Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024: 'ಹಲವು ತಪ್ಪು ನಿರ್ಧಾರ ಕೈಗೊಳ್ಳಲಾಗಿದೆ' MI ನಾಯಕತ್ವದಿಂದ ರೋಹಿತ್ ಕೆಳಗಿಳಿಸಿದ್ದಕ್ಕೆ ಪತ್ನಿ ರಿತಿಕಾ ಕೆಂಡ

ಕಳೆದ ಎರಡೂ ಮೂರು ತಿಂಗಳಿನಿಂದ ಭಾರೀ ಸದ್ದು ಮಾಡುತ್ತಿರುವ ವಿಷಯ ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿದಕ್ಕೆ ಪರ ವಿರೋಧ ಚರ್ಚೆಗಳು ಆರಂಭವಾಗಿವೆ. ಮುಂಬೈ ಇಂಡಿಯನ್ಸ್‌ ಗುಜರಾತ್‌ ಟೈಟನ್ಸ್‌ ತಂಡದ ಯಶಸ್ವಿ ನಾಯಕ ಹಾರ್ದಿಕ್ ಪಾಂಡ್ಯವನ್ನು ಐಪಿಎಲ್ ಹರಾಜಿಗೂ ಮುನ್ನ ಟ್ರೇಡ್ ಮಾಡಿತ್ತು. ಅಲ್ಲದೆ ಮುಂಬೈ ಇಂಡಿಯನ್ಸ್‌ ತಂಡದ ಚುಕ್ಕಾಣಿ ನೀಡಿತ್ತು.

ಅನುಭವಿ ಆಟಗಾರ ಹಾಗೂ ಐದು ಬಾರಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

IPL 2024: Too many wrong decisions were made, wife Ritika slams Rohits sacking from MI captaincy

ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ಮಾಡಲು ನಿರ್ಧರಿಸಲಾಯಿತು. ಮುಂಬೈ ಇಂಡಿಯನ್ಸ್ ನಿರ್ಧಾರವನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದ್ದರು. ಆದರೆ, ಇದೀಗ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಮಾರ್ಕ್ ಬೌಚರ್ ಅವರು ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ಮಾಡಿದ ಕಾರಣವನ್ನು ತಿಳಿಸಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಕೋಚ್ ಮಾರ್ಕ್ ಬೌಚರ್ ಹೇಳಿಕೆ ಬೆನ್ನಲ್ಲೆ, ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಬರೆದುಕೊಂಡಿದ್ದು ಸಾಮಾಜಿಕ ತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಕೋಚ್‌ ಹೇಳಿದ್ದೇನು?

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಮುಂಬೈ ಇಂಡಿಯನ್ಸ್ ಕೋಚ್ ಮಾರ್ಕ್ ಬೌಚರ್, ಇದು ಸಂಪೂರ್ಣವಾಗಿ ಕ್ರಿಕೆಟ್ ಸಂಬಂಧಿತ ನಿರ್ಧಾರ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ. ಹಾರ್ದಿಕ್ ಪಾಂಡ್ಯ ಅವರನ್ನು ನಾವು ಆಟಗಾರನಾಗಿ ನಮ್ಮ ತಂಡದ ಭಾಗವಾಗಿಸಿದೆವು. ಇದು ನಮಗೆ ಬದಲಾವಣೆಯ ಅವಧಿಯಾಗಿದೆ. ಇದು ಭಾರತದಲ್ಲಿ ಅನೇಕ ಜನರಿಗೆ ಅರ್ಥವಾಗುವುದಿಲ್ಲ. ಇಲ್ಲಿನ ಜನರು ತುಂಬಾ ಕ್ರಿಕೆಟ್‌ ಸಂಬಂಧಿತ ವಿಷಯಗಳಿಗೆ ಭಾವನಾತ್ಮಕವಾಗುತ್ತಾರೆ. ಆದರೆ ಭಾವನೆಗಳನ್ನು ಇದರಿಂದ ದೂರವಿಡಬೇಕು ಎಂದು ಅವರು ಹೇಳಿದ್ದರೆ. ಇನ್ನು ಅನುಭವಿ ಆಟಗಾರ ರೋಹಿತ್‌ನಲ್ಲಿರುವ ಅತ್ಯುತ್ತಮ ಪ್ರದರ್ಶನವನ್ನು ಈ ಬಾರಿಯ ಐಪಿಎಲ್‌ನಲ್ಲಿ ಕಾಣಬಹುದಾಗಿದೆ ಎಂದು ತಿಳಿಸಿದ್ದರು.

