IPL 2024: ಸಿಎಸ್‌ಕೆ ವಿರುದ್ಧ ಪಂದ್ಯಕ್ಕಾಗಿ ಸದ್ದಿಲ್ಲದೆ ಅಭ್ಯಾಸ ಶುರು ಮಾಡಿದ ಕಿಂಗ್ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅಭಿಮಾನಿಗಳು ಸಂತೋಷಪಡಲು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಭಾನುವಾರವಷ್ಟೇ ಲಂಡನ್‌ನಿಂದ ಭಾರತಕ್ಕೆ ಮರಳಿದರು.
ಅಂತಿಮವಾಗಿ, ವಿರಾಟ್ ಕೊಹ್ಲಿ ಅವರು ಸದ್ದಿಲ್ಲದೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಂಬರುವ 2024ರ ಐಪಿಎಲ್ ಆವೃತ್ತಿಗಾಗಿ ಆರ್‌ಸಿಬಿ ಫ್ರಾಂಚೈಸಿ ಸೇರಿದ್ದಾರೆ. ಆರ್‌ಸಿಬಿ ತಂಡ 2024ರ ಮಹಿಳಾ ಪ್ರೀಮಿಯರ್ ಲೀಗ್ ಗೆದ್ದ ಖುಷಿಯ ಬೆನ್ನಲ್ಲೇ, ತಮ್ಮ ನೆಚ್ಚಿನ ಕ್ರಿಕೆಟಿಗ ತಂಡವನ್ನು ಕೂಡಿಕೊಂಡಿರುವು ಅಭಿಮಾನಿಗಳಿಗೆ ಡಬಲ್ ಖುಷಿ ನೀಡಿದೆ.

ನವದೆಹಲಿಯಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಆರ್‌ಸಿಬಿ ಮಹಿಳಾ ತಂಡ ಗೆದ್ದ ಒಂದು ದಿನದ ನಂತರ, ಬೆಂಗಳೂರು ನಗರದ ಐಕಾನಿಕ್ ಚಿನ್ನಸ್ವಾಮಿಯಲ್ಲಿ ವಿರಾಟ್ ಕೊಹ್ಲಿ ಅಭ್ಯಾಸ ನಡೆಸುತ್ತಿರುವುದು ಕಂಡುಬಂದಿದೆ.
ವಿರಾಟ್ ಕೊಹ್ಲಿ ಅವರು ತಮ್ಮ ಎರಡನೇ ಮಗುವಿನ ಜನನದ ಕಾರಣದಿಂದ ಇಂಗ್ಲೆಂಡ್ ವಿರುದ್ಧದ ತವರಿನ ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡ ಕಾರಣ, ಕೆಲವು ಮಾಧ್ಯಮಗಳು ವಿರಾಟ್ ಕೊಹ್ಲಿ ಈ ಬಾರಿ ಶ್ರೀಮಂತ ಕ್ರಿಕೆಟ್ ಲೀಗ್‌ನಲ್ಲಿ ಭಾಗವಹಿಸುವುದಿಲ್ಲ ಎಂದು ಊಹಿಸಿದರು.
ಆದರೆ, ಭಾನುವಾರ ಬೆಳಗ್ಗೆ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಬ್ಯಾಟಿಂಗ್ ಸ್ಟಾರ್ ಎಲ್ಲಾ ವದಂತಿಗಳಿಗೆ ತೆರೆ ಎಳೆದರು. ಇದೇ ವೇಳೆ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಆರ್‌ಸಿಬಿ ತಂಡದ ಟೂರ್ನಿಯ ಆರಂಭಿಕ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಅಭ್ಯಾಸ ಆರಂಭಿಸಿದರು.
ಸಾಮಾಜಿಕ ಮಾಧ್ಯಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ವಿರಾಟ್ ಕೊಹ್ಲಿ ತಮ್ಮ ಆರ್‌ಸಿಬಿ ತಂಡದ ಸಹ ಆಟಗಾರರೊಂದಿಗೆ ತೀವ್ರವಾದ ಫೀಲ್ಡಿಂಗ್ ಸೆಷನ್‌ನಲ್ಲಿ ಭಾಗವಹಿಸುವುದನ್ನು ಕಾಣಬಹುದು.
"ತನ್ನ ಮನೆಯ ಅಂಗಳದಲ್ಲಿ ಅವರು ಮತ್ತೆ ಆಳ್ವಿಕೆಗೆ ಸಿದ್ಧರಾಗಿದ್ದಾರೆ! ವಿರಾಟ್ ಕೊಹ್ಲಿ ನಮ್ಮ ಬೆಂಗಳೂರಿಗೆ ಬಂದರು ಮತ್ತು ನಾವು ಶಾಂತವಾಗಿರಲು ಸಾಧ್ಯವಿಲ್ಲ. ಖುಚಿಯಾಗಿದೆ," ಎಂದು ಆರ್‌ಸಿಬಿ ಟ್ವೀಟ್‌ನಲ್ಲಿ ತಿಳಿಸಿದೆ.
ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ 3 ಪಂದ್ಯಗಳ ಟಿ20 ಪಂದ್ಯಗಳ ಸರಣಿಯ ನಂತರ, ವಿರಾಟ್ ಕೊಹ್ಲಿ ಮೊದಲ ಬಾರಿಗೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲಿದ್ದಾರೆ.
ವೈಯಕ್ತಿಕ ಕಾರಣದಿಂದಾಗಿ ಭಾರತ ತಂಡದ ಮಾಜಿ ನಾಯಕ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡರು. ತಮ್ಮ ಮಗ ಅಕಾಯ್‌ನ ಜನನದ ವೇಳೆ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಲಂಡನ್‌ನಲ್ಲಿದ್ದರು.
ಭಾರತೀಯ ಸೂಪರ್‌ಸ್ಟಾರ್‌ನ ಹೊರತಾಗಿ, ಮುಂಬೈ ಇಂಡಿಯನ್ಸ್‌ನಿಂದ ಎಲ್ಲಾ ನಗದು ವ್ಯಾಪಾರದ ಮೂಲಕ ನಾಟಕೀಯವಾಗಿ ಆರ್‌ಸಿಬಿ ಫ್ರಾಂಚೈಸ್‌ಗೆ ಸೇರಿದ ಆಸ್ಟ್ರೇಲಿಯಾ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ತಮ್ಮ ಫೀಲ್ಡಿಂಗ್ ಕೌಶಲ್ಯಗಳ ಮೇಲೆ ಕೆಲಸ ಮಾಡುವುದನ್ನು ಸಹ ಕಾಣಬಹುದು.
ತಮ್ಮ ಬ್ಯಾಟಿಂಗ್ ಜೊತೆಗೆ ವಿರಾಟ್ ಕೊಹ್ಲಿ ಅವರ ನಂಬಲಾಗದ ಫೀಲ್ಡಿಂಗ್ ಕೌಶಲ್ಯ, ವಿಶೇಷವಾಗಿ ಔಟ್‌ಫೀಲ್ಡ್‌ನಲ್ಲಿ ಬೆವರು ಸುರಿಸಿದರು.
ಭಾರತೀಯ ಅನುಭವಿ ಬ್ಯಾಟರ್ ಬೆಂಗಳೂರು ಮೂಲದ ಫ್ರಾಂಚೈಸಿಗೆ ಸಮೃದ್ಧ ಪ್ರದರ್ಶನ ನೀಡಿದ್ದು, 37.25ರ ಸರಾಸರಿ ಮತ್ತು 130.02ರ ಸ್ಟ್ರೈಕ್ ರೇಟ್‌ನಲ್ಲಿ 7263 ರನ್ ಗಳಿಸಿದ್ದಾರೆ.
ಮುಂಬರುವ ಐಪಿಎಲ್ ಋತುವಿನಲ್ಲಿ ವಿರಾಟ್ ಕೊಹ್ಲಿ ಅವರು ನಾಯಕ ಫಾಫ್ ಡು ಪ್ಲೆಸಿಸ್ ಜೊತೆಗೆ ಬ್ಯಾಟಿಂಗ್ ಇನ್ನಿಂಗ್ಸ್ ತೆರೆಯುವ ಸಾಧ್ಯತೆಯಿದೆ. ಇವರಿಬ್ಬರು ಪವರ್ ಪ್ಲೇನಲ್ಲಿ ತಮ್ಮ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸುವ ನಿರೀಕ್ಷೆಯಿದೆ.
ಆದಾಗ್ಯೂ, ಅವರು ಆರ್‌ಸಿಬಿ ತಂಡದಲ್ಲಿ ಕ್ಯಾಮೆರಾನ್ ಗ್ರೀನ್ ಅವರನ್ನು ಹೊಂದಿದ್ದಾರೆಂದು ಪರಿಗಣಿಸಿ, ಆರ್‌ಸಿಬಿ ಮ್ಯಾನೇಜ್‌ಮೆಂಟ್ ಆಸ್ಟ್ರೇಲಿಯಾದ ಯುವ ಆಟಗಾರನೊಂದಿಗೆ ಇನ್ನಿಂಗ್ಸ್ ತೆರೆಯಲು ನಿರ್ಧರಿಸಬಹುದು ಮತ್ತು ವಿರಾಟ್ ಕೊಹ್ಲಿಯನ್ನು ಮೂರನೇ ಕ್ರಮಾಂಕಕ್ಕೆ ಇಳಿಯಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications