IPL 2024: ಪಂಜಾಬ್ ಮಣಿಸಿದ ಆರ್‌ಸಿಬಿ ಗೆಲುವಿನ ಆರಂಭ: ಹೋಳಿ ಹಬ್ಬದ ಸಂಭ್ರಮ ಹೆಚ್ಚಿಸಿದ ವಿರಾಟ್ ಕೊಹ್ಲಿ
ತವರಿನ ಅಭಿಮಾನಿಗಳ ಎದುರು ಮೊದಲು ಬೌಲಿಂಗ್‌ನಲ್ಲಿ ಸಂಘಟಿತ ಆಟವನ್ನು ಪ್ರದರ್ಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಬ್ಯಾಟಿಂಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿತು. ಆರಂಭದಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸಿದರೆ, ಡೆತ್ ಓವರ್‌ನಲ್ಲಿ ದಿನೇಶ್ ಕಾರ್ತಿಕ್ ಆರ್ಭಟಿಸಿ ತಂಡಕ್ಕೆ ಮೊದಲ ಜಯದ ಮಾಲೆ ತೊಡಿಸಿದರು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 176 ರನ್ ಸೇರಿಸಿತು. ಗುರಿಯನ್ನು ಹಿಂಬಾಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 19.2 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 178 ರನ್ ಸೇರಿಸಿ ಟೂರ್ನಿಯಲ್ಲಿ ಮೊದಲ ಗೆಲುವಿನ ನಗೆ ಬೀರಿತು.

ಪಟಪಟನೆ ಬಿದ್ದ ಎರಡು ವಿಕೆಟ್
ಗುರಿಯನ್ನು ಹಿಂಬಾಲಿಸಿದ ಆರ್‌ಸಿಬಿ ತಂಡದ ಆರಂಭ ಸಾಧರಣವಾಗಿತ್ತು. ಫಾಫ್ ಡುಪ್ಲೇಸಿಸ್ ತಾವು ಎದುರಿಸಿದ ಏಳನೇ ಎಸೆತದಲ್ಲಿ ರಬಾಡಗೆ ವಿಕೆಟ್ ಒಪ್ಪಿಸಿದರು. ಆರ್‌ಸಿಬಿ ತಂಡದ ದುಬಾರಿ ಆಟಗಾರ ಕ್ಯಾಮರುನ್ ಗ್ರೀನ್ ಸಹ 3 ರನ್ ಬಾರಿಸಿ ಔಟ್ ಆದರು.
ಮೂರನೇ ವಿಕೆಟ್‌ಗೆ 43 ರನ್ ಜೊತೆಯಾಟ
ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಹಾಗೂ ಭರವಸೆಯ ಆಟಗಾರ ರಜತ್ ಪಟಿದಾರ್ ಉತ್ತಮ ಇನ್ನಿಂಗ್ಸ್ ಕಟ್ಟುವ ಸೂಚನೆ ನೀಡಿದರು. ಈ ಜೋಡಿಯನ್ನು ಕಟ್ಟಿ ಹಾಕಲು ಪಂಜಾಬ್ ಮಾಡಿಕೊಂಡ ಪ್ಲ್ಯಾನ್ ಎಲ್ಲ ಉಲ್ಟಾ ಆಯಿತು. ಈ ಜೋಡಿ 35 ಎಸೆತಗಳಲ್ಲಿ 43 ರನ್ ಸೇರಿಸಿತು. ರಜತ್ 18 ರನ್‌ಗಳಿಗೆ ಆಟ ಮುಗಿಸಿತು.
ಜವಾಬ್ದಾರಿ ಮರೆತ ಸ್ಟಾರ್ಸ್
ಸ್ಟಾರ್ ಆಲ್‌ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್ ಹರ್ಪಿತ್ ಬಾರ್ರ್ ಎಸೆತದಲ್ಲಿ ಔಟ್ ಆದರು. ಕಳೆದ ಪಂದ್ಯದಲ್ಲಿ ಮಿಂಚಿದ್ದ ಅನುಜ್ ರಾವತ್ 11 ರನ್‌ಗಳಿಗೆ ಆಟ ಮುಗಿಸಿದರು.
ದಿನೇಶ್ ಕಾರ್ತಿಕ್ ಹಾಗೂ ಇಂಪ್ಯಾಕ್ಟ್ ಪ್ಲೇಯರ್ ಮಹಿಪಾಲ್ ಲೋಮ್ರೋರ್ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 18 ಎಸೆತಗಳಲ್ಲಿ ಅಜೇಯ 48 ರನ್‌ಗಳ ಜೊತೆಯಾಟವನ್ನು ನೀಡಿದರು. ಮಹಿಪಾಲ್ 8 ಎಸೆತಗಳಲ್ಲಿ 17 ರನ್ ಸಿಡಿಸಿದರೆ, ದಿನೇಶ್ ಕಾರ್ತಿಕ್ 10 ಎಸೆತಗಳಲ್ಲಿ ಅಜೇಯ 28 ರನ್ ಸಿಡಿಸಿದರು. ಈ ಇನ್ನಿಂಗ್ಸ್‌ನಲ್ಲಿ 3 ಬೌಂಡರಿ, 2 ಸಿಕ್ಸರ್ ಸೇರಿವೆ.
ಶಿಖರ್ ಧವನ್ ಆಸರೆ
ಟಾಸ್ ಸೋತು ಬ್ಯಾಟ್ ಮಾಡಿದ ಪಂಜಾಬ್ ತಂಡದ ಆರಂಭ ಕಳಪೆಯಾಗಿತ್ತು. ಜಾನಿ ಬೇರ್‌ಸ್ಟೋ 8 ರನ್ ಗಳಿಗೆ ಔಟ್ ಆದರು. ಎರಡನೇ ವಿಕೆಟ್‌ಗೆ ನಾಯಕ ಶಿಖರ್ ಧವನ್ ಹಾಗೂ ಭರವಸೆಯ ಬ್ಯಾಟರ್ ಪ್ರಭಾಸಿಮ್ರಾನ್ ಸಿಂಗ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 38 ಎಸೆತಗಳಲ್ಲಿ 55 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಪ್ರಭಾಸಿಮ್ರಾನ್ ಸಿಂಗ್ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 25 ರನ್ ಸಿಡಿಸಿ ಔಟ್ ಆದರು.
ಮೂರನೇ ವಿಕೆಟ್‌ಗೆ ತಂಡಕ್ಕೆ ಆಧಾರವಾಗುವ ಸೂಚನೆ ನೀಡಿದ್ದ ಲಿಯಾಮ್ ಲಿವಿಂಗ್‌ಸ್ಟೋನ್ ಹಾಗೂ ಶಿಖರ್ ಧವನ್ ಜೋಡಿ 19 ಎಸೆತಗಳಲ್ಲಿ 26 ರನ್ ಸಿಡಿಸಿತು. ಸೊಗಸಾಗಿ ಆಡುತ್ತಿದ್ದ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಅವರ ಆಟ 45 ರನ್‌ಗಳಿಗೆ ಕೊನೆಗೊಂಡಿತು. ಇವರ ಮನಮೋಹಕ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ, 1 ಸಿಕ್ಸರ್ ಸೇರಿವೆ.

ಸ್ಯಾಮ್, ಜಿತೇಶ್ ಜುಗಲ್‌ಬಂಧಿ
ಆಲ್‌ರೌಂಡರ್ ಸ್ಯಾಮ್ ಕರನ್ ಹಾಗೂ ವಿಕೆಟ್ ಕೀಪರ್ ಜಿತೇಶ್ ಶರ್ಮಾ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 34 ಎಸೆತಗಳಲ್ಲಿ 52 ರನ್‌ಗಳನ್ನು ಕಲೆ ಹಾಕಿ ತಂಡ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕುವಲ್ಲಿ ನೆರವಾಯಿತು. ಸ್ಯಾಮ್ ಕರನ್ 23 ರನ್ ಬಾರಿಸಿದರೆ, ಜಿತೇಶ್ ಶರ್ಮಾ 27 ರನ್ ಸಿಡಿಸಿ ಔಟ್ ಆದರು.
ಡೆತ್ ಓವರ್‌ನಲ್ಲಿ ಮಿಂಚಿದ ಶಶಾಂಕ್ ಸಿಂಗ್
ಡೆತ್ ಓವರ್‌ನಲ್ಲಿ ಬ್ಯಾಟಿಂಗ್ ಮಾಡಲು ಬಂದ ಶಶಾಂಕ್ ಸಿಂಗ್ ಮನಮೋಹಕ ಬ್ಯಾಟಿಂಗ್ ನಡೆಸಿದರು. ಕೇವಲ 8 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ ಸಹಾಯದಿಂದ 262.50 ಸ್ಟ್ರೈಕ್ ರೇಟ್ ನೆರವಿನಿಂದ 21 ರನ್ ಸಿಡಿಸಿದರು. ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್ ಹಾಗೂ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್ ತಲಾ ಎರಡು ವಿಕೆಟ್ ಪಡೆದರು. ಯಶ್ ದಯಾಲ್, ಅಲ್ಜಾರಿ ಜೋಸೆಫ್ ತಲಾ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications