RCB vs LSG: ಕ್ವಿಂಟನ್ ಡಿ ಕಾಕ್ ಭರ್ಜರಿ ಬ್ಯಾಟಿಂಗ್; ಆರ್‌ಸಿಬಿಗೆ ಸವಾಲಿನ ಗುರಿ ನೀಡಿದ ಎಲ್‌ಎಸ್‌ಜಿ
ಮಂಗಳವಾರ, ಏಪ್ರಿಲ್ 2ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು ಸವಾಲಿನ ಮೊತ್ತವನ್ನು ಗಳಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಕಿಂಗ್ಸ್ ತಂಡ ಕ್ವಿಂಟನ್ ಡಿ ಕಾಕ್ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ನಿಗದಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್‌ಗಳನ್ನು ಕಲೆಹಾಕಿದ್ದು, ಆರ್‌ಸಿಬಿ ತಂಡಕ್ಕೆ 182 ರನ್‌ಗಳ ಗುರಿ ನೀಡಿದೆ.

ಲಕ್ನೋ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಕ್ವಿಂಟನ್ ಡಿ ಕಾಕ್ ಮತ್ತು ನಾಯಕ ಕೆಎಲ್ ರಾಹುಲ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 5.3 ಓವರ್‌ಗಳಲ್ಲಿ 53 ರನ್‌ಗಳ ಜೊತೆಯಾಟ ನಿರ್ಮಿಸಿತು. ಈ ವೇಳೆ 14 ಎಸೆತಗಳಲ್ಲಿ 2 ಸಿಕ್ಸರ್‌ಗಳೊಂದಿಗೆ 20 ರನ್ ಗಳಿಸಿದ್ದ ಕೆಎಲ್ ರಾಹುಲ್ ವಿಕೆಟ್ ನೀಡಿದರು.
ನಂತರ ಬಂದ ಸ್ಥಳೀಯ ಆಟಗಾರ ದೇವದತ್ ಪಡಿಕ್ಕಲ್ ಕೇವಲ 6 ರನ್ ಗಳಿಸಿ ಔಟಾದರು. ಆ ಬಳಿಕ ಮಾರ್ಕಸ್ ಸ್ಟೊಯಿನಿಸ್ 15 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 24 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಆರಂಭಿಕ ಬ್ಯಾಟರ್ ಕ್ವಿಂಟನ್ ಡಿ ಕಾಕ್ 56 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಮೂಲಕ 81 ರನ್ ಬಾರಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿದರು.

ನಂತರ ಕ್ರೀಸ್‌ಗೆ ಬಂದ ನಿಕೋಲಸ್ ಪೂರನ್ ಕೊನೆಯವರೆಗೂ ಆಡಿದರು ಮತ್ತು ಕೇವಲ 21 ಎಸೆತಗಳಲ್ಲಿ 1 ಬೌಂಡರಿ ಹಾಗೂ 5 ಸಿಕ್ಸರ್ ಸಹಾಯದಿಂದ ಅಜೇಯ 40 ರನ್ ಬಾರಿಸಿ ತಂಡದ ಮೊತ್ತವನ್ನು 180ರ ಗಡಿ ಮುಟ್ಟಿಸಿದರು.
ಇನ್ನು ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ಗ್ಲೆನ್ ಮ್ಯಾಕ್ಸ್‌ವೆಲ್ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರೆ, ಉಳಿದಂತೆ ರೀಸ್ ಟೋಪ್ಲೆ ಯಶ್ ದಯಾಳ್ ಮತ್ತು ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications