Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024: ಕೊನೆಗೂ ಮುಂಬೈ ಇಂಡಿಯನ್ಸ್‌ಗೆ ಬಂತು ಆನೆಬಲ; ಮುಂದಿನ ಪಂದ್ಯಕ್ಕೆ ಸ್ಫೋಟಕ ಬ್ಯಾಟರ್ ವಾಪಸ್!

2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಸತತ ಮೂರು ಪಂದ್ಯಗಳನ್ನು ಸೋತು, ಕಳಪೆ ಆರಂಭ ಪಡೆದಿರುವ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಇದೀಗ ಕೆಲವು ಸಂತೋಷದ ಸುದ್ದಿಗಳನ್ನು ಪಡೆದುಕೊಂಡಿದೆ.

ಏಕೆಂದರೆ, ಮುಂಬೈ ಇಂಡಿಯನ್ಸ್ ತಂಡದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ಪ್ರಸಕ್ತ ಐಪಿಎಲ್ ಅವೃತ್ತಿಯಲ್ಲಿ ಆಡಲು ಫಿಟ್ ಎಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಘೋಷಿಸಿದೆ.

ಗಮನಾರ್ಹವಾಗಿ, ಹಲವು ವರ್ಷಗಳಿಂದ ಮುಂಬೈ ಇಂಡಿಯನ್ಸ್ ತಂಡದ ಅವಿಭಾಜ್ಯ ಅಂಗವಾಗಿರುವ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್, ಡಿಸೆಂಬರ್ 2023ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದ ವೇಳೆ ಪಾದದ ಗಾಯಕ್ಕೆ ತುತ್ತಾದರು.

IPL 2024 Suryakumar Yadav Declared Fit by NCA He is Available For MI s Next Match Against DC

ಆ ಬಳಿಕ ಸೂರ್ಯಕುಮಾರ್ ಯಾದವ್ ಲಂಡನ್‌ನಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು ಮತ್ತು ನಂತರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನರ್ವಸತಿ ಆರಂಭಿಸಿದರು.

33 ವರ್ಷದ ಬಲಗೈ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರಿಗೆ ಎನ್‌ಸಿಎ ಫಿಟ್ನೆಸ್ ಸರ್ಟಿಫಿಕೇಟ್ ನೀಡದ ಕಾರಣ 2024ರ ಐಪಿಎಲ್ ಋತುವಿನ ಮೊದಲ ಮೂರು ಪಂದ್ಯಗಳಿಂದ ಹೊರಗುಳಿಬೇಕಾಯಿತು.

ಇದೀಗ ಅವರು ಅಂತಿಮವಾಗಿ ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಆಯ್ಕೆಗೆ ಅನುಮತಿ ಪಡೆದಿದ್ದಾರೆ. ಮುಂಬೈ ಇಂಡಿಯನ್ಸ್‌ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭಾನುವಾರ, ಏಪ್ರಿಲ್ 7ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಲು ಲಭ್ಯವಿರಲಿದ್ದಾರೆ ಎಂದು ವರದಿಯಾಗಿದೆ.

"ಸೂರ್ಯಕುಮಾರ್ ಯಾದವ್ ಈಗ ಫಿಟ್ ಆಗಿದ್ದಾರೆ. ಎನ್‌ಸಿಎ ಅವರನ್ನು ಕೆಲವು ಅಭ್ಯಾಸ ಪಂದ್ಯಗಳನ್ನು ಆಡುವಂತೆ ಮಾಡಿತು ಮತ್ತು ಅವರು ಉತ್ತಮವಾಗಿ ಕಾಣುತ್ತಿದ್ದರು. ಇದೀಗ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಸೇರಬಹುದು. ಸೂರ್ಯಕುಮಾರ್ ಮುಂಬೈ ಇಂಡಿಯನ್ಸ ತಂಡಕ್ಕೆ ಹಿಂತಿರುಗಿದಾಗ, ಅವರು 100 ಪ್ರತಿಶತದಷ್ಟು ಫಿಟ್ ಆಗಿದ್ದಾರೆ ಮತ್ತು ಪಂದ್ಯಗಳನ್ನು ಆಡಲು ಸಿದ್ಧರಾಗಿದ್ದಾರೆ ಎಂದು ನಾವು ಖಚಿತಪಡಿಸಿಕೊಳ್ಳಲು ಬಯಸಿದ್ದೇವೆ," ಎಂದು ಎನ್‌ಸಿಎ ತಿಳಿಸಿದೆ.

