IPL 2024: ಚಿನ್ನಸ್ವಾಮಿ ಸಾಮ್ರಾಜ್ಯದಲ್ಲಿ ರಾಜ್ಯಭಾರ ಮಾಡಿದ ವಿರಾಟ್; KKRಗೆ ಸವಾಲಿನ ಗುರಿ ನೀಡಿದ RCB
ಶುಕ್ರವಾರ, ಮಾರ್ಚ್ 29ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ವಿರುದ್ಧ ಸವಾಲಿನ ಮೊತ್ತವನ್ನು ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ ವಿರಾಟ್ ಕೊಹ್ಲಿ ಅವರ ಅಮೋಘ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಸ್ಕೋರ್ ಬೋರ್ಡ್‌ನಲ್ಲಿ 182 ರನ್‌ಗಳನ್ನು ಗಳಿಸಿದೆ.

ಆರ್‌ಸಿಬಿ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಲು ಪ್ರಯತ್ನಿಸಿದರು. ಆದರೆ, 2 ಓವರ್‌ಗಳಲ್ಲಿ 17 ರನ್‌ಗಳಾಗಿದ್ದಾಗ 8 ರನ್ ಗಳಿಸಿ ಆಡುತ್ತಿದ್ದ ಫಾಫ್ ಡು ಪ್ಲೆಸಿಸ್ ವಿಕೆಟ್ ಒಪ್ಪಿಸಿದರು.
ನಂತರ ಬಂದ ಕ್ಯಾಮೆರಾನ್ ಗ್ರೀನ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರು ಮತ್ತು 21 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 33 ರನ್ ಗಳಿಸಿ ಔಟಾದರು. ಬಳಿಕ ಕ್ರೀಸ್‌ಗೆ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ 19 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 28 ರನ್ ಗಳಿಸಿ ದೊಡ್ಡ ಶಾಟ್ ಬಾರಿಸಲು ಹೋಗಿ ಕ್ಯಾಚ್ ನೀಡಿದರು.

ನೆರೆದಿದ್ದ ತವರಿನ ಅಭಿಮಾನಿಗಳ ಎದುರು ಕೊನೆಯವರೆಗೂ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 83 ರನ್ ಬಾರಿಸಿದರು.
ಆದರೆ, ಅನುಜ್ ರಾವತ್ 3 ರನ್ ಮತ್ತು ರಜತ್ ಪಾಟಿದಾರ್ 3 ರನ್ ಗಳಿಸಿ ವಿಕೆಟ್ ನೀಡಿದರು. ಕೊನೆಯಲ್ಲಿ ದಿನೇಶ್ ಕಾರ್ತಿಕ್ ಮತ್ತೊಮ್ಮೆ ಅಬ್ಬರಿಸಿದರು. ಕೇವಲ 8 ಎಸೆತಗಳಲ್ಲಿ 3 ಸಿಕ್ಸರ್‌ಗಳ ಸಮೇತ 20 ರನ್ ಸಿಡಿಸಿದರು.

ಬೌಲಿಂಗ್‌ನಲ್ಲಿ ಕೆಕೆಆರ್ ತಂಡದ ಪರ ಆಂಡ್ರೆ ರಸೆಲ್ 4 ಓವರ್‌ಗಳಲ್ಲಿ 29 ರನ್ ನೀಡಿ 2 ವಿಕೆಟ್ ಪಡೆದರೆ, ಹರ್ಷಿತ್ ರಾಣಾ 4 ಓವರ್‌ಗಳಲ್ಲಿ 39 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಸುನಿಲ್ ನರೈನ್ ಕೇವಲ 1 ವಿಕೆಟ್ ಪಡೆದರು. ಐಪಿಎಲ್‌ನ ದುಬಾರಿ ಆಟಗಾರ ಮಿಚೆಲ್ ಸ್ಟಾರ್ಕ್ 4 ಓವರ್‌ಗಳಲ್ಲಿ 47 ರನ್ ಬಿಟ್ಟುಕೊಟ್ಟು ದುಬಾರಿಯಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications