ಶನಿವಾರ, ಏಪ್ರಿಲ್ 6ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 19ನೇ ಪಂದ್ಯದಲ್ಲಿ ಅತಿಥೇಯ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಸೆಣಸಾಡಲು ಸಜ್ಜಾಗಿವೆ.
ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಈಗಾಗಲೇ ಜೈಪುರಕ್ಕೆ ಬಂದಿಳಿದಿದ್ದು, ಪ್ರಯಾಣದ ದಿನದಂದು ವಿಶ್ರಾಂತಿ ಪಡೆದು ಶುಕ್ರವಾರ ಅಭ್ಯಾಸದ ಅವಧಿ ನಡೆಸಿದ್ದಾರೆ.

ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಇಲ್ಲಿಯವರೆಗೆ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದು, ಐಪಿಎಲ್ 2024ರಲ್ಲಿ ತಮ್ಮ ಅಭಿಯಾನವನ್ನು ಅತ್ಯುತ್ತಮವಾಗಿ ಆರಂಭಿಸಿದ್ದಾರೆ. ಪ್ರಸ್ತುತ ಆರು ಅಂಕಗಳೊಂದಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಂತರ ಎರಡನೇ ಸ್ಥಾನದಲ್ಲಿದೆ.
ರಾಜಸ್ಥಾನ್ ರಾಯಲ್ಸ್ ತಂಡದ ಕೊನೆಯ ಗೆಲುವು ಮುಂಬೈ ಇಂಡಿಯನ್ಸ್ ವಿರುದ್ಧ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ತವರಿನ ಹೊರಗಿನ ಪಂದ್ಯದಲ್ಲಿ ಬಂದಿದೆ.

ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಮೂರು ಸೋಲು ಮತ್ತು ಒಂದು ಗೆಲುವಿನೊಂದಿಗೆ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಹೀಗಾಗಿ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ತಮ್ಮ ಮುಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಗುರಿಯನ್ನು ಹೊಂದಿದೆ. ಇದೇ ವೇಳೆ ರಾಜಸ್ಥಾನ್ ರಾಯಲ್ಸ್ ತಂಡವು ಪಂದ್ಯಾವಳಿಯಲ್ಲಿ ತಮ್ಮ ಗೆಲುವಿನ ನಾಗಾಲೋಟವನ್ನು ವಿಸ್ತರಿಸಲು ಎದುರು ನೋಡುತ್ತಿದೆ.
ಆರ್‌ಸಿಬಿ vs ರಾಜಸ್ಥಾನ್ ರಾಯಲ್ಸ್ ಪಂದ್ಯದ ಟಿವಿ ಮತ್ತು ಲೈವ್ ಸ್ಟ್ರೀಮಿಂಗ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಮೊಬೈಲ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಬಯಸುವ ವೀಕ್ಷಕರು JioCinema ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ನೋಡಬಹುದು.
ಐಪಿಎಲ್ ಇತಿಹಾಸಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ ಅವರ 30 ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಆರ್‌ಸಿಬಿ 15 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದೇ ವೇಳೆ ಮೂರು ಪಂದ್ಯಗಳು ಯಾವುದೇ ಫಲಿತಾಂಶ ಕಾಣದೆ ರದ್ದಾಗಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ರೀಸ್ ಟೋಪ್ಲೆ, ಮನೋಜ್ ಭಾಂಡಗೆ, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ವಿಜಯ್‌ಕುಮಾರ್ ವೈಶಾಕ್.
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂದ್ರೆ ಬರ್ಗರ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್.