"ಐಪಿಎಲ್‌ಗೆ ಮೊದಲು ಸೂರ್ಯಕುಮಾರ್ ಯಾದವ್ ಮೊದಲ ಫಿಟ್ನೆಸ್ ಟೆಸ್ಟ್‌ನಲ್ಲಿ ಅವರು ಶೇ.100ರಷ್ಟು ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ಬ್ಯಾಟಿಂಗ್ ಮಾಡುವಾಗ ಯಾವುದೇ ನೋವು ಕಂಡುಬಂದಿದೆಯೇ ಎಂದು ನೋಡಲು ನಾವು ಕಾಯುತ್ತಿದ್ದೆವು," ಎಂದು ಬಿಸಿಸಿಐ ಮೂಲಗಳು ಬಹಿರಂಗಪಡಿಸಿವೆ.

ಕೊನೆಯ ಅಂತಾರಾಷ್ಟ್ರೀಯ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದ್ದ ಸೂರ್ಯಕುಮಾರ್ ಯಾದವ್

ಇದೇ ವೇಳೆ, ಸೂರ್ಯಕುಮಾರ್ ಯಾದವ್ ಎನ್‌ಸಿಎಯಲ್ಲಿ ಪುನರ್ವಸತಿ ಪಡೆಯುತ್ತಿದ್ದಾಗ ಅಭ್ಯಾಸ ಪಂದ್ಯಗಳನ್ನು ಆಡುತ್ತಿರುವ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್ ಕಥೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಗಮನಾರ್ಹವಾಗಿ, ಮುಂಬೈ ಮೂಲದ ಬ್ಯಾಟರ್ ಸೂರ್ಯಕುಮಾರ್ ಯಾದವ್ ತಮ್ಮ ಹೆಸರಿಗೆ 861 ರೇಟಿಂಗ್‌ ಪಾಯಿಂಟ್‌ಗಳೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಪ್ರಸ್ತುತ ನಂಬರ್ 1 ಬ್ಯಾಟರ್ ಆಗಿದ್ದಾರೆ ಮತ್ತು ಮುಂಬರುವ 2024ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡದ ಪ್ರಮುಖ ಆಟಗಾರನಾಗಿದ್ದಾರೆ.

ಸೂರ್ಯಕುಮಾರ್ ಯಾದವ್ ಅವರು ಜೋಹಾನ್ಸ್‌ಬರ್ಗ್‌ನಲ್ಲಿ ಆಡಿದ ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಇನ್ನಿಂಗ್ಸ್‌ನಲ್ಲಿ 7 ಬೌಂಡರಿಗಳು ಮತ್ತು 8 ಸಿಕ್ಸರ್‌ಗಳ ನೆರವಿನಿಂದ 56 ಎಸೆತಗಳಲ್ಲಿ 100 ರನ್‌ಗಳ ಅಮೋಘ ಶತಕವನ್ನು ಬಾರಿಸಿದ್ದರು. ಇದೀಗ ತಮ್ಮ ಐಪಿಎಲ್ ವಾಪಸಾತಿಯಲ್ಲಿ ಮತ್ತೊಂದು ದೊಡ್ಡ ಇನ್ನಿಂಗ್ಸ್ ಆಡಲು ಎದುರು ನೋಡುತ್ತಿದ್ದಾರೆ.

Story first published: Thursday, April 4, 2024, 9:37 [IST]
Other articles published on Apr 4, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+