IPL 2025: ತವರಿನಲ್ಲಿ ಗೆಲುವಿನ ಖಾತೆ ತೆರೆದ ಮುಂಬೈ ಇಂಡಿಯನ್ಸ್
ಐಪಿಎಲ್ 2025 ರಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ತವರಿನಲ್ಲಿ ಗೆಲುವಿನ ಖಾತೆ ತೆರೆದಿದೆ. ವಾಖೆಂಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025 ರ 12 ನೇ ಪಂದ್ಯದಲ್ಲಿ ಅಜಿಂಕ್ಯಾ ರಹಾನೆ ಮುನ್ನಡೆಸುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿರುವ ಮುಂಬೈ ಇಂಡಿಯನ್ಸ್ ತಂಡ ಹ್ಯಾಟ್ರಿಕ್ ಸೋಲಿನಿಂದ ತಪ್ಪಿಸಿಕೊಂಡಿದೆ. ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ತವರಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮೇಲೆ ಪ್ರಾಬಲ್ಯ ಸಾಧಿಸಿದ ಮುಂಬೈ ಇಂಡಿಯನ್ಸ್ ಬೌಲರ್‍ಗಳು ಆಲೌಟ್ ಮಾಡಿದರು. ಪರಿಣಾಮ ಕೋಲ್ಕತ್ತಾ ನೈಟ್ ರೈಡರ್ಸ್ 116 ರನ್‌ಗಳಿಗೆ ಸರ್ವಪತನವಾಯಿತು. ಕೆಕೆಆರ್‍ನಿಂದ 117 ರನ್‌ಗಳ ಸುಲಭ ಗುರಿ ಪಡೆದ ಮುಂಬೈ ಇಂಡಿಯನ್ಸ್ 2 ವಿಕೆಟ್ ಕಳೆದುಕೊಂಡು 12.5 ಓವರ್‍ಗಳಲ್ಲಿ 121 ರನ್ ಗಳಿಸಿ ಗೆಲುವು ಸಾಧಿಸಿತು.

ಕೆಕೆಆರ್ ನೀಡಿದ 117 ರನ್‌ಗಳ ಸುಲಭ ಗೆಲುವಿನ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಬ್ಯಾಟರ್‍ಗಳು ತವರಿನಲ್ಲಿ ಬಿರುಸಿನ ಬ್ಯಾಟಿಂಗ್ ಮಾಡಿದರು. ರೋಹಿತ್ ಶರ್ಮಾ ಮತ್ತು ರಯಾನ್ ರಿಕಲ್ಟನ್ ಇನ್ನಿಂಗ್ಸ್ ಪ್ರಾರಂಭಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 5.2 ಓವರ್‌ಗಳಲ್ಲಿ 51 ರನ್‌ಗಳ ಜೊತೆಯಾಟವಾಡಿದರು. ರೋಹಿತ್ 13 ರನ್ ಗಳಿಸಿದ್ದಾಗ ಆಂಡ್ರೆ ರಸೆಲ್ ಬೌಲಿಂಗ್‌ನಲ್ಲಿ ಹರ್ಷಿತ್ ರಾಣಾಗೆ ಕ್ಯಾಚ್ ನೀಡಿ ಔಟಾದರು. ಇದಾದ ನಂತರ ರಿಕಲ್ಟನ್ ತಮ್ಮ ಅರ್ಧಶತಕವನ್ನು ಪೂರೈಸಿದರು. ವಿಲ್ ಜ್ಯಾಕ್ 16 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು.
ರಿಕಲ್ಟನ್ ಅವರು 33 ಎಸೆತಗಳಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 50 ರನ್‌ಗಳನ್ನು ಪೂರ್ಣಗೊಳಿಸಿದರು. ಮುಂಬೈ ಪರ ರಿಕಲ್ಟನ್ 44 ಎಸೆತಗಳಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್‌ಗಳೊಂದಿಗೆ ಅಜೇಯ 62 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ ಅಜೇಯ 27 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಕೆಕೆಆರ್ ಪರ ರಸೆಲ್ 2 ವಿಕೆಟ್ ಪಡೆದರು.
ಇದಕ್ಕೂ ಮುನ್ನ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 2 ರನ್‌ಗಳಿಗೆ 2 ವಿಕೆಟ್‌ಗಳನ್ನು ಕಳೆದುಕೊಂಡು ಕಳಪೆ ಆರಂಭವನ್ನು ಕಂಡಿತು. ಮುಂದುರೆದಂತೆ ಕೆಕೆಆರ್ 45 ರನ್‌ಗಳನ್ನು ತಲುಪುವ ಹೊತ್ತಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿದ್ದರು. ಕೆಕೆಆರ್ ಪರ ಅಂಗ್ಕ್ರಿಶ್ ರಘುವಂಶಿ (26) ಗರಿಷ್ಠ ಸ್ಕೋರರ್ ಆದರು. ಇವರಲ್ಲದೆ, ರಮಣದೀಪ್ ಸಿಂಗ್ 22 ರನ್, ಮನೀಶ್ ಪಾಂಡೆ 19 ರನ್ ಮತ್ತು ರಿಂಕು ಸಿಂಗ್ 17 ರನ್ ಕೊಡುಗೆ ನೀಡಿದರು.
ಮುಂಬೈ ಪರ ಪಾದಾರ್ಪಣೆ ಮಾಡಿದ 23 ವರ್ಷದ ಅಶ್ವಿನಿ ಕುಮಾರ್ ಮೊದಲ ಎಸೆತದಲ್ಲೇ ವಿಕೆಟ್ ಪಡೆದರು. ಅವರು 3 ಓವರ್‌ಗಳಲ್ಲಿ 24 ರನ್‌ಗಳಿಗೆ 4 ವಿಕೆಟ್‌ಗಳನ್ನು ಉರುಳಿಸಿದರು. ಇವರಲ್ಲದೆ ದೀಪಕ್ ಚಹಾರ್ 2 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ, ಮಿಚೆಲ್ ಸ್ಯಾಂಟ್ನರ್, ಟ್ರೆಂಟ್ ಬೌಲ್ಟ್ ಮತ್ತು ವಿಘ್ನೇಶ್ ಪುತ್ತೂರ್ ತಲಾ 1 ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications