IPL 2025 CSK: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಈ 3 ಪ್ಲೇಯರ್ಸ್ ಮೇಲೆ ಎಲ್ಲರ ಚಿತ್ತ
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮಾರ್ಚ್ 23 ರಂದು ಸಾಂಪ್ರದಾಯಿಕ ಎದುರಾಳಿ ಮುಂಬೈ ಇಂಡಿಯನ್ಸ್ (ಎಂಐ) ವಿರುದ್ಧದ ಪಂದ್ಯದೊಂದಿಗೆ ಐಪಿಎಲ್ 2025ರಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಐದು ಬಾರಿಯ ಚಾಂಪಿಯನ್ ಸಿಎಸ್‌ಕೆ ಕಳೆದ ಸೀಸನ್‌ನಲ್ಲಿ ಪ್ಲೇಆಫ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು. ಈಗ ಐಪಿಎಲ್ 2025ರಲ್ಲಿ ಉತ್ತಮ ಪ್ರದರ್ಶನ ನೀಡಲು ಸಿಎಸ್‌ಕೆ ಆಟಗಾರರು ಉತ್ಸುಕರಾಗಿದ್ದಾರೆ. ಐಪಿಎಲ್ 2025 ರಲ್ಲಿ ಸಿಎಸ್‌ಕೆ ತಂಡದ ಮೂವರು ಆಟಗಾರರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಎಲ್ಲರ ಕಣ್ಣುಗಳು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಬ್ಯಾಟರ್ ರಚಿನ್ ರವೀಂದ್ರ ಮೇಲಿದೆ. ನ್ಯೂಜಿಲೆಂಡ್‌ನ ಈ ಯುವ ಕ್ರಿಕೆಟಿಗ ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅವರು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಇದರೊಂದಿಗೆ ಅವರು ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಅವರು 4 ಇನ್ನಿಂಗ್ಸ್‌ಗಳಲ್ಲಿ 65.75 ಸರಾಸರಿ ಮತ್ತು 106.47 ಸ್ಟ್ರೈಕ್ ರೇಟ್‌ನಲ್ಲಿ 263 ರನ್ ಕಲೆ ಹಾಕಿದ್ದರು. ಈ ಅವಧಿಯಲ್ಲಿ ಅವರು ಎರಡು ಶತಕಗಳನ್ನು ಗಳಿಸಿದರು. ಆದರೆ, ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ ಸೋಲನ್ನು ಎದುರಿಸಬೇಕಾಯಿತು.

ರವೀಂದ್ರ ಜಡೇಜಾ
ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಗೂ ಮುನ್ನ, ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಭವಿಷ್ಯದ ಬಗ್ಗೆ ಹಲವು ಪ್ರಶ್ನಾರ್ಥಕ ಚಿಹ್ನೆಗಳು ಇದ್ದವು. ಈ ಮೆಗಾ ಟೂರ್ನಿಗೂ ಮುನ್ನ, ಅವರ ಅಂತಾರಾಷ್ಟ್ರೀಯ ವೃತ್ತಿಜೀವನ ಬಹುತೇಕ ಕೊನೆಗೊಳ್ಳಬಹುದು ಎಂದು ಕೆಲವು ವರದಿಗಳು ತಿಳಿಸಿವೆ. ಆದಾಗ್ಯೂ, 2025 ರ ಚಾಂಪಿಯನ್ಸ್ ಟ್ರೋಫಿ ಗೆಲುವಿನ ಅಭಿಯಾನದಲ್ಲಿ ಜಡೇಜಾ ಅದ್ಭುತ ಪ್ರದರ್ಶನ ನೀಡಿದ್ದರು. 5 ಇನ್ನಿಂಗ್ಸ್‌ಗಳಲ್ಲಿ, ಅವರು 36.60 ಸರಾಸರಿಯಲ್ಲಿ 5 ವಿಕೆಟ್‌ಗಳನ್ನು ಪಡೆದಿದ್ದರು. ಈಗ ಐಪಿಎಲ್ 2025ರಲ್ಲಿ ಜಡೇಜಾ ಅವರ ಪ್ರದರ್ಶನದ ಮೇಲೆ ಎಲ್ಲರ ಕಣ್ಣಿದೆ.
