SRH vs CSK IPL 2024: ಮತ್ತೆ ಅಬ್ಬರಿಸಿದ ಶಿವಂ ದುಬೆ; ಸನ್ ರೈಸರ್ಸ್‌ಗೆ ಸವಾಲಿನ ಗುರಿ ನೀಡಿದ ಸಿಎಸ್‌ಕೆ
ಶುಕ್ರವಾರ, ಏಪ್ರಿಲ್ 5ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಪಂದ್ಯದಲ್ಲಿ ಅತಿಥೇಯ ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡಕ್ಕೆ ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡ ಸವಾಲಿನ ಮೊತ್ತದ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಶಿವಂ ದುಬೆ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 165 ರನ್‌ಗಳನ್ನು ಕಲೆಹಾಕಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 166 ರನ್‌ಗಳ ಗುರಿ ನೀಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ರಚಿನ್ ರವೀಂದ್ರ ಉತ್ತಮ ಜೊತೆಯಾಟ ನೀಡಲು ವಿಫಲರಾದರು. ರಚಿನ್ ರವೀಂದ್ರ 9 ಎಸೆತಗಳಲ್ಲಿ 2 ಬೌಂಡರಿ ಸಮೇತ 12 ರನ್ ಗಳಿಸಿ ಔಟಾದರೆ, ರುತುರಾಜ್ ಗಾಯಕ್ವಾಡ್ 21 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 26 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ನಂತರ ಬಂದ ಅಜಿಂಕ್ಯ ರಹಾನೆ ನಿಧಾನಗತಿಯ ಆಟವಾಡಿದರೂ, 30 ಎಸೆತಗಳಲ್ಲಿ 2 ಎಸೆತಗಳನ್ನು ಎದುರಿಸಿ 1 ಸಿಕ್ಸರ್ ನೆರವಿನಿಂದ 35 ರನ್ ಗಳಿಸಿದರು. ಇನ್ನು ಸ್ಫೋಟಕ ಬ್ಯಾಟರ್ ಶಿವಂ ದುಬೆ 24 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ಸಮೇತ 45 ರನ್ ಬಾರಿಸಿದರು.

ಇನ್ನು ಆಲ್‌ರೌಂಡರ್ ರವೀಂದ್ರ ಜಡೇಜಾ 23 ಎಸೆತಗಳಲ್ಲಿ 4 ಬೌಂಡರಿಗಳ ಸಹಾಯದಿಂದ ಅಜೇಯ 31 ರನ್ ಗಳಿಸಿದರೆ, ಡೇರಿಲ್ ಮಿಚೆಲ್ 11 ಎಸೆತಗಳಲ್ಲಿ 13 ರನ್ ಗಳಿಸಿದರೆ, ಕೊನೆಯಲ್ಲಿ ಬಂದ ಎಂಎಸ್ ಧೋನಿ ಅಜೇಯ 1 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಭುವನೇಶ್ವರ್ ಕುಮಾರ್, ಟಿ ನಟರಾಜನ್, ಪ್ಯಾಟ್ ಕಮ್ಮಿನ್ಸ್, ಶಹಬಾಜ್ ಅಹ್ಮದ್ ಮತ್ತು ಜಯದೇವ್ ಉನಾದ್ಕಟ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications