Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB: ದುಬಾರಿ ಆಟಗಾರರನ್ನು ಬಿಡುಗಡೆ ಮಾಡಿದ ಆರ್‌ಸಿಬಿ; ಉಳಿದುಕೊಂಡ ಆಟಗಾರರ ಪಟ್ಟಿ, ಪರ್ಸ್ ಮೌಲ್ಯ

2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿಗೆ ಮುಂಚಿತವಾಗಿ ಎಲ್ಲಾ 10 ಐಪಿಎಲ್ ಫ್ರಾಂಚೈಸಿಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ ಮತ್ತು ಇದಕ್ಕೂ ಮುನ್ನ ನಡೆಯುವ ಮಿನಿ ಹರಾಜಿಗೆ ಸಜ್ಜಾಗಿವೆ.

2024ರ ಐಪಿಎಲ್‌ಗಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನ ಗಡುವಿನ ದಿನವಾದ ಇಂದು (ನವೆಂಬರ್ 26) ಎಲ್ಲಾ ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡ ಮತ್ತು ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ಸಲ್ಲಿಸಿವೆ.

IPL 2024: Royal Challenfers Bangalore Releases Expensive Players; Here is the List of Retained Players

ಇದೇ ವೇಳೆ ಕರ್ನಾಟಕ ಸೇರಿದಂತೆ ದೇಶದ ಕ್ರಿಕೆಟ್ ಪ್ರೇಮಿಗಳ ಹಾರ್ಟ್‌ಬೀಟ್, ಜನಪ್ರಿಯ ಕ್ರಿಕೆಟ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಕೂಡ ತನ್ನ ಉಳಿಸಿಕೊಂಡ ಮತ್ತು ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿಯನ್ನು ಬಹಿರಂಗಪಡಿಸಿದೆ.

ಬಿಡ್ಡಿಂಗ್ ಯುದ್ಧಕ್ಕೆ ಹೋಗುವುದಕ್ಕೂ ಮುನ್ನ ಕೆಲವು ದುಬಾರಿ ಸ್ಟಾರ್ ಆಟಗಾರರನ್ನು ಆರ್‌ಸಿಬಿ ಬಿಡುಗಡೆಗೊಳಿಸಿದೆ. ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹೇಜಲ್‌ವುಡ್ ಸೇರಿದಂತೆ 11 ಆಟಗಾರರನ್ನು ಹರಾಜಿಗೆ ಕಳುಹಿಸಿದೆ.

ಫಾಫ್ ಡು ಪ್ಲೆಸಿಸ್ ನಾಯಕನಾಗಿ ಮುಂದುವರಿಯಲು ಸಿದ್ಧವಾಗಿದ್ದಾರೆ ಮತ್ತು ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ ಸೇರಿದಂತೆ ಹಲವು ಆಟಗಾರರನ್ನು ಉಳಿಸಿಕೊಂಡಿದೆ.

ದುಬಾರಿ ಆಟಗಾರರನ್ನು ಬಿಡುಗೆಡ ಮಾಡಿದ ನಂತರ, ಆರ್‌ಸಿಬಿ ತಂಡದ ಬಳಿ 40.75 ಕೋಟಿ ರೂಪಾಯಿಗಳ ಪರ್ಸ್ ಮೊತ್ತವನ್ನು ಹೊಂದಿದ್ದು, ಮಿನಿ ಹರಾಜಿನಲ್ಲಿ ಇನ್ನಷ್ಟು ಸ್ಟಾರ್ ಆಟಗಾರರನ್ನು ಖರೀದಿಸಲು ಎದುರು ನೋಡುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಉಳಿಸಿಕೊಂಡ ಆಟಗಾರರು: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೋಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ವೈಶಾಕ್ ವಿಜಯ್‌ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್.

ಬಿಡುಗಡೆಯಾದ ಆಟಗಾರರು: ವನಿಂದು ಹಸರಂಗ, ಜೋಶ್ ಹ್ಯಾಜಲ್‌ವುಡ್, ಹರ್ಷಲ್ ಪಟೇಲ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್, ಕೇದಾರ್ ಜಾಧವ್.

ಟ್ರೇಡ್ ಮಾಡಿದ ಆಟಗಾರರು: ಮಯಾಂಕ್ ಡಾಗರ್ (ಸನ್‌ರೈಸರ್ಸ್ ಹೈದರಾಬಾದ್‌ನಿಂದ)

Story first published: Sunday, November 26, 2023, 18:54 [IST]
Other articles published on Nov 26, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+