IPL 2024: ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಬರೆದ ವಿರಾಟ್ ಕೊಹ್ಲಿ; ಈ ಸಾಧನೆ ಮಾಡಿದ 2ನೇ ಕ್ರಿಕೆಟಿಗ
ಶುಕ್ರವಾರ, ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿದ್ದಂತೆ ಕ್ರಿಕೆಟ್ ಪಿಚ್‌ನಲ್ಲಿ ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಬಹು ನಿರೀಕ್ಷಿತ ಪುನರಾಗಮನ ಮಾಡಿದರು.
ಗಮನಾರ್ಹವಾಗಿ, ವಿರಾಟ್ ಕೊಹ್ಲಿ ಅವರು ತಮ್ಮ ಎರಡನೇ ಮಗುವಿನ ಜನನದ ಕಾರಣ, ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಇರಬೇಕಾಗಿದ್ದರಿಂದ ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡರು.

ಗಂಡು ಮಗು 'ಅಕಾಯ್' ಹುಟ್ಟಿದ ನಂತರ, ವಿರಾಟ್ ಕೊಹ್ಲಿ ಅಂತಿಮವಾಗಿ ಐಪಿಎಲ್ 2024ರಲ್ಲಿ ಕ್ರಿಕೆಟ್ ಲೋಕಕ್ಕೆ ಮರಳಿದರು. ಇದೇ ವೇಳೆ ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಮತ್ತೊಂದು ದಾಖಲೆ ಬರೆಯುವ ಮೂಲಕ ಇತಿಹಾಸ ನಿರ್ಮಿಸಿದರು.
ಗಮನಾರ್ಹವೆಂದರೆ, 35 ವರ್ಷದ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 12,000 ರನ್‌ಗಳನ್ನು ಪೂರೈಸಿದ ಮೊದಲ ಭಾರತೀಯ ಹಾಗೂ ವಿಶ್ವದ ಆರನೇ ಕ್ರಿಕೆಟಿಗ ಎನಿಸಿದರು. ಈ ಸಾಧನೆ ಮಾಡಲು ಕೇವಲ ಆರು ರನ್‌ಗಳ ಅಂತರದಲ್ಲಿದ್ದರು.
ಆರ್‌ಸಿಬಿ ಮಾಜಿ ನಾಯಕ 2024ರ ಐಪಿಎಲ್‌ನ ಆರಂಭಿಕ ಪಂದ್ಯದಲ್ಲಿ ಹೆಗ್ಗುರುತನ್ನು ತಲುಪುವಲ್ಲಿ ಯಶಸ್ವಿಯಾದರು. ಈ ಮೂಲಕ 353 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ಕ್ರಿಸ್ ಗೇಲ್ ನಂತರ, ಈ ಸಾಧನೆ ಮಾಡಿದ ಎರಡನೇ ಅತಿ ವೇಗದ ಬ್ಯಾಟರ್ ಆದರು.
ಭಾರತ ಹಾಗೂ ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ 7000 ರನ್‌ಗಳ ಗಡಿ ದಾಟಿದ ಏಕೈಕ ಆಟಗಾರ ಎಂಬುದು ಗಮನಿಸಬೇಕಾದ ಸಂಗತಿ.
ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿಯ ಅತ್ಯುತ್ತಮ ಪ್ರದರ್ಶನವು 2016ರಲ್ಲಿ ಬಂದಿದೆ. ಏಕೆಂದರೆ ಆ ಋತುವಿನಲ್ಲಿ 973 ರನ್ ಗಳಿಸಿದರು. ಶ್ರೀಮಂತ ಕ್ರಿಕೆಟ್ ಲೀಗ್‌ನ ಋತುವಿನಲ್ಲಿ ಅವರು ಇನ್ನೂ ಹೆಚ್ಚಿನ ರನ್ ಕಲೆಹಾಕುವ ದಾಖಲೆಯನ್ನು ಹೊಂದಿದ್ದಾರೆ.
ಇದಲ್ಲದೆ, ವಿರಾಟ್ ಕೊಹ್ಲಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ 1000ಕ್ಕೂ ಅಧಿಕ ರನ್ ಗಳಿಸಿದ ಮೊದಲ ಬ್ಯಾಟರ್ ಎನಿಸಿದರು.
ಆದರೆ, ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಉತ್ತಮವಾಗಿ ಆಡುತ್ತಿದ್ದ ವಿರಾಟ್ ಕೊಹ್ಲಿ 20 ಎಸೆತಗಳಲ್ಲಿ 1 ಸಿಕ್ಸರ್ ಸಮೇತ 21 ರನ್ ಗಳಿಸಿ ಮುಸ್ತಫಿಜುರ್ ರೆಹಮಾನ್ ಬೌಲಿಂಗ್‌ನಲ್ಲಿ ಅಜಿಂಕ್ಯ ರಹಾನೆ ಮತ್ತು ರಚಿನ್ ರವೀಂದ್ರ ಅವರ ಅತ್ಯುತ್ತಮ ಕ್ಯಾಚ್‌ಗೆ ಔಟಾದರು.
ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪವರ್‌ಪ್ಲೇನಲ್ಲಿ ತ್ವರಿತವಾಗಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು.
ನಾಯಕ ಫಾಫ್ ಡು ಪ್ಲೆಸಿಸ್ ಆರಂಭದಿಂದಲೇ ಬೌಂಡರಿಗಳ ಮೂಲಕ ಆಕ್ರಮಣಕಾರಿಯಾಗಿ ಆಡುತ್ತಿದ್ದರು. ಆದರೆ 23 ಎಸೆತಗಳಲ್ಲಿ 8 ಬೌಂಡರಿ ಮೂಲಕ 35 ರನ್ ಬಾರಿಸಿ ಮುಸ್ತಫಿಜುರ್ ರೆಹಮಾನ್ ಓವರ್‌ನಲ್ಲಿ ರಚಿನ್ ರವೀಂದ್ರ ಹಿಡಿದ ಉತ್ತಮ ಕ್ಯಾಚ್‌ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ದೀಪಕ್ ಚಾಹರ್ ಬೌಲಿಂಗ್‌ನಲ್ಲಿ ಗೋಲ್ಡನ್ ಡಕ್‌ಗೆ ವಿಕೆಟ್ ನೀಡಿದಾಗ ಆರ್‌ಸಿಬಿ ತಂಡ ಸಂಕಷ್ಟಕ್ಕೆ ಸಿಲುಕಿತು. ಸದ್ಯ ಆರ್‌ಸಿಬಿ ತಂಡ 16 ಓವರ್‌ಗಳಲ್ಲಿ 5 ವಿಕೆಟ್‌ಗೆ 116 ರನ್ ಕಲೆಹಾಕಿದೆ.
ಇದಕ್ಕೂ ಮುನ್ನ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ತಾರಾ ಬಳಗದ ಉದ್ಘಾಟನಾ ಸಮಾರಂಭದ ನಂತರ ಟಾಸ್ 10 ನಿಮಿಷ ತಡವಾಯಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications