For Quick Alerts
ALLOW NOTIFICATIONS  
For Daily Alerts
 

RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್

ಗುರುವಾರ, ಮಾರ್ಚ್ 28ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 9ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧ ರಾಜಸ್ಥಾನ್ ರಾಯಲ್ಸ್ (ಆರ್ಆರ್) ತಂಡವು ರೋಚಕವಾಗಿ 12 ರನ್‌ಗಳ ಗೆಲುವು ಸಾಧಿಸಿತು.

ಈ ಮೂಲಕ ಪ್ರಸಕ್ತ ಐಪಿಎಲ್ 2024ರಲ್ಲಿ ಸತತ ಒಂಬತ್ತು ಪಂದ್ಯಗಳಲ್ಲಿ ತವರಿನ ಅಂಗಳದಲ್ಲಿ ಆಡಿದ ತಂಡಗಳು ಗೆಲುವು ಸಾಧಿಸಿದ್ದು ಗಮನಾರ್ಹವಾಗಿದೆ. ಇನ್ನು ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ತಂಡ ಸತತ ಎರಡನೇ ಗೆಲುವು ಸಾಧಿಸಿದರೆ, ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಸತತ ಎರಡನೇ ಪಂದ್ಯ ಸೋತಿರುವ ಡೆಲ್ಲಿ ನಿರಾಸೆ ಮೂಡಿಸಿದೆ.

IPL 2024 RR vs DC Rajasthan Royals Beat Delhi Capitals By 12 Runs in 9th Match

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ರಿಯಾನ್ ಪರಾಗ್ ಅವರ ಅಮೋಘ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 185 ರನ್ ಕಲೆಹಾಕಿತು.

186 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿತು ಮತ್ತು ಕೇವಲ 12 ರನ್‌ಗಳಿಂದ ಸೋಲು ಅನುಭವಿಸಿತು.

ಕೊನೆಯ ಓವರ್‌ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿನ ಸನಿಹ ಬಂದಿದ್ದರೂ, ರಾಜಸ್ಥಾನ್ ರಾಯಲ್ಸ್ ತಂಡದ ಅವೇಶ್ ಖಾನ್ 17 ರನ್‌ಗಳನ್ನು ರಕ್ಷಿಸಲು ಅದ್ಭುತವಾಗಿ ಬೌಲಿಂಗ್ ಮಾಡಿದರು.

IPL 2024 RR vs DC Rajasthan Royals Beat Delhi Capitals By 12 Runs in 9th Match

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆರಂಭಿಕರಾದ ಮಿಚೆಲ್ ಮಾರ್ಷ್ 12 ಎಸೆತಗಳಲ್ಲಿ 5 ಬೌಂಡರಿ ಸಮೇತ 23 ರನ್ ಗಳಿಸಿದರೆ, ಡೇವಿಡ್ ವಾರ್ನರ್ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ 49 ರನ್ ಬಾರಿಸಿದರು.

ನಂತರ ಬಂದ ರಿಕಿ ಭುಯಿ ಸೊನ್ನೆ ಸುತ್ತಿದರೆ, ನಾಯಕ ರಿಷಭ್ ಪಂತ್ 26 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 28 ರನ್, ಟ್ರಿಸ್ಟಾನ್ ಸ್ಟಬ್ಸ್ 23 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 44 ರನ್ ಗಳಿಸಿದರು. ಉಳಿದಂತೆ ಅಭಿಷೇಕ್ ಪೊರೆಲ್ 9 ರನ್, ಅಕ್ಷರ್ ಪಟೇಲ್ 15 ರನ್ ಗಳಿಸಿದರೂ ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಬೌಲಿಂಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ನಾಂದ್ರೆ ಬರ್ಗರ್ 3 ಓವರ್‌ಗಳಲ್ಲಿ 29 ರನ್ ನೀಡಿ 2 ವಿಕೆಟ್ ಪಡೆದರೆ, ಯುಜ್ವೇಂದ್ರ ಚಹಾಲ್ 3 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಅವೇಶ್ ಖಾನ್ ಒಂದು ವಿಕೆಟ್ ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಉತ್ತಮ ಆರಂಭ ಸಿಕ್ಕಿರಲಿಲ್ಲ. ಆರಂಭಿಕರಾದ ಯಶಸ್ವಿ ಜೈಸ್ವಾಲ್ 5 ರನ್ ಮತ್ತು ಜೋಸ್ ಬಟ್ಲರ್ 11 ರನ್ ಗಳಿಸಿ ಕಡಿಮೆ ಮೊತ್ತಕ್ಕೆ ಔಟಾದರು.

IPL 2024 RR vs DC Rajasthan Royals Beat Delhi Capitals By 12 Runs in 9th Match

ಅ ಬಳಿಕ ನಾಯಕ ಸಂಜು ಸ್ಯಾಮ್ಸನ್ 15 ರನ್, ರಿಯಾನ್ ಪರಾಗ್ 45 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 6 ಸಿಕ್ಸರ ಸಮೇತ 84 ರನ್ ಬಾರಿಸಿದರು. ಉಳಿದಂತೆ ರವಿಚಂದ್ರನ್ ಅಶ್ವಿನ್ 29 ರನ್, ಧ್ರುವ್ ಜುರೆಲ್ 20 ರನ್ ಮತ್ತು ಶಿಮ್ರಾನ್ ಹೆಟ್ಮೆಯರ್ 14 ರನ್ ಗಳಿಸಿ ತಂಡದ ಮೊತ್ತ 180ರ ಗಡಿ ದಾಟಲು ನೆರವಾದರು.

ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಖಲೀಲ್ ಅಹ್ಮದ್, ಮುಕೇಶ್ ಕುಮಾರ್, ಅನ್ರಿಚ್ ನಾರ್ಟ್ಜೆ, ಅಕ್ಷರ್ ಪಟೇಲ್ ಮತ್ತು ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Thursday, March 28, 2024, 23:42 [IST]
Other articles published on Mar 28, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+