ಗುರುವಾರ, ಏಪ್ರಿಲ್ 4ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಪಂದ್ಯದಲ್ಲಿ ಅತಿಥೇಯ ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಮತ್ತು ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ಹೀಗಾಗಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ವಿರುದ್ಧ ಸತತ ಎರಡು ಪಂದ್ಯಗಳನ್ನು ಗೆದ್ದಿದ್ದ ಸಿಎಸ್‌ಕೆ ತಂಡ, ತನ್ನ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಆವೃತ್ತಿಯ ಮೊದಲ ಸೋಲಿನ ರುಚಿ ಕಂಡಿತು. ಇದೀಗ ಮತ್ತೆ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ.
ಸಿಎಸ್‌ಕೆ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರ ಎರಡನೇ ಸ್ಥಾನಕ್ಕೆ ಪ್ರವೇಶಿಸುವ ಗುರಿಯನ್ನು ಹೊಂದಿದೆ.

ಮತ್ತೊಂದೆಡೆ, ಸನ್ ರೈಸರ್ಸ್ ಹೈದರಾಬಾದ್ ತಂಡ ತಮ್ಮ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧದ ಸೋಲಿನ ನಂತರ, ತವರಿನ ಅಂಗಳದಲ್ಲಿ ಗೆಲುವಿನ ಟ್ರ್ಯಾಕ್‌ಗೆ ಮರಳಲು ಉತ್ಸುಕವಾಗಿದೆ.
ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಅಲ್ಲದೆ, ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತದೆ.
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್(ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಡೇರಿಲ್ ಮಿಚೆಲ್, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೀಶ್ ತೀಕ್ಷಣ.
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್(ನಾಯಕ), ಜಯದೇವ್ ಉನಾದ್ಕಟ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್.