For Quick Alerts
ALLOW NOTIFICATIONS  
For Daily Alerts
 

IPL 2024: 'ರಾಯಲ್' ಫ್ಯಾನ್ಸ್‌ಗೆ ಗುಡ್ ನ್ಯೂಸ್!; ಆರ್‌ಸಿಬಿ ತಂಡಕ್ಕೆ ಮತ್ತೆ ವಿರಾಟ್ ಕೊಹ್ಲಿ ಕ್ಯಾಪ್ಟನ್?

2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಪಂದ್ಯಾವಳಿ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಮಾರ್ಚ್ 22ರಂದು 17ನೇ ಆವೃತ್ತಿಗೆ ಚಾಲನೆ ಸಿಗುವ ಸಾಧ್ಯತೆ ಇದೆ.

ಇನ್ನು 2008ರಿಂದ ಶ್ರೀಮಂತ ಕ್ರಿಕೆಟ್ ಲೀಗ್ ಪ್ರಾರಂಭವಾದಾಗಿನಿಂದ ಪ್ರಶಸ್ತಿ ಬರ ಎದುರಿಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಚೊಚ್ಚಲ ಬಾರಿಗೆ ಟ್ರೋಫಿ ಎತ್ತಿ ಹಿಡಿಯಲು ಹವಣಿಸುತ್ತಿದೆ. ತಂಡದಲ್ಲಿ ದೊಡ್ಡ ದೊಡ್ಡ ಹೆಸರುಗಳಿದ್ದರೂ, ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ವಿಫಲವಾಗಿದೆ.

IPL 2024: Virat Kohli Likely to Captain For RCB Again?

ಅತಿ ದೊಡ್ಡ ಅಭಿಮಾನಿ ಬಳಗ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಈ ಬಾರಿ ಪ್ರಶಸ್ತಿ ಗೆಲ್ಲುವ ಮೂಲಕ ಅಭಿಮಾನಿಗಳಿಗೆ ದೊಡ್ಡ ಗಿಫ್ಟ್ ನೀಡಲು ಎದುರು ನೋಡುತ್ತಿದೆ.

2024ರ ಐಪಿಎಲ್ ನಿರೀಕ್ಷೆಯು ಇತ್ತೀಚಿಗೆ ನಡೆದ ಮಿನಿ ಹರಾಜಿನಿಂದ ಹೆಚ್ಚಾಗಿದೆ ಮತ್ತು ಎಲ್ಲಾ ಹತ್ತು ಫ್ರಾಂಚೈಸಿಗಳು ಮಹತ್ವದ ಘೋಷಣೆಗಳನ್ನು ಮಾಡುತ್ತಿವೆ.

ಅಭಿಮಾನಿಗಳು ತಮ್ಮ ಮೆಚ್ಚಿನ ತಂಡದ ಬೆಂಬಲಕ್ಕೆ ನಿಲ್ಲುತ್ತಿದ್ದಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕತ್ವವನ್ನು ವಿರಾಟ್ ಕೊಹ್ಲಿ ಮರಳಿ ಪಡೆಯುವ ನಿರೀಕ್ಷೆಯು ಕುತೂಹಲವನ್ನು ಹೆಚ್ಚಿಸಿದೆ.

IPL 2024: Virat Kohli Likely to Captain For RCB Again?

ಈ ಆವೃತ್ತಿಯಲ್ಲಿ ತಮ್ಮ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲುವ ಸಲುವಾಗಿ ಬೆಂಗಳೂರು ತಂಡವನ್ನು ಮುನ್ನಡೆಸಲು ಅನುಭವಿ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಿಂದಿರುಗುವ ಬಗ್ಗೆ ಕೆಲ ವರದಿಗಳು ಸುಳಿವು ನೀಡಿವೆ.

