IPL 2025 SRH vs DC: ಹೈದರಾಬಾದ್‌ಗೆ ಮಣ್ಣು ಮುಕ್ಕಿಸಿದ ಡೆಲ್ಲಿ
ವಿಶಾಖಪಟ್ಟಣಂ ಡಾ ವೈ ಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಐಪಿಎಲ್ 2025 ರ 10 ನೇ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮಣ್ಣು ಮುಕ್ಕಿಸಿದೆ. ಹೈದರಾಬಾದ್ ತಂಡದ ವಿರುದ್ಧ ಡೆಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಐಪಿಎಲ್ 2025 ರಲ್ಲಿ ಡೆಲ್ಲಿ ತಂಡ ಆಡಿರುವ ಮೂರು ಪಂದ್ಯದಲ್ಲಿ 2 ರಲ್ಲಿ ಗೆದ್ದರೆ, 1 ರಲ್ಲಿ ಸೋಲು ಕಂಡಿತ್ತು. ಇತ್ತ ಅದ್ಧೂರಿ ಆರಂಭ ಕಂಡ ಸನ್‌ರೈಸರ್ಸ್ ಹೈದರಾಬಾದ್ ಮೊದಲ ಪಂದ್ಯದಲ್ಲಿ ಗೆಲುವಿನ ನಗೆ ಬೀರಿದರೆ, ಸತತ ಎರಡರಲ್ಲಿ ಸೋಲು ಅನುಭವಿಸಿದೆ. ಡೆಲ್ಲಿ ಬೌಲಿಂಗ್ ದಾಳಿಗೆ ಪತರುಗುಟ್ಟಿದ ಹೈದರಾಬಾದ್ 18.4 ಓವರ್‍ಗಳಲ್ಲಿ 163 ರನ್‌ಗಳಿಗೆ ಆಲೌಟಾಯಿತು. ಹೈದರಾಬಾದ್ ನೀಡಿದ 164 ರನ್‌ಗಳನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೇವಲ 16 ಓವರ್‍ಗಳಲ್ಲಿ 2 ವಿಕೆಟ್ ನಷ್ಟಕ್ಕೆ 166 ಗಳಿಸಿ ಜಯ ಕಂಡಿತು.

ಸನ್‌ರೈಸರ್ಸ್ ಹೈದರಾಬಾದ್ ನೀಡಿದ 164 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸ್ಫೋಟಕ ಆರಂಭ ಪಡೆಯಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ಮೊದಲ ವಿಕೆಟ್‌ಗೆ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಮತ್ತು ಫಾಫ್ ಡು ಪ್ಲೆಸಿಸ್ ಜೋಡಿ 81 ರನ್‌ಗಳ ಆರಂಭಿಕ ಜೊತೆಯಾಟ ಆಡಿದರು. ಈ ಸಂದರ್ಭದಲ್ಲಿ ಫಾಫ್ ಡು ಪ್ಲೆಸಿಸ್ ಅರ್ಧಶತಕ ಬಾರಿಸಿ ಮಿಂಚಿದರು. ಫಾಫ್ ಅವರು 27 ಎಸೆತಗಳಲ್ಲಿ ತಲಾ 3 ಬೌಂಡರಿ ಮತ್ತು ಸಿಕ್ಸರ್ ನೆರವಿನಿಂದ 50 ರನ್ ಗಳಿಸಿ ವಿಕೆಟ್ ಕಳೆದುಕೊಂಡರು.
ಜೇಕ್ ಫ್ರೇಸರ್-ಮೆಕ್‌ಗುರ್ಕ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡುವ ಮೂಲಕ ಡೆಲ್ಲಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು. ಜೇಕ್ ಫ್ರೇಸರ್-ಮೆಕ್‌ಗುರ್ಕ್ ಅವರು 38 ರನ್‌ಗಳಿಗೆ ಔಟಾದರು. ನಂತರ ಬಂದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ಕೆಎಲ್ ರಾಹುಲ್ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲವಾದರು. ರಾಹುಲ್ ಕೇವಲ 15 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು.
ಕೆಎಲ್ ರಾಹುಲ್ ಔಟಾದ ನಂತರ ಒಂದಾದ ಅಭಿಷೇಕ್ ಪೋರೆಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಜವಾಬ್ದಾರಿಯುತ ಇನ್ನಿಂಗ್ಸ್ ಆಡುವ ಮೂಲಕ ಡೆಲ್ಲಿಗೆ ಗೆಲುವು ತಂದು ಕೊಟ್ಟರು. ಅಭಿಷೇಕ್ ಪೋರೆಲ್ ಅಜೇಯ 34 ರನ್ ಬಾರಿಸಿದರೆ, ಟ್ರಿಸ್ಟಾನ್ ಸ್ಟಬ್ಸ್ ಅಜೇಯ 21 ರನ್ ಗಳಿಸಿದರು. ಸನ್‌ರೈಸರ್ಸ್ ಹೈದರಾಬಾದ್ ಪರ ಜೀಶನ್ ಅನ್ಸಾರಿ 3 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications