IPL 2024: SRH ವಿರುದ್ಧ RCB ಸಂಭಾವ್ಯ ಆಡುವ 11ರ ಬಳಗ; ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಸ್ಥಾನವಿದೆಯೇ?
2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಅವೃತ್ತಿಯಲ್ಲಿ ಸಂಪೂರ್ಣವಾಗಿ ವಿನಾಶಕಾರಿ ಅಭಿಯಾನ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಸೋಮವಾರ, ಏಪ್ರಿಲ್ 15ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡಯಲಿರುವ 30ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ವಿರುದ್ಧ ಸೆಣಸಾಡಲಿದೆ.
ಸದ್ಯ ನಡೆಯುತ್ತಿರುವ ಐಪಿಎಲ್ 2024ರ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಆಡಿದ ಆರು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಸೋತಿದ್ದು, ಈ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೂ, ಉಳಿದ ಆಟಗಾರರ ಬೆಂಬಲದ ಕೊರತೆಯಿಂದಾಗಿ ಅಭಿಮಾನಿಗಳು ನಿರೀಕ್ಷಿಸಿದ ಫಲಿತಾಂಶ ಪಡೆಯಲು ವಿಫಲವಾಗಿದೆ.

ಇನ್ನು ಆರ್‌ಸಿಬಿ ತಂಡದ ಪರಿಸ್ಥಿತಿ ಇನ್ನಷ್ಟು ಹದಗೆಡಿಸಲು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮುಂಬರುವ ಪಂದ್ಯದಲ್ಲಿ ಆರ್‌ಸಿಬಿ ತಂಡವು ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಸೇವೆಯನ್ನು ಹೊಂದಿರುವುದಿಲ್ಲ.
ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಆರ್‌ಸಿಬಿ ತಂಡದ ಕೊನೆಯ ಪಂದ್ಯದ ವೇಳೆ ಆಸ್ಟ್ರೇಲಿಯಾದ ಆಲ್‌ರೌಂಡರ್ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು.
ಆದಾಗ್ಯೂ, ಗ್ಲೆನ್ ಮ್ಯಾಕ್ಸ್‌ವೆಲ್ ಅನುಪಸ್ಥಿತಿಯಲ್ಲಿ ಆರ್‌ಸಿಬಿ ತಂಡದ ದುಬಾರಿ ಆಟಗಾರ ಕ್ಯಾಮೆರಾನ್ ಗ್ರೀನ್ ಅವರನ್ನು ಆಡುವ 11ರ ಬಳಗಕ್ಕೆ ಮರಳಿ ಕರೆತರಲಿದೆ.
ಸ್ಫೋಟಕ ಬ್ಯಾಟರ್ ವಿಲ್ ಜ್ಯಾಕ್ಸ್‌ಗೆ ಅವಕಾಶ ಮಾಡಿಕೊಡಲು ಕ್ಯಾಮೆರಾನ್ ಗ್ರೀನ್ ಅವರನ್ನು ಹಿಂದಿನ ಪಂದ್ಯದಲ್ಲಿ ಕೈಬಿಡಲಾಗಿತ್ತು. ಇದೀಗ ಆಸ್ಟ್ರೇಲಿಯಾ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದಾಗಿ, ಅದೇ ದೇಶದ ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ ಮತ್ತೆ ಆಡುವ ನಿರೀಕ್ಷೆಯಿದೆ.
ಉಳಿದ ಆಟಗಾರರ ಪೈಕಿ ಯಶ್ ದಯಾಳ್ ಆಡುವ 11ರ ಬಳಗಕ್ಕೆ ಮರಳುವ ಸಾಧ್ಯತೆಯಿದೆ. ಮುಂಬೈ ಇಂಡಿಯನ್ಸ್ ವಿರುದ್ಧ 3.5 ಓವರ್‌ಗಳಲ್ಲಿ 56 ರನ್ ಬಿಟ್ಟುಕೊಟ್ಟ ಆಕಾಶ್ ದೀಪ್ ಅವರನ್ನು ಕೈಬಿಡಲು ನಿರ್ಧರಿಸಲಾಗಿದೆ.
ಆರ್‌ಸಿಬಿ vs ಎಸ್‌ಆರ್‌ಎಚ್ ಹೆಡ್-ಟು-ಹೆಡ್ ದಾಖಲೆ
ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಒಟ್ಟಾರೆ 23 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ ತಂಡ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ 12 ಬಾರಿ ಗೆದ್ದು ಮುನ್ನಡೆ ಸಾಧಿಸಿದ್ದು, ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಆಡುವ 11ರ ಬಳಗ
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಲಾಕಿ ಫರ್ಗ್ಯುಸನ್, ವಿಜಯ್‌ಕುಮಾರ್ ವೈಶಾಕ್, ರಾಜನ್ ಕುಮಾರ, ಯಶ್ ದಯಾಳ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications