For Quick Alerts
ALLOW NOTIFICATIONS  
For Daily Alerts
 

SRH vs CSK IPL 2024: ಅಭಿಷೇಕ್, ಮಾರ್ಕ್ರಾಮ್ ಆರ್ಭಟ; ಸಿಎಸ್‌ಕೆ ತಂಡಕ್ಕೆ ಜ್ಯೂಸ್ ಕುಡಿಸಿದ ಆರೇಂಜ್ ಬಾಯ್ಸ್!

ಶುಕ್ರವಾರ, ಏಪ್ರಿಲ್ 5ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ರೋಚಕ ಪಂದ್ಯದಲ್ಲಿ ಅತಿಥೇಯ ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡವು ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವನ್ನು ವಿಕೆಟ್‌ಗಳಿಂದ ಮಣಿಸಿದೆ.

ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಕೊನೆಯ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಕಳೆದ ಪಂದ್ಯದ ಸೋಲಿನ ನಂತರ ಗೆಲುವಿನ ಟ್ರ್ಯಾಕ್‌ಗೆ ಮರಳಿತು.

IPL 2024 Sun Risers Hyderabad Beat Chennai Super Kings By 6 Wickets In 18th Match

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಶಿವಂ ದುಬೆ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್‌ಗಳನ್ನು ಕಲೆಹಾಕಿತ್ತು.

166 ರನ್‌ಗಳ ಸವಾಲಿನ ಗುರಿ ಪಡೆದ ಸನ್ ರೈಸರ್ಸ್ ಹೈದರಾಬಾದ್ ತಂಡ ಏಡೆನ್ ಮಾರ್ಕ್ರಾಮ್ ಅವರ ಅರ್ಧಶತಕ ಮತ್ತು ಅಭಿಷೇಕ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 18.1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಇನ್ನೂ 11 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.

ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 2.4 ಓವರ್‌ಗಳಲ್ಲಿ 46 ರನ್‌ಗಳ ಜೊತೆಯಾಟ ನೀಡಿತು. ಈ ವೇಳೆ ಕೇವಲ 12 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಮೇತ 37 ರನ್ ಬಾರಿಸಿ ಔಟಾದರು.

IPL 2024 Sun Risers Hyderabad Beat Chennai Super Kings By 6 Wickets In 18th Match

ಇನ್ನು ಟ್ರಾವಿಸ್ ಹೆಡ್ 24 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 31 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಏಡೆನ್ ಮಾರ್ಕ್ರಾಮ್ 36 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 50 ರನ್ ಬಾರಿಸಿದರು.

ಉಳಿದಂತೆ ಶಹಬಾಜ್ ಅಹ್ಮದ್ 18 ರನ್, ಹೆನ್ರಿಚ್ ಕ್ಲಾಸೆನ್ ಅಜೇಯ 10 ರನ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಅಜೇಯ 14 ರನ್ ಗಳಿಸಿ ತಮ್ಮ ತಂಡವನ್ನು ಗೆಲುವಿನ ಗಡಿ ಮುಟ್ಟಿಸಿದರು.

ಇನ್ನು ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಮೊಯಿನ್ ಅಲಿ 3 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದಂತೆ ದೀಪಕ್ ಚಹಾರ್ ಮತ್ತು ಮಹೀಶ್ ತೀಕ್ಷಣ ತಲಾ ಒಂದೊಂದು ವಿಕೆಟ್ ಕಬಳಿಸಿದರು.

IPL 2024 Sun Risers Hyderabad Beat Chennai Super Kings By 6 Wickets In 18th Match

ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ರಚಿನ್ ರವೀಂದ್ರ ಉತ್ತಮ ಜೊತೆಯಾಟ ನೀಡಲು ವಿಫಲರಾದರು.

ರಚಿನ್ ರವೀಂದ್ರ 9 ಎಸೆತಗಳಲ್ಲಿ 2 ಬೌಂಡರಿ ಸಮೇತ 12 ರನ್ ಗಳಿಸಿ ಔಟಾದರೆ, ರುತುರಾಜ್ ಗಾಯಕ್ವಾಡ್ 21 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 26 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಅಜಿಂಕ್ಯ ರಹಾನೆ ನಿಧಾನಗತಿಯ ಆಟವಾಡಿದರೂ, 30 ಎಸೆತಗಳಲ್ಲಿ 2 ಎಸೆತಗಳನ್ನು ಎದುರಿಸಿ 1 ಸಿಕ್ಸರ್ ನೆರವಿನಿಂದ 35 ರನ್ ಗಳಿಸಿದರು.

ಇನ್ನು ಸ್ಫೋಟಕ ಬ್ಯಾಟರ್ ಶಿವಂ ದುಬೆ 24 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ಸಮೇತ 45 ರನ್ ಬಾರಿಸಿದರು. ಇನ್ನು ಆಲ್‌ರೌಂಡರ್ ರವೀಂದ್ರ ಜಡೇಜಾ 23 ಎಸೆತಗಳಲ್ಲಿ 4 ಬೌಂಡರಿಗಳ ಸಹಾಯದಿಂದ ಅಜೇಯ 31 ರನ್ ಗಳಿಸಿದರೆ, ಡೇರಿಲ್ ಮಿಚೆಲ್ 11 ಎಸೆತಗಳಲ್ಲಿ 13 ರನ್ ಗಳಿಸಿದರೆ, ಕೊನೆಯಲ್ಲಿ ಬಂದ ಎಂಎಸ್ ಧೋನಿ ಅಜೇಯ 1 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಭುವನೇಶ್ವರ್ ಕುಮಾರ್, ಟಿ ನಟರಾಜನ್, ಪ್ಯಾಟ್ ಕಮ್ಮಿನ್ಸ್, ಶಹಬಾಜ್ ಅಹ್ಮದ್ ಮತ್ತು ಜಯದೇವ್ ಉನಾದ್ಕಟ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Friday, April 5, 2024, 22:58 [IST]
Other articles published on Apr 5, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+