ರವೀಂದ್ರ ಜಡೇಜಾ ಚಾಂಪಿಯನ್ಸ್ ಟ್ರೋಫಿಯ ಗುಂಪು ಹಂತದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ತಲಾ ಒಂದು ವಿಕೆಟ್ ಪಡೆದಿದ್ದರು. ಆದರೆ ಹೆಚ್ಚು ರನ್ ಬಿಟ್ಟುಕೊಡಲಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿಫೈನಲ್‌ನಲ್ಲಿ ಅವರು ಮಾರ್ನಸ್ ಲ್ಯಾಬುಶೇನ್ ಮತ್ತು ಜೋಶ್ ಇಂಗ್ಲಿಸ್ ಅವರನ್ನು ಔಟ್ ಮಾಡುವ ಮೂಲಕ 40 ರನ್‌ಗಳಿಗೆ 2 ವಿಕೆಟ್ ಕಬಳಿಸಿದರು. ಕಿವೀಸ್ ಪಡೆ ವಿರುದ್ಧದ ಫೈನಲ್‌ನಲ್ಲಿ ಜಡೇಜಾ 30 ಬಿಟ್ಟುಕೊಟ್ಟು 1 ವಿಕೆಟ್ ಉರುಳಿಸಿದರು. ನಂತರ ಬೌಂಡರಿ ಬಾರಿಸುವ ಮೂಲಕ ಭಾರತವನ್ನು ಚಾಂಪಿಯನ್ ಮಾಡಿದರು. ಐಪಿಎಲ್ 2023ರಲ್ಲೂ ಇದೇ ರೀತಿ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿ ಸಿಎಸ್‌ಕೆ ಪ್ರಶಸ್ತಿ ಗೆಲ್ಲಲು ಸಹಾಯ ಮಾಡಿದರು.
ಶಿವಂ ದುಬೆ
ಮುಂಬೈನ ಬ್ಯಾಟಿಂಗ್ ಆಲ್‌ರೌಂಡರ್ ಶಿವಂ ದುಬೆ ಕೂಡ ಚೆನ್ನೈ ಸೂಪರ್ ಕಿಂಗ್ಸ್ ಪರ ಅಬ್ಬರಿಸಲು ಸಜ್ಜಾಗಿದ್ದಾರೆ. ದುಬೆ ಇತ್ತೀಚೆಗೆ ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 2024-25ರ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್‌ನಲ್ಲಿ ಕೋಲ್ಕತ್ತಾದಲ್ಲಿ ಹರಿಯಾಣ ವಿರುದ್ಧ ಅವರು 28 ಮತ್ತು 48 ರನ್ ಗಳಿಸಿದರು. ಸೆಮಿಫೈನಲ್‌ನಲ್ಲಿ ಅವರು ವಿದರ್ಭ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗಳನ್ನು ಕಬಳಿಸಿದರು.
ರಣಜಿ ಟ್ರೋಫಿ ನಾಕೌಟ್ ಪಂದ್ಯಗಳಿಗೂ ಮುನ್ನ, ಇಂಗ್ಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಟಿ20 ಸರಣಿಯಲ್ಲಿ ದುಬೆ ಸ್ಥಿರ ಪ್ರದರ್ಶನ ನೀಡಿದ್ದರು. ಪುಣೆಯಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ದುಬೆ 34 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 53 ರನ್ ಗಳಿಸಿದರು. ಮುಂಬೈನಲ್ಲಿ ನಡೆದ 5ನೇ ಟಿ20 ಪಂದ್ಯದಲ್ಲಿ ಅವರು 13 ಎಸೆತಗಳಲ್ಲಿ 30 ರನ್ ಗಳಿಸಿದರು. ಬೌಲಿಂಗ್‌ನಲ್ಲಿಯೂ ಎರಡು ಪ್ರಮುಖ ವಿಕೆಟ್‌ಗಳನ್ನು ಪಡೆದಿದ್ದರು. ಶಿವಂ ದುಬೆ ಈಗ ಐಪಿಎಲ್ 2025ರಲ್ಲಿ ಸಿಎಸ್‌ಕೆ ಪರ ಆಡುವ ಮೂಲಕ ಸಂಚಲನ ಮೂಡಿಸಲು ರೆಡಿಯಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications