IPL 2024 Schedule: ಎರಡು ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬದಲಾವಣೆ; ಕಾರಣವೇನು?
ಮಹತ್ವದ ಬೆಳವಣಿಗೆಯಲ್ಲಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ, ಏಪ್ರಿಲ್ 2ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯ, ಗುಜರಾತ್ ಟೈಟನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯಗಳನ್ನು ಮರು ನಿಗದಿಪಡಿಸಲಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ವೇಳೆ ನಗರದಲ್ಲಿ ರಾಮನವಮಿ ಆಚರಣೆಯ ಕಾರಣದಿಂದಾಗಿ, ಕೋಲ್ಕತ್ತಾವು ರಾಜಸ್ಥಾನ್ ರಾಯಲ್ಸ್ ವಿರುದ್ಧ ತಮ್ಮ ತವರು ಪಂದ್ಯವನ್ನು ಏಪ್ರಿಲ್ 17ರಂದು ಆಯೋಜಿಸಲು ಸಾಧ್ಯವಾಗದ ನಂತರ ಎರಡು ಪಂದ್ಯಗಳ ಮರುಹೊಂದಿಕೆಯನ್ನು ಘೋಷಿಸಲಾಗಿದೆ.

ಕೆಕೆಆರ್ vs ಆರ್‌ಆರ್ ಪಂದ್ಯವು ಮೂಲತಃ ಏಪ್ರಿಲ್ 17ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿತ್ತು. ಆದರೆ ಈಗ ಒಂದು ದಿನ ಮುಂಚಿತವಾಗಿ, ಅಂದರೆ ಏಪ್ರಿಲ್ 16ರಂದು ನಡೆಸಲಾಗುತ್ತದೆ.
ಇದಲ್ಲದೆ, ಮೂಲತಃ ಏಪ್ರಿಲ್ 16ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಗುಜರಾತ್ ಟೈಟನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಇದೀಗ ಏಪ್ರಿಲ್ 17ರಂದು ಮರು ನಿಗದಿಯಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications