ಸೋಮವಾರ, ಮಾರ್ಚ್ 25ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಪ್ರವಾಸಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ.
ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಹೋಳಿ ಹಬ್ಬದ ದಿನದಂದು ಬೆಂಗಳೂರಿನ ತವರು ಅಭಿಮಾನಿಗಳ ಎದುರು ಪಂಜಾಬ್ ಕಿಂಗ್ಸ್ ಮಣಿಸುವ ಮೂಲಕ ತಮ್ಮ ಮೊದಲ ಗೆಲುವು ದಾಖಲಿಸಲು ಆರ್‌ಸಿಬಿ ಎದುರು ನೋಡುತ್ತಿದೆ.

2024ರ ಐಪಿಎಲ್‌ನ ಆರಂಭಿಕ ಪಂದ್ಯದಲ್ಲಿ ಆರ್‌ಸಿಬಿ ನೀಡಿದ್ದ 174 ರನ್‌ಗಳ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೇವಲ 18.4 ಓವರ್‌ಗಳಲ್ಲಿ ಬೆನ್ನಟ್ಟಿ 6 ವಿಕೆಟ್‌ಗಳ ಗೆಲುವು ಸಾಧಿಸಿತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ದೌರ್ಬಲ್ಯ ಮತ್ತೊಮ್ಮೆ ಬಹಿರಂಗಗೊಂಡಿತು.
ಮತ್ತೊಂಡೆದೆ, ತಮ್ಮ ಋತುವಿನ ಆರಂಭಿಕ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದ ನಂತರ, ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಅವರು ಆರ್‌ಸಿಬಿ ತಂಡವನ್ನು ಎದುರಿಸುವಾಗ ಹೆಚ್ಚಿನ ಆತ್ಮವಿಶ್ವಾಸದಲ್ಲಿರುತ್ತದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2024ರ 6ನೇ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಿದೆ. ಭಾರತದ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ.
ಮತ್ತೊಂದೆಡೆ, ಜಿಯೋಸಿನಿಮಾ ಐಪಿಎಲ್ ಲೈವ್ ಸ್ಟ್ರೀಮಿಂಗ್ ಹಕ್ಕುಗಳನ್ನು ಹೊಂದಿದ್ದು, ಪಂದ್ಯವನ್ನು ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಸಂಪೂರ್ಣವಾಗಿ ಉಚಿತವಾಗಿ ಲಭ್ಯವಿರುತ್ತದೆ.
ಆರ್‌ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಮಯಾಂಕ್ ಡಾಗರ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಅಲ್ಜಾರಿ ಜೋಸೆಫ್,
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭ್‌ಸಿಮ್ರಾನ್ ಸಿಂಗ್, ಸ್ಯಾಮ್ ಕರ್ರಾನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹಾರ್.