IPL 2024: Too many wrong decisions were made, wife Ritika slams Rohits sacking from MI captaincy

ರೋಹಿತ್‌ ಪತ್ನಿ ಪೋಸ್ಟ್ ವೈರಲ್

ಮಾರ್ಕ್ ಬೌಚರ್ ಅವರ ವಿಡಿಯೋಗೆ ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೇ ಉತ್ತರ ನೀಡಿದ್ದಾರೆ. ಇದರಲ್ಲಿ ಹಲವು ತಪ್ಪುಗಳಿವೆ ಎಂದು ರಿತಿಕಾ ಸಜ್ದೇ ಬರೆದುಕೊಂಡಿದ್ದಾರೆ... ಅಂದರೆ ಮುಂಬೈ ಇಂಡಿಯನ್ಸ್ ಕೋಚ್ ಮಾರ್ಕ್ ಬೌಚರ್ ಮಾತನ್ನು ರೋಹಿತ್ ಶರ್ಮಾ ಪತ್ನಿ ತಿರಸ್ಕರಿಸುತ್ತಿರುವುದು ಕಂಡು ಬಂದಿದೆ. ಇದೀಗ ರಿತಿಕಾ ಸಜ್ದೇ ಅವರ ಉತ್ತರ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ಅಭಿಮಾನಿಗಳು ನಿರಂತರವಾಗಿ ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲರ ಒಪ್ಪಿಗೆಯೊಂದಿಗೆ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ಮಾಡಿದರೆ, ರಿತಿಕಾ ಸಜ್ದೇ ಏಕೆ ಈ ರೀತಿ ಪ್ರತಿಕ್ರಿಯಿಸುತ್ತಾರೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ನಂಬುತ್ತಾರೆ?

ಸದ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ನಾಯಕತ್ವ ಬದಲಾವಣೆಯ ವಿಷಯ ಬಿಸಿ ತುಪ್ಪದಂತೆ ಪರಿಣಮಿಸಿದೆ. ಈ ಬಗ್ಗೆ ಮುಂಬೈ ಇಂಡಿಯನ್ಸ್‌ ಇನ್ನು ಯಾವುದೇ ಬಹಿರಂಗ ಹೇಳಿಕೆಯನ್ನು ನೀಡಿಲ್ಲ. ಆದರೆ ದಿನೇ ದಿನೇ ಈ ವಿಷಯ ಮುನ್ನೆಲೆಗೆ ಬರುತ್ತಲೇ ಇದೆ. ಈಗ ರೋಹಿತ್ ಶರ್ಮಾ ಪತ್ನಿ ರಿತಿಕಾ ತನ್ನ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬರೆದಿದ್ದ ಪೋಸ್ಟ್‌ ವೈರಲ್‌ ಆಗಿದೆ. ಬಳಿಕ ರಿತಿಕಾ ಈ ಪೋಸ್ಟ್‌ನ್ನು ಡಿಲೀಟ್‌ ಮಾಡಿದ್ದಾರೆ. ಈ ವಿಷಯ ಇನ್ನು ಎಲ್ಲಿಗೆ ನಾಯಕತ್ವ ಬದಲಾವಣೆಯ ವಿಷಯ ಹೋಗಿ ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Story first published: Tuesday, February 6, 2024, 16:41 [IST]
Other articles published on Feb 6, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+