IPL 2024: ಮತ್ತೆ ಐಪಿಎಲ್‌ಗೆ ಮರಳಲಿದ್ದಾರೆ ಸುರೇಶ್ ರೈನಾ; ಇಲ್ಲಿದೆ ಕುತೂಹಲಕಾರಿ ಮಾಹಿತಿ!
ಭಾರತ ಕ್ರಿಕೆಟ್ ತಂಡ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಅವರು ಹಲವು ವರ್ಷಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (ಐಪಿಎಲ್) ಮರಳಲಿದ್ದಾರೆ ಎಂದು ವರದಿಯಾಗಿದೆ.
2024ರ ಐಪಿಎಲ್ ಆವೃತ್ತಿಗಾಗಿ ತವರಿನ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಮೆಂಟರ್ ಪಾತ್ರದಲ್ಲಿ ಸುರೇಶ್ ರೈನಾ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಏಕೆಂದರೆ, 2024ರ ಐಪಿಎಲ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಮರಳಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯನ್ನು ತೊರೆದ ಗೌತಮ್ ಗಂಭೀರ್ ಅವರ ಬದಲಿಯಾಗಲಿದ್ದಾರೆ.

ಈ ಸುದ್ದಿಯನ್ನು ಸುರೇಶ್ ರೈನಾ ಅವರೇ ಎಕ್ಸ್‌ನಲ್ಲಿ ಕಾಮೆಂಟ್ ಮಾಡುವ ಮೂಲಕ ದೃಢಪಡಿಸಿದ್ದಾರೆ. ರೈನಾ ಕ್ರೀಡಾ ಪತ್ರಕರ್ತರೊಬ್ಬರ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದಾರೆ.
ಮಿಸ್ಟರ್ ಐಪಿಎಲ್ ಖ್ಯಾತಿಯ ಸುರೇಶ್ ರೈನಾ ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆಂದು ಹೇಳಲಾಗುತ್ತಿದೆ. ಮಾಜಿ ಎಡಗೈ ಸ್ಫೋಟಕ ಬ್ಯಾಟರ್ ಸುರೇಶ್ ರೈನಾ ಅವರ ಇತ್ತೀಚಿನ ಎಕ್ಸ್ ಖಾತೆಯ ಕಾಮೆಂಟ್ ಈ ಸುದ್ದಿಗೆ ಮತ್ತಷ್ಟು ಪುಷ್ಠಿ ನೀಡಿದೆ.
ಲಕ್ನೋ ಫ್ರಾಂಚೈಸಿಯೊಂದಿಗೆ ಸುರೇಶ್ ರೈನಾ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ ಎಂದು ಕ್ರೀಡಾ ಪತ್ರಕರ್ತರೊಬ್ಬರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಸುರೇಸ್ ರೈನಾ ಮೆಂಟರ್ ಸುದ್ದಿ ಸುಳ್ಳು ಎಂದು ಬರೆದುಕೊಂಡಿದ್ದರು. ಆದರೆ ಇದಕ್ಕೆ ಸುರೇಶ್ ರೈನಾ, ಈ ಸುದ್ದಿ ಏಕೆ ನಿಜವಾಗಬಾರದು ಎಂದು ಪ್ರತಿಕ್ರಿಯಿಸಿದ್ದಾರೆ.
ಸುರೇಶ್ ರೈನಾ ಅವರ ಕಾಮೆಂಟ್ ಗಮನಿಸಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಮೆಂಟರ್ ಆಗಿ ನೇಮಕಗೊಂಡಿರುವುದು ಪಕ್ಕಾ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.
ಭಾರತದ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು 2024ರ ಐಪಿಎಲ್ ಹರಾಜಿನ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಮೆಂಟರ್ ಹುದ್ದೆಗೆ ರಾಜೀನಾಮೆ ನೀಡಿ, ತಮ್ಮ ಹಳೆಯ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಮೆಂಟರ್ ಹುದ್ದೆ ಖಾಲಿಯಾ ಇದೆ.
ಸಿಎಸ್‌ಕೆಯ ಎರಡು ವರ್ಷಗಳ ನಿಷೇಧ ಹೊರತುಪಡಿಸಿ, 2008ರ ಐಪಿಎಲ್ ಆರಂಭದಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದ ಸುರೇಶ್ ರೈನಾ ತಮ್ಮ ಅನುಭವವನ್ನು ಮತ್ತೊಂದು ತಂಡಕ್ಕೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. 2022ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸುರೇಶ್ ರೈನಾ ತಮ್ಮ ಐಪಿಎಲ್ ಆಟದ ದಿನಗಳಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದರು ಮತ್ತು ಪಂದ್ಯಾವಳಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅದಕ್ಕಾಗಿಯೇ ಅವರನ್ನು ಮಿ. ಐಪಿಎಲ್ ಎಂದು ಕರೆಯಲಾಗುತ್ತದೆ.
ಸುರೇಶ್ ರೈನಾ ಆಡಿದ 205 ಐಪಿಎಲ್ ಪಂದ್ಯಗಳಲ್ಲಿ ಒಂದು ಶತಕ ಮತ್ತು 39 ಅರ್ಧಶತಕಗಳ ಸಹಾಯದಿಂದ 5528 ರನ್ ಗಳಿಸಿದರು. ಇದೇ ವೇಳೆ 506 ಬೌಂಡರಿ ಮತ್ತು 203 ಸಿಕ್ಸರ್‌ಗಳನ್ನು ಬಾರಿಸಿದ್ದು, ಬೌಲಿಂಗ್‌ನಲ್ಲಿ 25 ವಿಕೆಟ್ ಕಬಳಿಸಿದ್ದಾರೆ.
ಸುರೇಶ್ ರೈನಾ ಅವರು ಚೆನ್ನೈ ಸೂಪರ್ ಕಿಂಗ್ಸ್ ಗೆದ್ದ 4 ಐಪಿಎಲ್ ಪ್ರಶಸ್ತಿಗಳ ತಂಡದಲ್ಲಿ ಭಾಗವಹಿಸಿದ್ದಾರೆ. ಸುರೇಶ್ ರೈನಾ 2011ರ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರಾಗಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications