ಗುರುವಾರ, ಏಪ್ರಿಲ್ 25ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 41ನೇ ಪಂದ್ಯದಲ್ಲಿ ಆತಿಥೇಯ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲು ಸಜ್ಜಾಗಿವೆ.
ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಸತತ 4 ಗೆಲುವುಗಳೊಂದಿಗೆ ಭರ್ಜರಿ ಅಭಿಯಾನ ಹೊಂದಿದೆ. ಅಲ್ಲದೆ ಪ್ಲೇಆಫ್ ಹಂತ ಪ್ರವೇಶಿಸಲು ಇನ್ನಷ್ಟು ಹತ್ತಿರವಾಗುತ್ತಿದೆ. ಐಪಿಎಲ್ 2024ರಲ್ಲಿ ಈವರೆಗೆ ಆಡಿದ 7 ಪಂದ್ಯಗಳಲ್ಲಿ 5 ಗೆಲುವು ಮತ್ತು 2 ಸೋಲುಗಳೊಂದಿಗೆ 10 ಅಂಕಗಳನ್ನು ಕಲೆಹಾಕಿ, ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

ಮತ್ತೊಂದೆಡೆ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಇತ್ತೀಚಿನ ರೋಚಕ ಸೋಲಿನ ಹೊರತಾಗಿಯೂ, ಇನ್ನೂ ಲೆಕ್ಕಾಚಾರದ ಪ್ರಕಾರ ಪ್ಲೇಆಫ್‌ಗಾಗಿ ಸ್ಪರ್ಧೆಯಲ್ಲಿದೆ. ಐಪಿಎಲ್ 2024ರಲ್ಲಿ ಈವರೆಗೆ ಆಡಿದ 8 ಪಂದ್ಯಗಳಲ್ಲಿ 7 ಸೋಲು ಮತ್ತು ಒಂದು ಗೆಲುವಿನೊಂದಿಗೆ 2 ಅಂಕ ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಇನ್ನು ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಮತ್ತು ಎಸ್‌ಆರ್‌ಹೆಚ್ ನಡುವಿನ ಹಿಂದಿನ ಹಣಾಹಣಿಯು ಹೈ-ಸ್ಕೋರಿಂಗ್ ಪಂದ್ಯವಾಗಿತ್ತು. ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಇತಿಹಾಸದ ಅತ್ಯಧಿಕ ಮೊತ್ತ 287 ರನ್‌ಗಳನ್ನು ಕಲೆಹಾಕಿತ್ತು.
ನಂತರ ಗುರಿ ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 262 ರನ್ ಮಾತ್ರ ಗಳಿಸಿದರೂ, ಭಾರೀ ಪ್ರತಿರೋಧ ನೀಡಿತ್ತು. ಚೇಸಿಂಗ್ ವೇಳೆ ಐಪಿಎಲ್‌ನಲ್ಲಿ ಅತ್ಯಧಿಕ ರನ್ ಗಳಿಸಿದ ದಾಖಲೆಗೂ ಪಾತ್ರವಾಯಿತು.

ಹೈ-ಸ್ಕೋರಿಂಗ್ ಪಂದ್ಯಗಳಿಗೆ ಹೆಸರುವಾಸಿಯಾಗಿರುವ ಹೈದರಾಬಾದ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ರೋಚಕ ಸ್ಪರ್ಧೆಯ ಭರವಸೆ ನೀಡುತ್ತದೆ.
ಸ್ಥಳ ಮತ್ತು ದಿನಾಂಕ: ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2024ರ ಪಂದ್ಯವು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಗುರುವಾರ, ಏಪ್ರಿಲ್ 25ರಂದು ನಡೆಯಲಿದೆ.
ಪಂದ್ಯದ ಸಮಯ: ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.
ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಸನ್ ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜ್ಯಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಸಿರಾಜ್.