Virat Kohli: ಭಾರತೀಯ ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ
ಸೋಮವಾರ, ಮಾರ್ಚ್ 25ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 6ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಪಂಜಾಬ್ ಕಿಂಗ್ಸ್ ನೀಡಿದ್ದ 177 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡ ವಿರಾಟ್ ಕೊಹ್ಲಿ ಮತ್ತು ದಿನೇಶ್ ಕಾರ್ತಿಕ್ ಅವರ ವಿರೋಚಿತ ಬ್ಯಾಟಿಂಗ್ ನೆರವಿನಿಂದ 19.2 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 178 ರನ್ ಗಳಿಸಿ ಐಪಿಎಲ್ 2024ರ ಮೊದಲ ಗೆಲುವು ಪಡೆಯಿತು.

ಇದೇ ವೇಳೆ ಭಾರತೀಯ ಕ್ರಿಕೆಟ್‌ನ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರನ್ನು ಹಿಂದಿಕ್ಕಿ ಪುರುಷರ ಟಿ20 ಸ್ವರೂಪದಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಭಾರತೀಯ ಆಟಗಾರ ಎನಿಸಿಕೊಂಡರು.
ಐಪಿಎಲ್ 2024ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಡುವಿನ ಹಣಾಹಣಿಯಲ್ಲಿ ವಿರಾಟ್ ಕೊಹ್ಲಿ ಈ ದಾಖಲೆ ಮಾಡಿದ್ದಾರೆ.
35 ವರ್ಷದ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್‌ನ ಬ್ಯಾಟರ್‌ಗಳಾದ ಜಾನಿ ಬೈರ್‌ಸ್ಟೋವ್ ಮತ್ತು ಶಿಖರ್ ಧವನ್ ಅವರ ಕ್ಯಾಚ್‌ಗಳನ್ನು ತೆಗೆದುಕೊಂಡು ಟಿ20 ಸ್ವರೂಪದಲ್ಲಿ ತಮ್ಮ 174ನೇ ಕ್ಯಾಚ್ ಅನ್ನು ಪೂರ್ಣಗೊಳಿಸಿದರು.

ಇನ್ನು ತಮ್ಮ ಹೆಸರಿಗೆ 172 ಕ್ಯಾಚ್‌ಗಳನ್ನು ಹೊಂದಿರುವ ಭಾರತ ಮತ್ತು ಸಿಎಸ್‌ಕೆ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದರು.
ಭಾರತ ತಂಡದ ನಾಯಕ ರೋಹಿತ್ ಶರ್ಮಾ 167 ಕ್ಯಾಚ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಭಾರತದ ಬ್ಯಾಟ್ಸ್‌ಮನ್‌ಗಳಾದ ಮನೀಶ್ ಪಾಂಡೆ ಮತ್ತು ಸೂರ್ಯಕುಮಾರ್ ಯಾದವ್ ಕ್ರಮವಾಗಿ 146 ಮತ್ತು 136 ಕ್ಯಾಚ್‌ಗಳೊಂದಿಗೆ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.
ಒಟ್ಟಾರೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ಕೀರನ್ ಪೊಲಾರ್ಡ್ 362 ಕ್ಯಾಚ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ಬ್ಯಾಟರ್ ಡೇವಿಡ್ ಮಿಲ್ಲರ್ 290 ಕ್ಯಾಚ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ವೆಸ್ಟ್‌ಇಂಡೀಸ್‌ನ ಮಾಜಿ ಆಟಗಾರ ಡ್ವೇನ್ ಬ್ರಾವೋ ಟಿ20 ಮಾದರಿಯಲ್ಲಿ 271 ಕ್ಯಾಚ್‌ಗಳೊಂದಿಗೆ ವಿಶ್ವದಲ್ಲಿಯೇ ಮೂರನೇ ಸ್ಥಾನದಲ್ಲಿದ್ದಾರೆ.
ಟಾಸ್ ಗೆದ್ದ ಆರ್‌ಸಿಬಿ ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಪ್ರವಾಸಿ ತಂಡದ ಬ್ಯಾಟರ್‌ಗಳು ಉತ್ತಮ ಆರಂಭವನ್ನು ಪಡೆದರು. ಆದರೆ ಅವರಲ್ಲಿ ಯಾರೂ ದೊಡ್ಡ ಮೊತ್ತವಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ.
ನಾಯಕ ಶಿಖರ್ ಧವನ್ 37 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 45 ರನ್, ಜಿತೇಶ್ ಶರ್ಮಾ 20 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್ ಮೂಲಕ 27 ರನ್ ಮತ್ತು ಸ್ಯಾಮ್ ಕರ್ರಾನ್ 17 ಎಸೆತಗಳಲ್ಲಿ 23 ರನ್ ಗಳಿಸಿ ಯೋಗ್ಯವಾದ ಆಟವಾಡಿದರು. ಅಂತಿಮವಾಗಿ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ ಸವಾಲಿನ 176 ರನ್ ಕಲೆಹಾಕಿತು.
ಇನ್ನು ಆರ್‌ಸಿಬಿ ತಂಡ ಕೂಡ ಉತ್ತಮ ಪಡೆದುಕೊಂಡಿತು. ಆದರೆ ನಾಯಕ ಫಾಫ್ ಡು ಪ್ಲೆಸಿಸ್ ಕೇವಲ 3 ರನ್ ಗಳಿಸಿ ಔಟಾದರು. ಮಾಜಿ ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 77 ರನ್ ಬಾರಿಸಿದರು.
ಕೊನೆಯಲ್ಲಿ ದಿನೇಶ್ ಕಾರ್ತಿಕ್ 10 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 28 ರನ್ ಮತ್ತು ಮಹಿಪಾಲ್ ಲೊಮ್ರೋರ್ 8 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 17 ರನ್ ಬಾರಿಸಿ ಇನ್ನೂ 4 ಎಸೆತಗಳು ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications