IPL 2024: ಐಪಿಎಲ್‌ನಲ್ಲಿ ಈ ದಾಖಲೆ ನಿರ್ಮಿಸುವ ಕನಸಿನಲ್ಲಿ ವಿರಾಟ್ ಕೊಹ್ಲಿ
ಇನ್ನೇನು ಕೆಲವೇ ದಿನಗಳಲ್ಲಿ ಐಪಿಎಲ್ ಆರಂಭವಾಗಲಿದೆ. ಈ ಲೀಗ್ ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಸಹ ರೆಡಿಯಾಗಿದ್ದಾರೆ. ಸ್ಟಾರ್ ಆಟಗಾರ ಆಟವನ್ನು ಕಣ್ಣು ತುಂಬಿಕೊಳ್ಳಲು ಫ್ಯಾನ್ಸ್ ತಯಾರಾಗಿದ್ದಾರೆ. 17ನೇ ಆವೃತ್ತಿ ಐಪಿಎಲ್‌ನ ಮೊದಲ ಪಂದ್ಯ ಮಾರ್ಚ್ 22 ರಂದು ನಡೆಯಲಿದ್ದು, ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.
ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಮಿಸ್ ಮಾಡಿಕೊಂಡಿದ್ದ ವಿರಾಟ್ ಕೊಹ್ಲಿ, ಬಹುದಿನಗಳ ಬಳಿಕ ಅಂಗಳಕ್ಕೆ ಇಳಿಯಲಿದ್ದಾರೆ. ಎರಡನೇ ಮಗುವಿನ ತಂದೆಯಾದ ಖುಷಿಯಲ್ಲಿರುವ ವಿರಾಟ್ ಕೊಹ್ಲಿ, ನವ ಉತ್ಸಹದಲ್ಲಿದ್ದಾರೆ. ಐಪಿಎಲ್‌ನಲ್ಲಿ ಕೊಹ್ಲಿ ಮೊದಲ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಬ್ಯಾಟ್‌ನಿಂದ ದೊಡ್ಡ ದಾಖಲೆಯನ್ನು ಮಾಡಬಹುದು.

ದಾಖಲೆಯ ಹೊಸ್ತಿಲಲ್ಲಿ ವಿರಾಟ್
ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಇದುವರೆಗೆ 237 ಪಂದ್ಯಗಳನ್ನು ಆಡಿದ್ದಾರೆ ಮತ್ತು 50 ಅರ್ಧಶತಕಗಳ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಪ್ರಸ್ತುತ, ಕೊಹ್ಲಿ ಜಂಟಿಯಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಜೊತೆಗೆ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಭಾರತೀಯ ಪ್ಲೇಯರ್ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಭಾರತದ ಪರ ಐಪಿಎಲ್‌ನಲ್ಲಿ ಗರಿಷ್ಠ ಅರ್ಧಶತಕ
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಅರ್ಧಶತಕ ಬಾರಿಸುವಲ್ಲಿ ಯಶಸ್ವಿಯಾದರೆ ಧವನ್ ಅವರ ದಾಖಲೆಯನ್ನು ಹಿಂದೆ ಬಿಟ್ಟು ಐಪಿಎಲ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಸಿಡಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ರೋಹಿತ್ ಶರ್ಮಾ ಇದ್ದಾರೆ. ಹಿಟ್‌ಮ್ಯಾನ್ ಐಪಿಎಲ್‌ನಲ್ಲಿ 42 ಅರ್ಧ ಶತಕ ಬಾರಿಸಿದ್ದಾರೆ. ಸುರೇಶ್ ರೈನಾ 39 ಅರ್ಧ ಶತಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಇಬ್ಬರೂ ಈ ಬಾರಿಯ ಐಪಿಎಲ್‌ನಲ್ಲಿ ಆಡಲಿದ್ದು, ಈ ಬಾರಿ ಯಾವ ಪ್ಲೇಯರ್ ಅತ್ಯಧಿಕ ರನ್ ಬಾರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಅಲ್ಲದೆ ಈ ಲೀಗ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ದಾಖಲೆ ಯಾರ ಪಾಲಾಗುತ್ತದೆ ಎಂಬುದನ್ನು ನೋಡಬಹುದಾಗಿದೆ.

ವಾರ್ನರ್ ಮುಡಿಗೆ ಅತ್ಯಧಿಕ ಅರ್ಧಶತಕದ ಗರಿ
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿರುವ ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಐಪಿಎಲ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ವಾರ್ನರ್ ಇದುವರೆಗೆ 61 ಬಾರಿ ಈ ಅರ್ಧಶತಕ ಬಾರಿಸಿದ್ದಾರೆ. ವಿರಾಟ್ ಕೊಹ್ಲಿ 50 ಅರ್ಧಶತಕದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಐಪಿಎಲ್‌ನಲ್ಲಿ ವಿರಾಟ್ ಸಾಧನೆ
ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಅವರು 237 ಪಂದ್ಯಗಳಲ್ಲಿ 7263 ರನ್ ಸಿಡಿಸಿದ್ದಾರೆ. ಇದರಲ್ಲಿ 7 ಶತಕ ಹಾಗೂ 50 ಅರ್ಧಶತಕಗಳು ಸೇರಿವೆ. ಅಲ್ಲದೆ 643 ಬೌಂಡರಿ, 234 ಸಿಕ್ಸರ್ ಸಿಡಿಸಿದ್ದಾರೆ. ಈ ವೇಳೆ ಇವರ ಸ್ಟ್ರೈಕ್ ರೇಟ್ 130.02 ಆಗಿದೆ. ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸುವ ವಿಷಯದಲ್ಲಿ ನಂಬರ್-1 ಸ್ಥಾನದಲ್ಲಿದ್ದಾರೆ.
ಐಪಿಎಲ್‌ನಲ್ಲಿ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿರುವ ವಿರಾಟ್ ಕೊಹ್ಲಿ, ಈ ಬಾರಿಯ ಐಪಿಎಲ್‌ನಲ್ಲಿ ಯಾವೆಲ್ಲಾ ದಾಖಲೆಗಳನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಅಲ್ಲದೆ ವಿರಾಟ್ ಕೊಹ್ಲಿ ಸದ್ತ ಭರ್ಜರಿ ಫಾರ್ಮ್‌ನಲ್ಲಿದ್ದು, ಎದುರಾಳಿಗೆ ಕಾಡಲು ಚೇಸಿಂಗ್ ಸ್ಟಾರ್ ಈಗಾಗಲೇ ರೆಡಿಯಾಗಿದ್ದಾರೆ. ಶೀಘ್ರದಲ್ಲಿ ವಿರಾಟ್ ಕೊಹ್ಲಿ ಆರ್‌ಸಿಬಿ ಕ್ಯಾಂಪ್ ಸೇರಲಿದ್ದು, ಅಭ್ಯಾಸವನ್ನು ಆರಂಭಿಸಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications