Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024: ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಆಡೋದು ಅನುಮಾನ!; ಆರ್‌ಸಿಬಿ ಫ್ಯಾನ್ಸ್‌ಗೆ ಶಾಕ್ ನೀಡಿದ ಗವಾಸ್ಕರ್

ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ. ಇದರಿಂದಾಗಿಯೇ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯಿಂದ ಹಿಂದೆ ಸರಿಯಲು ನಿರ್ಧರಿಸಿದರು.

ಈ ಬಗ್ಗೆ ಬಿಸಿಸಿಐಗೆ ಮೊದಲೇ ಮಾಹಿತಿ ನೀಡಿದ್ದ ವಿರಾಟ್ ಕೊಹ್ಲಿ, ಆರಂಭಿಕ ಎರಡು ಪಂದ್ಯಗಳಿಂದ ಅವರನ್ನು ಹೊರಗಿಡಲಾಯಿತು. ನಂತರ, ಸಂಪೂರ್ಣ ಸರಣಿಯಿಂದ ಹೊರಗುಳಿಯಲು ಅವಕಾಶ ಮಾಡಿಕೊಟ್ಟಿತು.

ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದ ಭಾರತ ತಂಡ ಸತತ ಮೂರು ಗೆಲುವು ದಾಖಲಿಸಿ ಸರಣಿ ಕೈವಶ ಮಾಡಿಕೊಂಡಿದೆ. ಇದರ ನಡುವೆ ವಿರಾಟ್ ಕೊಹ್ಲಿ ಅವರ ಅಭಿಮಾನಿಗಳಿಗೆ ಮತ್ತೊಂದು ಆಘಾತ​ ಎದುರಾಗಿದೆ.

IPL 2024: Sunil Gavaskar Expresses Doubt Over Virat Kohlis Participation in the Upcoming Season

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ವಿರಾಟ್ ಕೊಹ್ಲಿ ಅನುಪಸ್ಥಿತಿಯ ಬಗ್ಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಚುರುಕಾಗಿ ಪ್ರತಿಕ್ರಿಯಿಸಿದ್ದಾರೆ. ಸದ್ಯ ಲಂಡನ್‌ನಲ್ಲಿ ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ವಿರಾಟ್ ಕೊಹ್ಲಿ 2024ರ ಐಪಿಎಲ್‌ನಲ್ಲಿ ಆಡುವುದು ಅನುಮಾನ ಎಂದು ಹೇಳಿದ್ದಾರೆ.

74 ವರ್ಷದ ಮಾಜಿ ದಿಗ್ಗಜ ಸುನಿಲ್ ಗವಾಸ್ಕರ್ ಅವರು ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಸಹ ಕಳೆದುಕೊಳ್ಳಬಹುದು ಎಂದು ಹಾಸ್ಯಮಯವಾಗಿ ಟೀಕಿಸಿದರು.

ಹೌದು, ವಿರಾಟ್ ಕೊಹ್ಲಿ ಐಪಿಎಲ್‌ನಿಂದಲೂ ಹೊರಗುಳಿಯಬಹುದು ಎಂದು ಸುನಿಲ್ ಗವಾಸ್ಕರ್ ಆತಂಕ ವ್ಯಕ್ತಪಡಿಸಿದ್ದಾರೆ. 17ನೇ ಆವೃತ್ತಿಯ ಐಪಿಎಲ್ ಮಾರ್ಚ್ 22ರಿಂದ ಪ್ರಾರಂಭವಾಗಲಿದ್ದು, ಉದ್ಘಾಟನಾ ಪಂದ್ಯವು ಚೆನ್ನೈನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.

35 ವರ್ಷದ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಇತ್ತೀಚೆಗೆ ತಮ್ಮ ಎರಡನೇ ಮಗು ಅಕಾಯ್ ಅವರನ್ನು ಸ್ವಾಗತಿಸಿದರು. ಐಪಿಎಲ್ 2024ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ವಿರಾಟ್ ಕೊಹ್ಲಿ ಮರಳುವ ಸಾಧ್ಯತೆ ಇದೆ.

IPL 2024: Sunil Gavaskar Expresses Doubt Over Virat Kohlis Participation in the Upcoming Season

ಇದೇ ವೇಳೆ ಸುದೀರ್ಘ ಸಮಯದಿಂದ ತಂಡದಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ರನ್ ಗಳಿಸಲು ಕಷ್ಪಡಬೇಕಾಗುತ್ತದೆಯೇ ಎಂದು ಸುನಿಲ್ ಗವಾಸ್ಕರ್ ಅವರನ್ನು ಕೇಳಿದಾಗ, ""ವಿರಾಟ್ ಕೊಹ್ಲಿ ಅವರು ಐಪಿಎಲ್ ಆಡುತ್ತಾರೆಯೇ? ಕಾರಣಾಂತರಗಳಿಂದ ಅವರು ಆಡುತ್ತಿಲ್ಲ,'' ಎಂದು ತಮಾಷೆಯಾಗಿ ಹೇಳಿದರು. ಬಹುಶಃ ಅವರು ಐಪಿಎಲ್‌ನಲ್ಲೂ ಆಡದೇ ಇರಬಹುದು ಎಂದು ಹೇಳಿದ್ದಾರೆ.

ರಾಂಚಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಗಳೊಂದಿಗೆ ಸ್ಟಾರ್ ಸ್ಪೋರ್ಟ್ಸ್ ಸ್ಟಾರ್ ಈವೆಂಟ್‌ನಲ್ಲಿ ಸುನಿಲ್ ಗವಾಸ್ಕರ್ ಸಂವಾದ ನಡೆಸುತ್ತಿದ್ದ ವೇಳೆ ಈ ರೀತಿ ಹೇಳಿಕೆ ನೀಡಿದ್ದು, ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಯಾವ ಅರ್ಥದಲ್ಲಿ ಈ ಮಾತನ್ನು ಹೇಳಿದ್ದಾರೆ ಎಂದು ಆರ್‌ಸಿಬಿ ಅಭಿಮಾನಿಗಳು ಗೊಂದಲಕ್ಕೊಳಗಾಗಿದ್ದಾರೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈಗಾಗಲೇ ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಭಾಗಶಃ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗಳ ವೇಳಾಪಟ್ಟಿಗಾಗಿ ಬಿಸಿಸಿಐ ಕಾಯುತ್ತಿರುವ ಕಾರಣ, ಪಂದ್ಯಾವಳಿಯ ಮೊದಲ 15 ದಿನಗಳವರೆಗಿನ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಗೊಳಿಸಿದೆ.

Story first published: Tuesday, February 27, 2024, 12:59 [IST]
Other articles published on Feb 27, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+