರಿಕೊಂಡ ಭರವಸೆಯ ಬ್ಯಾಟರ್ ಪ್ರಭಾಸಿಮ್ರಾನ್ ಸಿಂಗ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಆರ್‌ಸಿಬಿ ಬೌಲರ್‌ಗಳು ವಿಫಲರಾದರು.ಈ ಜೋಡಿ 38 ಎಸೆತಗಳಲ್ಲಿ 55 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಉತ್ತಮ ಲಯದಲ್ಲಿ ಕಾಣುತ್ತಿದ್ದ ಪ್ರಭಾಸಿಮ್ರಾನ್ ಸಿಂಗ್ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 25 ರನ್ ಸಿಡಿಸಿ ಮ್ಯಾಕ್ಸ್‌ವೆಲ್‌ಗೆ ವಿಕೆಟ್ ಒಪ್ಪಿಸಿದರು.
ಮೂರನೇ ವಿಕೆಟ್‌ಗೆ ತಂಡಕ್ಕೆ ಆಧಾರವಾಗುವ ಸೂಚನೆ ಲಿಯಾಮ್ ಲಿವಿಂಗ್‌ಸ್ಟೋನ್ ಹಾಗೂ ಶಿಖರ್ ಧವನ್ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತುಕೊಂಡು ರನ್ ಕಲೆ ಹಾಕುವ ಪ್ರಯತ್ನ ನಡೆಸಿದರು. ಈ ಜೋಡಿ 19 ಎಸೆತಗಳಲ್ಲಿ 26 ರನ್ ಸಿಡಿಸಿತು. ಲಿಯಾಮ್ ಲಿವಿಂಗ್‌ಸ್ಟೋನ್ ಆಟಕ್ಕೆ ಅಲ್ಜರಿ ಜೋಸೆಫ್ ಕಡಿವಾಣ ಹಾಕಿದರು.ಸೊಗಸಾಗಿ ಆಡುತ್ತಿದ್ದ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಅವರ ಆಟ 45 ರನ್‌ಗಳಿಗೆ ಕೊನೆಗೊಂಡಿತು. ಇವರ ಮನಮೋಹಕ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ, 1 ಸಿಕ್ಸರ್ ಸೇರಿವೆ.
ಸ್ಯಾಮ್, ಜಿತೇಶ್ ಉತ್ತಮ ಜೊತೆಯಾಟ
ಆಲ್‌ರೌಂಡರ್ ಸ್ಯಾಮ್ ಕರನ್ ಹಾಗೂ ವಿಕೆಟ್ ಕೀಪರ್ ಜಿತೇಶ್ ಶರ್ಮಾ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 34 ಎಸೆತಗಳಲ್ಲಿ 52 ರನ್‌ಗಳನ್ನು ಕಲೆ ಹಾಕಿ ತಂಡ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕುವಲ್ಲಿ ನೆರವಾಯಿತು. ಸ್ಯಾಮ್ ಕರನ್ 3 ಬೌಂಡರಿ ನೆರವಿನಿಂದ 23 ರನ್ ಬಾರಿಸಿದರೆ, ಜಿತೇಶ್ ಶರ್ಮಾ 27 ರನ್ ಸಿಡಿಸಿ ಔಟ್ ಆದರು.
ಡೆತ್ ಓವರ್‌ನಲ್ಲಿ ಮಿಂಚಿದ ಶಶಾಂಕ್ ಸಿಂಗ್
ಡೆತ್ ಓವರ್‌ನಲ್ಲಿ ಬ್ಯಾಟಿಂಗ್ ಮಾಡಲು ಬಂದ ಶಶಾಂಕ್ ಸಿಂಗ್ ಮನಮೋಹಕ ಬ್ಯಾಟಿಂಗ್ ನಡೆಸಿದರು. ಕೇವಲ 8 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ ಸಹಾಯದಿಂದ 262.50 ಸ್ಟ್ರೈಕ್ ರೇಟ್ ನೆರವಿನಿಂದ 21 ರನ್ ಸಿಡಿಸಿದರು.
ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್ ಹಾಗೂ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್ ತಲಾ ಎರಡು ವಿಕೆಟ್ ಪಡೆದರು. ಯಶ್ ದಯಾಲ್, ಅಲ್ಜಾರಿ ಜೋಸೆಫ್ ತಲಾ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications