Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Turning Point: ಸುಲಭ ಗುರಿ ಬೆನ್ನಟ್ಟಿದ ಕೋಲ್ಕತ್ತಾ ಎಡುವಿದ್ದೆಲ್ಲಿ?

ತವರಿನಲ್ಲಿ ಗೆಲುವಿನ ಹುಡುಕಾಟದಲ್ಲಿದ್ದ ಪಂಜಾಬ್ ಕಿಂಗ್ಸ್ ತಂಡಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ಸೋಲಿಸಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ ಐಪಿಎಲ್ ಇತಿಹಾಸದಲ್ಲೇ ಕಡಿಮೆ ಸ್ಕೋರ್ ಡಿಫೆಂಡ್ ಮಾಡಿದ ದಾಖಲೆಯನ್ನು ಮಾಡಿದೆ. ಪಂಜಾಬ್ ಕಿಂಗ್ಸ್ ತಂಡ ಕೇವಲ 112 ರನ್‌ಗಳನ್ನು ಡಿಫೆಂಡ್ ಮಾಡುವ ಮೂಲಕ 16 ರನ್‌ಗಳಿಂದ ಗೆಲುವಿನ ನಗೆ ಬೀರಿದೆ.

ಪಂಜಾಬ್ ಕಿಂಗ್ಸ್ ನೀಡಿದ 112 ರನ್‌ಗಳ ಗೆಲುವಿನ ಗುರಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಸುಲಭವಾಗಿ ಬೆನ್ನಟ್ಟುತ್ತದೆ ಎಂದು ಭಾವಿಸಲಾಗಿತ್ತು. ಆದರೆ ಪಂಜಾಬ್ ತಂಡದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಎಲ್ಲಾ ಲೆಕ್ಕಚಾರವನ್ನು ಉಲ್ಟಾ ಮಾಡಿದರು. ಕೋಲ್ಕತ್ತಾ ತಂಡವನ್ನು ಚಹಾಲ್ ತಮ್ಮ ಸ್ಪಿನ್ ಬೌಲಿಂಗ್ ಮೂಲಕ ಕಟ್ಟಿ ಹಾಕಿದರು. ಇದು ಪಂದ್ಯಕ್ಕೆ ಮಹತ್ವದ ತಿರುವು ಕೊಟ್ಟಿತು. ಈ ಬಗ್ಗೆ ಇಲ್ಲಿದೆ ಮಾಹಿತಿ.

IPL 2025 31st Match What is the turning point of punjab Kings vs Kolkata Knight Riders

ಪಂದ್ಯದ ಮಧ್ಯದಲ್ಲಿ ಪಂಜಾಬ್ ಕಿಂಗ್ಸ್ ಕಳಪೆ ಪ್ರದರ್ಶನ ನೀಡಿತು. ಆದರೆ ಹೇಗೋ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸುವ ಮೂಲಕ ಪಂಜಾಬ್ ಕಿಂಗ್ಸ್ ಗೆಲುವಿನ ಹಾದಿಗೆ ಮರಳಿತು. ಪಂಜಾಬ್ ಕೈಯಿಂದ ಜಾರಿ ಹೋಗಿದ್ದ ಪಂದ್ಯವನ್ನು ಯುಜ್ವೇಂದ್ರ ಚಹಾಲ್ ಮರಳಿ ಪಡೆದರು. ಚಹಾಲ್ ತನ್ನ ಮೂರನೇ ಓವರ್‌ನಲ್ಲಿ ತನ್ನ ಸ್ಪಿನ್ ಮ್ಯಾಜಿಕ್ ತೋರಿಸಿದರು.

ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ವಿಕೆಟ್ ಪಡೆದಿರುವ ಚಹಾಲ್, ಪಂದ್ಯದ ದಿಕ್ಕನ್ನು ಬದಲಾಯಿಸಿದರು. ಚಹಾಲ್ ಎಸೆತದಲ್ಲಿ ರಿಂಕು ಸಿಂಗ್ ಸ್ಟಂಪ್ ಔಟಾದರು. ನಂತರದ ಎಸೆತದಲ್ಲಿಯೇ, ರಮಣದೀಪ್ ಸಿಂಗ್ ವಿಕೆಟ್ ಕಳೆದುಕೊಂಡರು. 74 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಕೆಕೆಆರ್ ಸಂಕಷ್ಟದಲ್ಲಿತು. ಇದಾದ ಕೇವಲ 2 ರನ್ ಅಂತರದಲ್ಲಿ 2 ವಿಕೆಟ್ ಕಳೆದುಕೊಂಡಿತ್ತು. ಇಂತಹ ಪರಿಸ್ಥಿತಿಯಲ್ಲಿ 76 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡು ಕೆಕೆಆರ್ ಬ್ಯಾಟಿಂಗ್ ಕ್ರಮಾಂಕ ತತ್ತರಿಸಿತು. ಇದಕ್ಕೆ ಪ್ರಮುಖ ಕಾರಣ ಪಂಜಾಬ್ ಕಿಂಗ್ಸ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್.

ಕೋಲ್ಕತ್ತಾ ನೈಟ್ ರೈಡರ್ಸ್ ಎದುರು ಯುಜ್ವೇಂದ್ರ ಚಹಾಲ್ ಒಟ್ಟು 4 ಓವರ್‍‌ಗಳನ್ನು ಮಾಡಿ 28 ರನ್ ನೀಡಿದರು. ಆದರೆ ಪ್ರಮುಖ 4 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಪಂಜಾಬ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

Story first published: Tuesday, April 15, 2025, 23:30 [IST]
Other articles published on Apr 15, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+