For Quick Alerts
ALLOW NOTIFICATIONS  
For Daily Alerts
 

SRH vs CSK IPL 2024: ಹೈದರಾಬಾದ್ vs ಚೆನ್ನೈ ಕಾಳಗದಲ್ಲಿ ಗೆಲುವು ಯಾರಿಗೆ?; ಸಂಭಾವ್ಯ ಆಡುವ 11ರ ಬಳಗ

ಶುಕ್ರವಾರ, ಏಪ್ರಿಲ್ 5ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟ್ರೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ರೋಚಕ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳು ಹಣಾಹಣಿ ನಡೆಸಲಿವೆ.

ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಸೋಲಿನ ಹೊರತಾಗಿಯೂ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಅವರ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

IPL 2024 SRH vs CSK Match Report Probable Playing 11 TV and Live Streaming Details

ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್‌ಕೆ ತಂಡದಲ್ಲಿ ರಚಿನ್ ರವೀಂದ್ರ ಮತ್ತು ಶಿವಂ ದುಬೆ ಅವರ ಅಬ್ಬರದ ಬ್ಯಾಟಿಂಗ್ ಪ್ರದರ್ಶನವು ಆರಂಭಿಕ ಆವೇಗವನ್ನು ಹೊಂದಿಸುತ್ತದೆ. ಇನ್ನು ಮುಸ್ತಾಫಿಜುರ್ ರೆಹಮಾನ್ ಅನುಪಸ್ಥಿತಿಯ ಹೊರತಾಗಿಯೂ, ದೀಪಕ್ ಚಹಾರ್, ಮಥೀಶ್ ಪತಿರಾನ ಸೇರಿದಂತೆ ಇತರ ಬೌಲರ್‌ಗಳು ತಂಡಕ್ಕೆ ನೆರವಾಗಲಿದ್ದಾರೆ.

ಮತ್ತೊಂದೆಡೆ, ಸನ್‌ ರೈಸರ್ಸ್ ಹೈದರಾಬಾದ್ ತಮ್ಮ ಕೊನೆಯ ಪಂದ್ಯದ ಸೋಲಿನ ನಂತರ, ಗೆಲುವಿನ ಹಳಿಗೆ ಮರಳಲು ಪ್ರಯತ್ನಿಸುತ್ತದೆ. ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ ಮತ್ತು ಹೆನ್ರಿಚ್ ಕ್ಲಾಸೆನ್ ಅವರ ಸ್ಥಿರ ಬ್ಯಾಟಿಂಗ್ ಪ್ಯಾಟ್ ಕಮಿನ್ಸ್ ನಾಯಕತ್ವದ ತಂಡಕ್ಕೆ ಪ್ರಮುಖವಾಗಿದೆ.

ಇನ್ನು ಅನುಭವಿ ಭುವನೇಶ್ವರ್ ಕುಮಾರ್ ಅವರ ಬೌಲಿಂಗ್ ಹೋರಾಟ ತಂಡಕ್ಕೆ ಸವಾಲಾಗಿ ಪರಿಣಮಿಸಿದೆ. ಉಭಯ ತಂಡಗಳು ಸೋಲಿನ ವಿಮೋಚನೆಯ ಗುರಿ ಹೊಂದಿವೆ. ತವರಿನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಉತ್ಸಾಹದಿಂದ ಕಾಣುತ್ತಿದೆ ಮತ್ತು ಎಂಎಸ್ ಧೋನಿಗಾಗಿ ಕ್ರೀಡಾಂಗಣ ಪ್ರತಿಧ್ವನಿಸುತ್ತದೆ. ಈ ಹೈ-ವೋಲ್ಟೇಜ್ ಪಂದ್ಯಕ್ಕಾಗಿ ನಿರೀಕ್ಷೆಗಳು ಗಗನಕ್ಕೇರಿವೆ.

IPL 2024 SRH vs CSK Match Report Probable Playing 11 TV and Live Streaming Details

ಎಸ್‌ಆರ್‌ಎಚ್ vs ಸಿಎಸ್‌ಕೆ ಪಂದ್ಯದ ವಿವರ

ಸ್ಥಳ ಮತ್ತು ದಿನಾಂಕ: ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ 2024ರ ಪಂದ್ಯವು ಶುಕ್ರವಾರ, ಏಪ್ರಿಲ್ 5ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಪಂದ್ಯದ ಸಮಯ: ಎಸ್‌ಆರ್‌ಎಚ್ vs ಸಿಎಸ್‌ಕೆ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಆರಂಭವಾಗಲಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್: ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಅಲ್ಲದೆ, ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತದೆ.

IPL 2024 SRH vs CSK Match Report Probable Playing 11 TV and Live Streaming Details

ಎಸ್‌ಆರ್‌ಎಚ್ vs ಸಿಎಸ್‌ಕೆ ಸಂಭಾವ್ಯ ಆಡುವ 11ರ ಬಳಗ

ಸನ್‌ರೈಸರ್ಸ್ ಹೈದರಾಬಾದ್: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಾಹರ್, ಮಹೀಶ್ ತೀಕ್ಷಣ, ಮಥೀಶ ಪತಿರಾನ, ತುಷಾರ್ ದೇಶಪಾಂಡೆ.

ಚೆನ್ನೈ ಸೂಪರ್ ಕಿಂಗ್ಸ್: ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಮಯಾಂಕ್ ಮಾರ್ಕಂಡೆ.

Story first published: Friday, April 5, 2024, 9:52 [IST]
Other articles published on Apr 5, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+