ಗುರುವಾರ, ಮಾರ್ಚ್ 28ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 9ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್ಆರ್) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡಗಳು ರೋಚಕ ಸೆಣಸಾಟಕ್ಕೆ ಮುಂದಾಗಿವೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ರಾಜಸ್ಥಾನ್ ರಾಯಲ್ಸ್ ತಮ್ಮ ಐಪಿಎಲ್ 2024ರ ಅಭಿಯಾನವನ್ನು ಕಳೆದ ಭಾನುವಾರದಂದು ತವರಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 20 ರನ್‌ಗಳಿಂದ ಸೋಲಿಸುವ ಮೂಲಕ ಶುಭಾರಂಭ ಮಾಡಿದರು.

ಪ್ರಸಕ್ತ ಋತುವಿನಲ್ಲಿ ಒಂದು ಪಂದ್ಯವನ್ನು ಆಡಿ ಎರಡು ಅಂಕಗಳೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಮತ್ತೊಂದೆಡೆ, ರಿಷಭ್ ಪಂತ್ ನಾಯಕತ್ವದ ಕ್ಯಾಪಿಟಲ್ಸ್ ಶನಿವಾರದಂದು ಮುಲ್ಲನ್‌ಪುರದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ನಾಲ್ಕು ವಿಕೆಟ್‌ಗಳ ಸೋಲು ಅನುಭವಿಸಿದ ನಂತರ ಪುಟಿದೇಳುವ ನಿರೀಕ್ಷೆಯಿದೆ.
ಉಭಯ ತಂಡಗಳು ಐಪಿಎಲ್‌ನ ಮುಖಾಮುಖಿಯಲ್ಲಿ ಬಹುತೇಕ ನೆಕ್-ಟು-ನೆಕ್ ಫೈಟ್ ಹೊಂದಿವೆ. ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪರಸ್ಪರ 27 ಬಾರಿ ಆಡಿದ್ದು, ಡೆಲ್ಲಿ ಕ್ಯಾಪಿಟಲ್ಸ್ 13 ಬಾರಿ ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ 14 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಐಪಿಎಲ್ 2024ರ ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗುತ್ತಿದ್ದು, ಭಾರತದ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ.
ಮತ್ತೊಂದೆಡೆ, ಜಿಯೋಸಿನಿಮಾ ಐಪಿಎಲ್ ಲೈವ್ ಸ್ಟ್ರೀಮಿಂಗ್ ಹಕ್ಕುಗಳನ್ನು ಹೊಂದಿದ್ದು, ಪಂದ್ಯವನ್ನು ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಸಂಪೂರ್ಣವಾಗಿ ಉಚಿತವಾಗಿ ಲಭ್ಯವಿರುತ್ತದೆ.
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಕಿ ಭುಯಿ, ರಿಷಭ್ ಪಂತ್(ನಾಯಕ/ ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಸಂದೀಪ್ ಶರ್ಮಾ, ಅವೇಶ್ ಖಾನ್.