ಇದು ಆರ್‌ಸಿಬಿ ಅಭಿಮಾನಿಗಳಿಗೆ ಅತ್ಯಂತ ಖುಷಿಯ ವಿಚಾರವೆನಿಸಿದರೂ, ವಿರಾಟ್ ಕೊಹ್ಲಿ ಮತ್ತೆ ನಾಯಕತ್ವದ ಕ್ಯಾಪ್ ತೊಡಲು ಒಪ್ಪಿಕೊಳ್ಳುತ್ತಾರೆಯೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಉದ್ಘಾಟನಾ ಆವೃತ್ತಿಯಿಂದಲೂ ಆರ್‌ಸಿಬಿ ತಂಡದ ಪರ ಆಡುತ್ತಿರುವ 35 ವರ್ಷದ ಕ್ರಿಕೆಟ್ ಸೆನ್ಸೇಷನ್ ವಿರಾಟ್ ಕೊಹ್ಲಿ ಅವರನ್ನು ನಾಯಕನಾಗಿ ಮರುಸ್ಥಾಪಿಸಲು ಆರ್‌ಸಿಬಿ ಮ್ಯಾನೇಜ್‌ಮೆಂಟ್ ಚಿಂತಿಸುತ್ತಿದೆ ಎಂದು ಹೇಳಲಾಗುತ್ತಿದೆ.

ದಕ್ಷಿಣ ಆಫ್ರಿಕಾ ಬ್ಯಾಟರ್ ಫಾಫ್ ಡು ಪ್ಲೆಸಿಸ್ ಪ್ರಸ್ತುತ ಆರ್‌ಸಿಬಿ ನಾಯಕತ್ವವನ್ನು ಹೊಂದಿದ್ದಾರೆ. 2022ರ ಐಪಿಎಲ್ ನಂತರ, ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್‌ನ ಮೇಲೆ ಮಾತ್ರ ಕೇಂದ್ರೀಕರಿಸಲು ನಿರ್ಧರಿಸಿದಾಗ ಫಾಫ್ ಡು ಪ್ಲೆಸಿಸ್ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡರು.

2023ರ ಐಪಿಎಲ್ ಋತುವಿನಲ್ಲಿ ವಿರಾಟ್ ಕೊಹ್ಲಿ 14 ಇನ್ನಿಂಗ್ಸ್‌ಗಳಿಂದ 53.25ರ ಸರಾಸರಿಯಲ್ಲಿ 139ರ ಸ್ಟ್ರೈಕ್ ರೇಟ್‌ನೊಂದಿಗೆ 639 ರನ್ ಗಳಿಸುವ ಮೂಲಕ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದರು.

ಗಮನಾರ್ಹವಾಗಿ, ವಿರಾಟ್ ಕೊಹ್ಲಿ ಅವರು ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟನ್ಸ್ ತಂಡದ ವಿರುದ್ಧ ನಿರ್ಣಾಯಕ ಪಂದ್ಯಗಳಲ್ಲಿ ಸತತ ಎರಡು ಶತಕಗಳನ್ನು ಗಳಿಸಿದರು.

ಅದೃಷ್ಟದ ಬದಲಾವಣೆಯ ನಿರೀಕ್ಷೆಯಲ್ಲಿರುವ ಲಾಯಲ್ ಅಭಿಮಾನಿಗಳು, ಆರ್‌ಸಿಬಿ ತಂಡವನ್ನು ಮತ್ತೆ ಮುನ್ನಡೆಸಬೇಕೇ ಅಥವಾ ಆಟಗಾರನಾಗಿ ಮುಂದುವರಿಯಬೇಕೇ ಎಂಬ ಬಗ್ಗೆ ವಿರಾಟ್ ಕೊಹ್ಲಿಯ ನಿರ್ಧಾರವನ್ನು ಕುತೂಹಲದಿಂದ ಕಾಯುತ್ತಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಸಾಧ್ಯತೆಯು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ತಪ್ಪಿಸಿಕೊಳ್ಳಲಾಗದ ಐಪಿಎಲ್ ಗೆಲುವಿನ ನಿರೀಕ್ಷೆಯನ್ನು ಹೆಚ್ಚಿಸುತ್ತದೆ.

2024ರ ಐಪಿಎಲ್‌ಗಾಗಿ ಆರ್‌ಸಿಬಿ ಪೂರ್ಣ ತಂಡ

ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ಡಾಗರ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

Story first published: Wednesday, January 31, 2024, 8:41 [IST]
Other articles published on Jan 31, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+